ರಾಜ್ಯ ಸರಕಾರದ ವರದಿಯಲ್ಲೇ ನ್ಯೂನತೆ: ಶಾಸಕದ್ವಯರ ಟೀಕೆ

Team Udayavani, Aug 16, 2017, 7:15 AM IST

Z-BOPAHIA-APPACHU.jpg

ಮಡಿಕೇರಿ: ರಾಜ್ಯ ಸರಕಾರದ ತಜ್ಞರ ಸಮಿತಿ ನ್ಯೂನತೆಯಿಂದ ಕೂಡಿದ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಪರಿಣಾಮವಾಗಿ ಡಾ| ಕಸ್ತೂರಿ ರಂಗನ್‌ ವರದಿಯ ಕುರಿತು ಹೊರಡಿಸಲಾಗಿರುವ ಆದೇಶ ಕೊಡಗು ಸೇರಿದಂತೆ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯ ಜನರಿಗೆ ಮಾರಕವಾಗಿ ಪರಿಣಮಿಸಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಬಿಜೆಪಿ ನಿಯೋಗ ಕೇಂದ್ರ ಪರಿಸರ ಖಾತೆ ಸಚಿವ ಹರಿಪ್ರಸಾದ್‌ ಅವರನ್ನು ಭೇಟಿಯಾಗಿ ಡಾ| ಕಸ್ತೂರಿ ರಂಗನ್‌ ವರದಿ ಜಾರಿಯಿಂದ ಆಗಬಹುದಾದ ಕಷ್ಟ ನಷ್ಟಗಳ ಬಗ್ಗೆ ಚರ್ಚಿಸಿದಾಗ ರಾಜ್ಯ ಸರಕಾರ ನೀಡಿದ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ತಜ್ಞರು ನೀಡಿದ ವರದಿಯನ್ನು ಕೂಡ ನಿಯೋಗದ ಮುಂದಿಟ್ಟಿದ್ದು, ಸಂಪೂರ್ಣ ನ್ಯೂನತೆಯಿಂದ ಕೂಡಿದೆ ಎಂದು ಹೇಳಿದರು.
 
ಕೇರಳ ಸರಕಾರದ ಮಾದರಿಯಲ್ಲಿ ಕರ್ನಾಟಕ ಸರಕಾ ರಕ್ಕೆ ತಕರಾರನ್ನು ಸಲ್ಲಿಸಲು ಯಾಕೆ ಸಾಧ್ಯವಾಗಿಲ್ಲವೆಂದು ಪ್ರಶ್ನಿಸಿದ ಅವರು ತಜ್ಞರ ಸಮಿತಿ ಜನಪ್ರತಿನಿಧಿಗಳು ಹಾಗೂ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ತಯಾರಿಸಬೇಕಾಗಿತ್ತು ಎಂದರು. ಕೇರಳ ಸರಕಾರಕ್ಕೆ ಜನರ ಮೇಲೆ ಇರುವ ಕಾಳಜಿ ಕರ್ನಾಟಕ ಸರಕಾರಕ್ಕಿಲ್ಲ. ಮತ್ತೆ ತಕರಾರು ಸಲ್ಲಿಸಲು ಎರಡು ವರ್ಷಗಳ ಕಾಲಾವಕಾಶ ಇರುವುದರಿಂದ ರಾಜ್ಯ ಸರಕಾರ ತತ್‌ ಕ್ಷಣ ಎಚ್ಚೆತ್ತುಕೊಂಡು ಜನಪರವಾಗಿ ಸೂಕ್ತ ರೀತಿಯಲ್ಲಿ ವರದಿಯನ್ನು ನೀಡಲಿ ಎಂದು ಕೆ.ಜಿ. ಬೋಪಯ್ಯ ಹೇಳಿದರು. ಅರಣ್ಯ ಸಚಿವರಿಗೆ ಯಾವುದೇ ಮಾಹಿತಿ ಇಲ್ಲ, ಅಧಿಕಾರಿಗಳು ಹೇಳುವುದನ್ನು ಕೇಳುತ್ತಾರೆ ಅಷ್ಟೆ ಎಂದು ಟೀಕಿಸಿದರು.

ಸೂಕ್ಷ್ಮ ಪರಿಸರ ತಾಣ ಘೋಷಣೆಯಾದಾಗ ಜಿಲ್ಲೆಯ ಶಾಸಕರು ರಾಜೀನಾಮೆ ನೀಡಲಿ ಎಂದು ಕೆಲವರು ಒತ್ತಾಯಿಸಿದ್ದರು.ಆದರೆ ರಾಜಿನಾಮೆ ನೀಡಬೇಕಾಗಿರುವುದು ನಾವಲ್ಲ, ಬದಲಿಗೆ ಜನವಿರೋಧಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮ ಯ್ಯನವರೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿ  ಎಂದು ಮಾತ್ರ ನಿರೀಕ್ಷೆ ಮಾಡುವ ಸರಕಾರ ಜಿಲ್ಲೆಯ ಜನರ ಕಣ್ಣೊರೆಸುವ ಕಾರ್ಯ ಮಾಡುತ್ತಿಲ್ಲ. ಕೇವಲ ಘೋಷಣೆಗಳಿಗಷ್ಟೇ ಸೀಮಿತವಾಗಿರುವ ಸರಕಾರದಿಂದ ವಿಶೇಷ ಪ್ಯಾಕೇಜ್‌ನ ಹಣ ಬಿಡುಗಡೆಯಾಗದೇ ಇರುವುದರಿಂದ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಗುತ್ತಿಗೆದಾರರು ಮುಂದೆ ಬರುತ್ತಿಲ್ಲವೆಂದರು. 

ಮರಗಳ ಹನನದಿಂದ ಮಳೆಯಾಗುತ್ತಿಲ್ಲವೆಂದು ಹೇಳಲಾಗುತ್ತಿದೆ. ಆದರೆ ಸ್ವಂತ ಉಪಯೋಗಕ್ಕೆ ಮರ ಕಡಿದರೆ ವಶ ಪಡಿಸಿಕೊಳ್ಳುವ ಅರಣ್ಯ ಇಲಾಖೆ ಅರಣ್ಯದೊಳಗೆ ನಿರಂತರವಾಗಿ ಮರಗಳು ಲೂಟಿಯಾಗುತ್ತಿದ್ದರೂ ಯಾಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಪ್ರಶ್ನಿಸಿದರು. ಹಾಡಿಗಳಲ್ಲಿ ಗಿರಿಜನರು ಮೂಲಭೂತ ಸೌಲಭ್ಯಗಳಿ ಲ್ಲದೆ ಸಂಕಷ್ಟದಲ್ಲಿದ್ದು, ಎಲ್ಲಾ ಕಾರ್ಯಗಳಿಗೂ ಅರಣ್ಯ ಅಧಿಕಾರಿಗಳು ಅಡ್ಡಿಯಾಗಿದ್ದಾರೆ ಎಂದು ಬೋಪಯ್ಯ ಟೀಕಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್‌ ಮಾತನಾಡಿ, ಪ್ರತಿವರ್ಷ ಜಿಲ್ಲೆಗೆ ರೂ. 50 ಕೋಟಿ ವಿಶೇಷ ಪ್ಯಾಕೇಜ್‌ ಎಂದು ಘೋಷಣೆ ಮಾಡುತ್ತಿದೆಯೇ ಹೊರತು ಕಳೆದ ನಾಲ್ಕು ವರ್ಷಗಳಲ್ಲಿ ಕೇವಲ ರೂ. 41 ಕೋಟಿಯಷ್ಟೆ ಬಿಡುಗಡೆ ಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಸರಕಾರವಿದ್ದಾಗ ಪ್ಯಾಕೇಜ್‌ ಘೋಷಣೆಯಾದ ವರ್ಷವೇ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈಗಿನ ಕಾಂಗ್ರೆಸ್‌ ಸರಕಾರ ಕೊಡಗು ಜಿಲ್ಲೆಯನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು. 
ಕಾವೇರಿ ನೀರಾವರಿ ಪ್ರದೇಶ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆಯನ್ನು ಸರಕಾರ ಕರೆದಿದ್ದು, ಕೊಡಗಿನ ನಿರ್ಲಕ್ಷ್ಯವನ್ನು ಖಂಡಿಸಿ ಸಭೆಯಲ್ಲಿ ತಾವುಗಳು ಭಾಗವಹಿಸಲಿಲ್ಲವೆಂದು ಅಪ್ಪಚ್ಚುರಂಜನ್‌ ಹೇಳಿದರು.

ಸರಕಾರದ ಕಡೆಗಣನೆಯನ್ನು ಖಂಡಿಸಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು, ಕಾಡಾನೆ ಹಾವಳಿಯನ್ನು ತಡೆಗಟ್ಟಲು ಸರಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆಂದು ಟೀಕಿಸಿದರು. ಅರಣ್ಯ ಭಾಗದಲ್ಲಿ 1500 ಹಾಗೂ ತೋಟಗಳಲ್ಲಿ 300 ಕಾಡಾನೆಗಳಿವೆ ಎಂದು ಸರಕಾರವೇ ಮಾಹಿತಿ ನೀಡಿದೆ ಎಂದರು. 

ಆದರೆ ಕಾಡಾನೆಗಳನ್ನು ಹಿಡಿಯುವ ಕಾರ್ಯಾ ಚರಣೆ ನಡೆದಿಲ್ಲ. ಅರಣ್ಯ ಭಾಗದಲ್ಲಿರುವ ಆಹಾರಕ್ಕೆ ಯೋಗ್ಯವಲ್ಲದ ಮರಗಳನ್ನು ತೆಗೆದು ವನ್ಯಜೀವಿಗಳ ಹಸಿವನ್ನು ನೀಗಿಸುವ ಮರಗಳನ್ನು ಬೆಳೆಸುವಂತೆ ಅರಣ್ಯ ಸಚಿವರಲ್ಲಿ ಮನವಿ ಮಾಡಲಾಗಿದೆ. ಈ ಕಾರ್ಯಕ್ಕೆ ಸರಕಾರ ಮುಂದಾದರೆ ಯೋಗ್ಯವಲ್ಲದ ಮರಗಳನ್ನು ತೆರವುಗೊಳಿಸಲು ಕೇಂದ್ರ ಸರಕಾರದಿಂದ ಅನುಮತಿ ದೊರಕಿಸಿ ಕೊಡುವುದಾಗಿ ಅಪ್ಪಚ್ಚು ರಂಜನ್‌ ಹೇಳಿದರು.
 
ಸಿ ಮತ್ತು ಡಿ ಭೂಮಿ ಮಂಜೂರು 
ಕೊಡಗು ಜಿಲ್ಲೆಯ ಮೂರು ತಾಲ್ಲೂಕಿನಲ್ಲಿ ಸುಮಾರು 3669 ಅರ್ಜಿದಾರರು ಹೊಂದಿರುವ 6105.20 ಎಕರೆ ಸಿ ಮತ್ತು ಡಿ ಭೂಮಿಯನ್ನು ಸಕ್ರಮಗೊಳಿಸಲು ಸರಕಾರ ಆದೇಶ ನೀಡಿದೆ. ಇದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಕಾಳಜಿಯಿಂದ ಆಗಿದೆ ಎಂದು ಅಪ್ಪಚ್ಚುರಂಜನ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಸೋಮವಾರಪೇಟೆ ತಾಲೂಕಿನಲ್ಲಿ 3032 ಅರ್ಜಿ ದಾರರು 4368.20 ಎಕರೆ, ಮಡಿಕೇರಿ ತಾಲೂಕಿನಲ್ಲಿ 523 ಅರ್ಜಿದಾರರು 1249 ಎಕರೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 114 ಅರ್ಜಿದಾರರು 488 ಎಕರೆ ಸಿ ಮತ್ತು ಡಿ ಭೂಮಿಯನ್ನು ಹೊಂದಿದ್ದಾರೆ ಎಂದು ಅವರು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.