ಅರುಣೋದಯ ಸಮುದಾಯ ಭವನ ಉದ್ಘಾಟನೆ
Team Udayavani, Apr 17, 2017, 3:36 PM IST
ಮಡಿಕೇರಿ: ಪ್ರತಿಯೊಂದು ಸಮುದಾಯದ ಏಳಿಗೆಗಾಗಿ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕೆಂದು ನಗರಸಭಾ ಅಧ್ಯಕ್ಷರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ ಕರೆ ನೀಡಿದ್ದಾರೆ.
ನಗರದ ಇಂದಿರಾನಗರ ಬಡಾವಣೆಯಲ್ಲಿ ಸುಮಾರು 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಾ| ಬಿ.ಆರ್. ಅಂಬೇಡ್ಕರ್ ಅರುಣೋದಯ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭಾ ವ್ಯಾಪ್ತಿಯ ಎಲ್ಲ ವಾರ್ಡ್‌ಗಳ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಲಾಗಿದ್ದು, ಸಮುದಾಯ ಭವನಗಳು ಆಯಾ ವಾರ್ಡ್‌ನ ನಿವಾಸಿಗಳಿಗೆ ಕಾರ್ಯಕ್ರಮಗಳನ್ನು ನಡೆಸಲು ಹೆಚ್ಚು ಸಹಕಾರಿಯಾಗಿದೆ. ಇದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ವಾರ್ಡ್‌ನ ಬೇಡಿಕೆಗಳ ಬಗ್ಗೆ ಆಡಳಿತ ವ್ಯವಸ್ಥೆಯ ಗಮನ ಸೆಳೆಯಬೇಕೆಂದು ಸಲಹೆ ನೀಡಿದರು. ಇಂದಿರಾನಗರದ ಅಭಿವೃದ್ಧಿ ಬಗ್ಗೆ ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭಾ ಸದಸ್ಯರಾದ ಪಿ.ಡಿ. ಪೊನ್ನಪ್ಪ ತಮ್ಮ ಆಡಳಿತಾವಧಿಯಲ್ಲಿ ಇಂದಿರಾನಗರ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಂಡರು. ಎಲ್ಲ ವಾರ್ಡ್‌ಗಳ ನಿವಾಸಿಗಳು ಒಗ್ಗಟ್ಟಿನಿಂದ ಕೈಜೋಡಿಸಿ ಆಡಳಿತ ವ್ಯವಸ್ಥೆಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡುವ ಮೂಲಕ ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕೆಂದರು.
ನಗರಸಭೆಯ ಸದಸ್ಯರೂ ಹಾಗೂ ಮಾಜಿ ಅಧ್ಯಕ್ಷರಾದ ಜುಲೇಕಾಬಿ, ಮಾಜಿ ಸದಸ್ಯರಾದ ಕೆ.ಟಿ. ಬೇಬಿ ಮ್ಯಾಥು, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಾದ ಎಚ್.ಎಲ್. ದಿವಾಕರ್, ಒಡಿಪಿ ವಲಯಾಧಿಕಾರಿ ಜಾಯ್ಸ ಮಿನೇಜಸ್, ಇಂದಿರಾನಗರದ ಶ್ರೀಕುಂದುರುಮೊಟ್ಟೆ ಮಾರಿಯಮ್ಮ ದೇವಾಲಯದ ಅಧ್ಯಕ್ಷರಾದ ಎಚ್.ಟಿ. ಶಿವಪ್ಪ ಮತ್ತಿತರ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.