ಕುಟ್ಟ ಸರಕಾರಿ ಆಸ್ಪತ್ರೆಯಲ್ಲಿ ಸಾವಿನ ಸರಣಿ : ಪ್ರತಿಭಟನೆ
Team Udayavani, Mar 21, 2019, 1:00 AM IST
ಮಡಿಕೇರಿ: ಕೊಡಗಿನ ಗಡಿಭಾಗವಾದ ಕುಟ್ಟ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಿಸುವಂತೆ ಆಗ್ರ ಹಿಸಿ ಸಾರ್ವಜನಿಕರು ನಾಗರಹೊಳೆ – ಕೇರಳ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕುಟ್ಟದ ನಿವಾಸಿ, ಟ್ಯಾಕ್ಸಿ ಚಾಲಕ ಮಣಿ (48) ಅವರು ಬುಧವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ತಾವೇ ವಾಹನ ಚಲಾ ಯಿಸಿಕೊಂಡು ಕುಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಆದರೆ ಅಲ್ಲಿ ವೈದ್ಯರು ಹಾಗೂ ಶುಶ್ರೂಷಕಿಯರು ಇಲ್ಲದ ಕಾರಣ ಸಕಾಲದಲ್ಲಿ ಚಿಕಿತ್ಸೆ ಲಭಿಸಿರಲ್ಲ. ಸ್ಥಳದಲ್ಲಿದ್ದ ಯುವಕರು ಅವರನ್ನು ಉಪಚರಿಸಿ ಖಾಸಗಿ ವೈದ್ಯರ ಬಳಿಗೆ ಕರೆದೊಯ್ದರಾದರೂ, ಅವರು ಕೊನೆಯುಸಿರೆಳೆದರು.
ಕಳೆದ ವಾರವೂ ವೈದ್ಯರಿಲ್ಲದೆ ಇಲ್ಲಿ ನಾಲ್ಕು ವರ್ಷದ ಮಗು ಮೃತ ಪಟ್ಟಿತ್ತೆನ್ನಲಾಗಿದ್ದು, ಖಾಯಂ ವೈದ್ಯರ ನೇಮಕಾತಿ ಆಗ್ರ ಹಿಸಿ ಸಾರ್ವಜನಿಕರು ಅಂದು ಕೂಡ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದರು. ಆಗ ಸ್ಥಳಕ್ಕೆ ಭೇಟಿ ನೀಡಿದ್ದ ತಾಲೂಕು ವೈದ್ಯಾಧಿಕಾರಿ ಡಾ| ಯತಿರಾಜ್ ಅವರು ಎರಡು ದಿನಗಳ ಒಳಗಾಗಿ ಸೂಕ್ತ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಅದು ಕಾರ್ಯರೂಪಕ್ಕೆ ಬಂದಿಲ್ಲ.
ಭರವಸೆ ಬಳಿಕ ಪ್ರತಿಭಟನೆ ವಾಪಸ್
ಸಾರ್ವಜನಿಕರು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದುಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ತಾಲೂಕು ವೈದ್ಯಾಧಿಕಾರಿ ಡಾ| ಯತಿರಾಜ್ ಅವರು ಪ್ರತಿಭಟನಕಾರರೊಂದಿಗೆ ಮಾತನಾಡಿ, ಈಗ ವಾರದ ಎರಡು ದಿನ ಕುಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ| ಸತೀಶ್ ಅವರನ್ನು ವಾರದ ಎಲ್ಲ ದಿನಗಳಲ್ಲೂ ಇಲ್ಲಿ ಮುಂದುವರಿಸಲಾಗುವುದು. ಹುದಿಕೇರಿ, ಬಾಳೆಲೆ ಹಾಗೂ ಶ್ರೀಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಪ್ರತಿ ಎರಡು ದಿನಗಳಿಗೊಮ್ಮೆ ರಾತ್ರಿ ಪಾಳಿಯಲ್ಲಿ ಈ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವಂತೆ ಮಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.