ನಾಳೆಯೇ ಹಕ್ಕುಪತ್ರ ವಿತರಿಸಿ: ಕಾಗೋಡು ತಿಮ್ಮಪ್ಪ
Team Udayavani, Apr 18, 2017, 4:08 PM IST
ಸೋಮವಾರಪೇಟೆ: ತಾಲೂಕು ಕಚೇರಿಯಲ್ಲಿ ವಿತರಣೆಗೆ ಬಾಕಿಯಿರುವ ಹಕ್ಕುಪತ್ರ ಗಳನ್ನು ನಾಳೆಯಿಂದಲೇ ವಿತರಣೆ ಮಾಡಬೇಕೆಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೂಚಿಸಿದರು.
ರವಿವಾರ ಬಜೆಗುಂಡಿ ಗ್ರಾಮಕ್ಕೆ ಭೇಟಿ, ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಾರದೋ ಒತ್ತಡಕ್ಕೆ ಮಣಿದು ಹಕ್ಕುಪತ್ರ ವಿತರಿಸಲು ಕಂದಾಯ ಇಲಾಖೆ ವಿಳಂಬ ಮಾಡುತ್ತಿದೆ ಎಂದು ತಾಕೇರಿ ಸತೀಶ್, ಮಿಥುನ್, ನಂದಕುಮಾರ್ ಹೇಳಿದರು. ಇದರಿಂದ ಅಸಮಾ ಧಾನಗೊಂಡ ಸಚಿವರು, ಉಪವಿಭಾಗಾ ಧಿಕಾರಿ ಹಾಗು ತಹಸಿಲ್ದಾರ್‌ರನ್ನು ತರಾಟೆಗೆ ತೆಗೆದು ಕೊಂಡು, ವಿಳಂಬಕ್ಕೆ ಸೂಕ್ತ ಕಾರಣ ಕೊಡದಿದ್ದಾಗ, ನಾಳೆಯಿಂದಲೇ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಸೂಚಿಸಿದರು.
ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜೆಗುಂಡಿ ಗ್ರಾಮದಲ್ಲಿ ಕಳೆದ 40 ವರ್ಷಗಳಿಂದ ವಾಸವಿರುವ ನಿವಾಸಿಗಳು ಹಕ್ಕುಪತ್ರ ಪಡೆಯಲು ಸಾಧ್ಯವಾಗಿಲ್ಲ. ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಬಜೆಗುಂಡಿ ಗ್ರಾಮದ ಸರ್ವೆ ನಂ 95/1 ರಲ್ಲಿ 68 ಎಕರೆ ಭೂಮಿ ಊರೂಡುವೆ ಎಂದು ಕಾರಣ ನೀಡಿ ಕಂದಾಯ ಇಲಾಖೆ ಅರ್ಜಿ ಯನ್ನು ತೆಗೆದುಕೊಳ್ಳುತ್ತಿಲ್ಲ. ಇಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂದು ಬೇಳೂರು ಗ್ರಾ.ಪಂ ಸದಸ್ಯ ಕೆ.ಎ. ಯಾಕುಬ್ ಸೇರಿದಂತೆ, ಅಲ್ಲಿನ ನಿವಾಸಿಗಳು ಮನವಿ ಪತ್ರ ಸಲ್ಲಿಸಿದರು.
ಅರಣ್ಯ ಭೂಮಿಯನ್ನು ಗ್ರಾಮದ ಅಭಿವೃದ್ಧಿಗೆ ನೀಡಲು ಅವಕಾಶವಿದ್ದು, ಪ್ರತಿಯೊಬ್ಬರು ಕಂದಾಯ ಇಲಾಖೆಗೆ 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ, ಹಕ್ಕುಪತ್ರ ಪಡೆಯಲು ಅವಕಾಶವಿದೆ ಎಂದು ಸಚಿವರು ಹೇಳಿದರು. ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರ ಪಟ್ಟಿಯನ್ನು ಮಾಡುವಂತೆ ಪಿಡಿಒ ಅವರಿಗೆ ಸೂಚಿಸಿದ ಸಚಿವರು, ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಜಾಗವನ್ನು ಗುರುತಿಸಿ, ನಿವೇಶನ ನೀಡಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಗ್ರಾಮಲೆಕ್ಕಿಗ, ಪಿಡಿಒ, ಪಂಚಾಯಿತಿ ಕಾರ್ಯದರ್ಶಿ ಜಂಟಿಯಾಗಿ ಪ್ರತಿ ಗ್ರಾಮ ನಕಾಶೆ ಇಟ್ಟುಕೊಂಡು, ನಿವೇಶನ ರಹಿತರ ಪಟ್ಟಿ ಮಾಡಬೇಕು. ಇದುವರೆಗೆ 94ಸಿ ಯಲ್ಲಿ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ಸ್ಥಳದಲ್ಲೇ ಪಡೆದು ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ಮಣ್ಣಿನಲ್ಲಿ ಹುಟ್ಟಿದವನಿಗೆ ಭೂಮಿಯ ಹಕ್ಕು ಇದೆ. ಅಂತಹ ಹಕ್ಕು ಎಲ್ಲಾ ಜಾತಿ ಜನಾಂಗದವರಿಗೂ ಸಿಗಬೇಕು ಎಂಬ ಉದ್ದೇಶದಿಂದ ಸರಕಾರ ಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿದ್ದರೂ, ಅಧಿಕಾರಿಗಳ ಅಸಡ್ಡೆಯಿಂದ ಸಮಸ್ಯೆಯಾಗಿದೆ ಎಂದು ಸಚಿವರು ಹೇಳಿದರು.
ಕರ್ನಾಟಕ ಹಸಿವು ಮುಕ್ತ ಹಾಗು ಅಭಿವೃದ್ಧಿ ಶೀಲ ರಾಜ್ಯವನ್ನಾಗಿ ನಿರ್ಮಾಣ ಮಾಡುವ ಗುರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕಿದ್ದು, ಸರಕಾರದ ಜನಪ್ರಿಯ ಯೋಜನೆ ಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು. ಇದೇ ಸಂದರ್ಭ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಹಾಗೂ ಯಡವನಾಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಲು ಸಚಿವರು ಸರಕಾರದ ಮಟ್ಟದಲ್ಲಿ ಪರಿಹರಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸನ್ಮಾನಿಸಿದರು.
ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ರೇಷ್ಮೆ ಮತ್ತು ತಂಬಾಕು ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿರಮೇಶ್, ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಜೆ.ಆರ್. ಪುಷ್ಪಲತಾ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.