ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ 

Team Udayavani, Apr 10, 2018, 7:00 AM IST

Z-SRI-VIDYA-1.jpg

ಮಡಿಕೇರಿ: ಮತದಾರರ ಪಟ್ಟಿಗೆ ಅರ್ಹರು ತಮ್ಮ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಚಾಲನೆ ನೀಡಿದರು.
    
ನಗರದ ಸಂತ ಜೋಸೆಫ‌ರ ಕಾಲೇಜಿ ನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ 18 ವರ್ಷ ಪೂರ್ಣಗೊಂಡವರಿಗೆ ನಮೂನೆ-6 ಅರ್ಜಿ ಯನ್ನು ವಿತರಿಸಿ ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಪಿ.ಐ. ಶ್ರೀವಿದ್ಯಾ ಅವರು ಚಾಲನೆ ನೀಡಿದರು. 
    
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಚುನಾವಣಾ ಅಯೋಗದ ನಿರ್ದೇಶನದಂತೆ ಜಿಲ್ಲೆಯ 530 ಮತಗಟ್ಟೆಗಳಲ್ಲಿ ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳ ಲಾಗಿದ್ದು, ಈ ಅವಕಾಶವನ್ನು ಅರ್ಹರು ಪಡೆದುಕೊಳ್ಳುವಂತೆ ಕೋರಿದರು. 

ಹದಿನೆಂಟು ವರ್ಷ ಪೂರ್ಣಗೊಂಡು ಇದುವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗದಿದ್ದಲ್ಲಿ, ಮತದಾರರ ಪಟ್ಟಿಯಲ್ಲಿ ಹಲವು ಕಾರಣಗಳಿಂದ ಹೆಸರು ಬಿಟ್ಟು ಹೋಗಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ಮತದಾನದ ಗುರುತಿನ ಚೀಟಿ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. 

ಹೆಸರು ನೋಂದಾಯಿಸಿದವರಿಗೆ ಶೀಘ್ರ ಮತದಾರರ ಗುರುತಿನ ಚೀಟಿ ನೀಡಲಾಗುವುದು, 18 ವರ್ಷ ಪೂರ್ಣ ಗೊಂಡವರು ಯಾರು ಸಹ ಮತದಾರರ ಪಟ್ಟಿಯಿಂದ ವಂಚಿತರಾಗಬಾರದು. ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಅರ್ಹರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆದು, ಮತದಾನ ಮಾಡುವಂತರಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.   

ಜಿ.ಪಂ. ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಮತದಾರರ ಮಿಂಚಿನ ನೋಂದಣಿ ವಿಶೇಷ ಅಭಿಯಾನವನ್ನು ಸಹ ಹಮ್ಮಿಕೊಳ್ಳಲಾಗಿದ್ದು, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅರ್ಹರಲ್ಲಿ ಮನವಿ ಮಾಡಿದರು. 
 
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್‌ ಕುಮಾರ್‌ ಅವರು ಮಾತನಾಡಿ ಈ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತಾಗಲು 18 ವರ್ಷ ಪೂರ್ಣಗೊಂಡವರಿಗೆ ಮತದಾರರ ಗುರುತಿನ ಚೀಟಿ ಪಡೆಯುವಂತಾಗಲು ಮಿಂಚಿನ ನೋಂದಣಿ ಅಭಿಯಾನ ಆಯೋಜಿಸಲಾಗಿದೆ. ಆ ದಿಸೆಯಲ್ಲಿ ಅರ್ಹರು ಬೂತ್‌ ಮಟ್ಟದ ಅಧಿಕಾರಿಗಳನ್ನು ಭೇಟಿ ಮಾಡಿ ಹೆಸರು ನೋಂದಾಯಿಸಿ ಕೊಳ್ಳುವಂತಾಗಬೇಕು. ಈ ಅವಕಾಶವು ಇದೇ ಎಪ್ರಿಲ್‌ 14ರ ವರೆಗೆ ಇದೆ ಎಂದು ಅವರು ತಿಳಿಸಿದರು. 
  
ಉಪ ವಿಭಾಗಾಧಿಕಾರಿ ರಮೇಶ್‌ ಕೊನರೆಡ್ಡಿ ಅವರು ಮಾತನಾಡಿ ಪ್ರಜಾ ಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಮತದಾನವು ಪರಿಣಾಮಕಾರಿ ಸಾಧನ ವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ತಹಸೀಲ್ದಾರ್‌ ಶಾರದಾಂಭ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಪೌರಾಯುಕ್ತರಾದ ಬಿ.ಶುಭ ಇತರರು ಇದ್ದರು. 

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.