ರೈಲು ಮಾರ್ಗಕ್ಕೆ ಅನುಮತಿ ಬೇಡ: ಸಿಎಂಗೆ ಪ್ರತಾಪ್ ಸಿಂಹ ಮನವಿ
Team Udayavani, Jul 12, 2018, 7:00 AM IST
ಈ ರೈಲು ಮಾರ್ಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯರ ಭಾವನೆ, ಯೋಜನೆ ಅನುಷ್ಠಾನದಿಂದ ವನ್ಯಜೀವಿ ಹಾಗೂ ಪರಿಸರ ಮೇಲಾಗುವ ಪರಿಣಾಮ ಮತ್ತು ರಾಜ್ಯ ಸರಕಾರದ ಮೇಲಾಗುವ ಆರ್ಥಿಕ ಪರಿಣಾಮ ಮುಂತಾದ ಅಂಶಗಳನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಮಡಿಕೇರಿ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ಸಿಂಹ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು, ಉದ್ದೇಶಿತ ತಲಚೇರಿ-ಮೈಸೂರು ರೈಲು ಮಾರ್ಗ ಅನುಷ್ಠಾನಕ್ಕೆ ರಾಜ್ಯ ಸರಕಾರದಿಂದ ಅನುಮತಿ ನೀಡದಿರುವಂತೆ ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲೆ ಭೌಗೋಳಿಕ ಮತ್ತು ಸಾಂಸ್ಕೃತಿಕವಾಗಿ ವಿಭಿನ್ನವಾಗಿರುವ ಪುಟ್ಟ ಜಿಲ್ಲೆಯಾಗಿದ್ದು ಅಪರಿಮಿತ ಪ್ರಕೃತಿ ಸಂಪತ್ತಿನ ನೆಲೆವೀಡೂ ಆಗಿದೆ.ಕೇರಳ ಸರಕಾರದ ರೈಲು ಅಭಿವೃದ್ಧಿ ನಿಗಮ ಸಿದ್ಧಪಡಿಸಿರುವ ಈ ರೈಲು ಮಾರ್ಗ ದಕ್ಷಿಣ ಕೊಡಗಿನಲ್ಲಿ ಸುಮಾರು 65 ಕಿ.ಮೀ. ದೂರ ಹಾದುಹೋಗಲಿದ್ದು, ಈ ಯೋಜನೆ ಜಾರಿಗೆ ಬಂದಿದ್ದೇ ಆದಲ್ಲಿ ಕೊಡಗಿನಲ್ಲಿ ಸುಮಾರು 2 ಲಕ್ಷ ಮರಗಳ ಮಾರಣಹೋಮವಾಗಲಿದೆ. ಈಗಾಗಲೇ ವ್ಯಾಪಕ ಅರಣ್ಯ ನಾಶದಿಂದಾಗಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣವೇ ಕಡಿಮೆಯಾಗಿದ್ದು, ಈ ಮಾರ್ಗ ನಾಗರಹೊಳೆ ಮೂಲಕ ಹಾದು ಹೋಗುವುದರಿಂದ ಅಮೂಲ್ಯ ವನ್ಯಜೀವಿಗಳಿಗೂ ತೊಂದರೆಯಾಗಲಿದೆ ಅಲ್ಲದೆ ಕಾವೇರಿ ನದಿಯಲ್ಲಿ ನೀರಿನ ಹರಿಯುವಿಕೆ ಕಡಿಮೆಯಾಗಲಿದೆ ಎಂದು ವಿವರಿಸಿದ್ದಾರೆ.
ಜಿಲ್ಲಾದ್ಯಂತ ವಿರೋಧವಿದೆ
ಉದ್ದೇಶಿತ ರೈಲು ಮಾರ್ಗಕ್ಕೆ ಕೊಡಗು ಜಿಲ್ಲೆಯಾದ್ಯಂತ ತೀವ್ರ ವಿರೋಧವಿದ್ದು ಸ್ಥಳೀಯ ಸಂಘಸಂಸ್ಥೆಗಳು, ಪರಿಸರವಾದಿ ಗಳು, ಜಿಲ್ಲೆಯ ಶಾಸಕರು ಹಾಗೂ ಸಂಸದನಾಗಿ ತನ್ನ ವಿರೋಧವೂ ಇದೆ. ಆದ್ದರಿಂದ ಉದ್ದೇಶಿತ ರೈಲು ಮಾರ್ಗಕ್ಕೆ ಯಾವುದೇ ಕಾರಣಕ್ಕೂ ರಾಜ್ಯ ಸರಕಾರದಿಂದ ಅನುಮತಿ ನೀಡಬಾರದು ಎಂದು ಪ್ರತಾಪ್‌ಸಿಂಹ ಕ್ಷೇತ್ರದ ಜನತೆಯ ಪರವಾಗಿ ಮನವಿ ಮಾಡಿಕೊಂಡಿದ್ದಾರೆ.
ಅನುಮತಿ ನೀಡಿಲ್ಲ
ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿದಂತೆ ಸರ್ವೆ ನಡೆಸಲು ರಾಜ್ಯ ಸರಕಾರ ಕೇರಳ ಸರಕಾರಕ್ಕೆ ಅನುಮತಿ ನೀಡಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಸದಸ್ಯ ಸುನಿಲ್ ಸುಬ್ರಮಣಿ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾವಿಸಿದ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿಗಳು, ಮೈಸೂರು-ತಲಚೇರಿ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಕೇರಳ ರಾಜ್ಯದ ಮುಖ್ಯ ಕಾರ್ಯದರ್ಶಿ ಗಳ ಹಂತದಲ್ಲಿ ಎರಡು ಸಭೆಗಳು ನಡೆದಿದ್ದು, ಈ ಸಭೆಯಲ್ಲಿರೈಲು ಮಾರ್ಗವು ಆನೆಗಳ ಕಾರಿಡಾರ್ ಮೂಲಕ ಹಾದು ಹೋಗುವುದರಿಂದ ಆ ಭಾಗದಲ್ಲಿ ಮನುಷ್ಯರು ಮತ್ತು ಆನೆಗಳ ನಡುವಿನ ಸಂಘರ್ಷ ಹೆಚ್ಚಾಗುವ ಬಗ್ಗೆ ರಾಜ್ಯ ಸರಕಾರ ತಿಳಿಸಿದೆ ಎಂದು ಹೇಳಿದ್ದಾರೆ.
ಕೇರಳ ಸರಕಾರವು ಈ ಮಾರ್ಗಕ್ಕೆ ಸಂಬಂಧಿಸಿದಂತೆ ಸರ್ವೆ ಮಾಡಲು ಅನುಮತಿ ನೀಡುವಂತೆ ಕೋರಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರಕಾರ ತಿಳಿಸಿದೆಯೇ ಹೊರತು ಸರ್ವೆ ನಡೆಸಲು ಅನುಮತಿ ನೀಡಿಲ್ಲ ಎಂದೂ ಮುಖ್ಯಮಂತ್ರಿಯವರು ಸುನಿಲ್ ಸುಬ್ರಮಣಿ ಅವರ ಪ್ರಸ್ತಾವನೆಗೆ ಉತ್ತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.