ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹ : ಜಿಲ್ಲಾ ಬಿಜೆಪಿ ಪ್ರತಿಭಟನೆ

Team Udayavani, Jul 11, 2019, 5:41 AM IST

bjp-protest

ಮಡಿಕೇರಿ :ಶಾಸಕರ ಸಂಖ್ಯಾ ಬಲದ ಕೊರತೆಯನ್ನು ಎದುರಿಸುತ್ತಿರುವ ರಾಜ್ಯದ ಮೈತ್ರಿ ಸರಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತತ್‌ಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಜನರಲ್ ಕೆ.ಎಸ್‌. ತಿಮ್ಮಯ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿತು.

ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್‌ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯ ಕರ್ತರು ಜನರಲ್ ತಿಮ್ಮಯ್ಯ ವೃತ್ತದ ಬಳಿ ಸಮಾವೇಶಗೊಂಡು, ರಾಜ್ಯದ ಮೈತ್ರಿ ಸರಕಾರ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರುಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಬಿ.ಬಿ.ಭಾರತೀಶ್‌ ಮಾತನಾಡಿ, ಸಂಖ್ಯಾ ಬಲದ ಕೊರತೆ ಇದ್ದರೂ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಅಪವಿತ್ರ ಮೈತ್ರಿಯ ಮೂಲಕ ಕಳೆದ ಒಂದೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿವೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಸರ್ಕಾರ ಇತ್ತೋ ಇಲ್ಲವೋ ಎನ್ನುವುದೇ ಅರಿವಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆಯೆಂದು ಲೇವಡಿ ಮಾಡಿದರು. ಮೈತ್ರಿ ಸರಕಾರದ ಇಲ್ಲಿಯ ವರೆಗಿನ ಆಡಳಿತದಲ್ಲಿ ಅವರೊಳ‌ಗಿನ ಭಿನ್ನಾಭಿಪ್ರಾಯ, ಒಳಜಗಳಗಳೇ ಪ್ರಮುಖ ವಿಷಯ ಗಳಾಗಿ ಗೋಚರಿಸಿದೆ ಎಂದು ಟೀಕಿಸಿದರು.

ರಾಜ್ಯದ ಇತಿಹಾಸದಲ್ಲೆ ಇಂತಹ ಒಂದು ಕೆಟ್ಟ ಸರಕಾರವನ್ನು ಜನತೆ ಎಂದೂ ನೋಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಭಾರತೀಶ್‌, ಪಕ್ಷದ ಶಾಸಕರುಗಳನ್ನೆ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದ ಹೆಚ್.ಡಿ.ಕುಮಾರಸ್ವಾಮಿ ಅವರು ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಿಎಂ ಸ್ಥಾನ ತ್ಯಜಿಸುವವರೆಗೂ ಬಿಜೆಪಿಯಿಂದ ರಾಜ್ಯಾದ್ಯಂತ ನಿರಂತರ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯ ದರ್ಶಿಗಳಾದ ಶಾಂತೆಯಂಡ ರವಿ ಕುಶಾಲಪ್ಪ, ರಾಬಿನ್‌ ದೇವಯ್ಯ, ವಿ.ಕೆ.ಲೋಕೇಶ್‌, ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್‌, ಮಡಿಕೇರಿ ತಾಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್‌, ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಜೈನಿ, ಪಕ್ಷದ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅನಿತಾ ಪೂವಯ್ಯ, ಡೀನ್‌ ಬೋಪಣ್ಣ, ಕೊಮಾರಪ್ಪ, ಮೋಹನ್‌ ಮೊಣ್ಣಪ್ಪ, ಮನು ಮಹೇಶ್‌, ರವಿ ಬಸಪ್ಪ, ಅಶ್ವತ್ಥ್, ಐ.ಜಿ.ಶಿವಕುಮಾರಿ, ಎಂ.ಕೆ.ಅರುಣ್‌ ಕುಮಾರ್‌, ಸುಭಾಷ್‌ ಸೋಮಯ್ಯ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.