ಕುಡಿಯುವ ನೀರಿನ ಸಮಸ್ಯೆ: ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶ
Team Udayavani, Mar 26, 2019, 6:30 AM IST
ಮಡಿಕೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನುºಕುಮಾರ್ ಅವರು ನಿರ್ದೇಶ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಪುನರ್ ವಸತಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಬಾರದು. ಸಾರ್ವಜನಿಕರಿಂದ ದೂರುಗಳು ಕೇಳಿ ಬರಬಾರದು ಎಂದು ಅವರು ತಿಳಿಸಿದರು.
ಸಣ್ಣ ನೀರಾವರಿ ಇಲಾಖೆಯಿಂದ ಇದುವರೆಗೆ ಅಂದಾಜು ಪಟ್ಟಿ ಸಲ್ಲಿಸದಿರುವುದಕ್ಕೆ ಅತೃಪ್ತಿ ವ್ಯಕ್ತಿಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು, ಮರಗಳು ಬಿದ್ದು ಭೂಮಿಯಲ್ಲಿ ಹೂತು ಹೋಗಿವೆ.
ಇವುಗಳನ್ನು ಮೇಲೆತ್ತಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ನಿಟ್ಟನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗುವಂತೆ ನಿರ್ದೇಶನ ನೀಡಿದರು.
ಮರ ತೆಗೆದ ನಂತರ ಮರ ಯಾರಿಗೆ ಸೇರಿದ್ದು ಎಂಬುದನ್ನು ತೀರ್ಮಾನಿಸೋಣ, ಸದ್ಯ ಭೂಮಿಯಲ್ಲಿ ಹೂತು ಹೋಗಿರುವ ಮರಗಳನ್ನು ಹೊರತೆಗೆಯಬೇಕು. ಇಲ್ಲದಿದ್ದಲ್ಲಿ ಮುಂದಿನ ಮಳೆಗಾಲಕ್ಕೆ ತೊಂದರೆಯಾಗಲಿದೆ ಎಂದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನೆಗಳ ನಿರ್ಮಾಣ ಕಾಮಗಾರಿಯು ಮಾದಾಪುರ, ಕರ್ಣಂಗೇರಿ, ಮದೆನಾಡುಗಳಲ್ಲಿ ನಡೆಯುತ್ತಿವೆ. ವಸತಿ ಪ್ರದೇಶದಲ್ಲಿ ಕುಡಿಯುವ ನೀರು, ಚರಂಡಿ, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯವನ್ನು ಕಲ್ಪಿಸಬೇಕಿದೆ ಎಂದು ಅವರು ಹೇಳಿದರು.
ಪ್ರಕೃತಿ ವಿಕೋಪ ಸಂಬಂಧಿಸಿದಂತೆ ಮನೆಗಳ ನಿರ್ಮಾಣ, ಪರಿಹಾರ ವಿತರಣೆ ಮತ್ತಿತರ ವಿಚಾರಗಳ ಕುರಿತು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾಮಗಾರಿಗಳನ್ನು ಕೈಗೊಳ್ಳಾಗಿದೆ ಎಂದು ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ರೇವಣ್ಣವರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಾಜು, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ನಗರಾಭಿವೃದ್ದೀ ಕೋಶದ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಸಿದ್ದೇಶ್ ನಾನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶೀಘ್ರ ಪೂರ್ಣಗೊಳಿಸಿಮಳೆ ಸಂತ್ರಸ್ತರಿಗಾಗಿ ನಿರ್ಮಿಸಲಾಗುತ್ತಿ ರುವ ವಸತಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಮಳೆ ಗಾಲ ಆರಂಭವಾಗುವು ದರೊಳಗೆ ಸಾಧ್ಯವಾದಷ್ಟು ಮನೆ ಹಸ್ತಾಂತರಕ್ಕೆ ಪ್ರಯತ್ನಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಮಳೆ ಯಿಂದ ಹಲವು ರಸ್ತೆಗಳು ಕುಸಿ ದಿವೆ. ಅವುಗಳನ್ನು ಸರಿಪಡಿ ಸುವ ಕಾರ್ಯ ನಡೆದಿದೆ. ರಸ್ತೆ ಕುಸಿದಿರುವ ಕಡೆ ತಡೆಗೋಡೆ ನಿರ್ಮಾಣ ಮಾಡಬೇಕು. ಎಂದು ಕಾರ್ಯದರ್ಶಿ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.