ಅಣ್ಣ, ಅತ್ತಿಗೆಯನ್ನು ಕೊಂದು ಆತ್ಮಹತ್ಯೆ :ಆಸ್ತಿ ವಿವಾದ ಕಾರಣ

Team Udayavani, Feb 4, 2018, 10:21 AM IST

5-aa.jpg

ಮಡಿಕೇರಿ:  ಆಸ್ತಿ ಕಲಹದ ಹಿನ್ನೆಲೆಯಲ್ಲಿ ಅಣ್ಣ ಮತ್ತು  ಅತ್ತಿಗೆಯನ್ನು ಗುಂಡಿಕ್ಕಿ ಕೊಂದು ವ್ಯಕ್ತಿ ಯೋರ್ವ ಆತ್ಮಹತ್ಯೆ ಮಾಡಿಕೊಂಡ  ಆಘಾತಕಾರಿ ಘಟನೆ ಮೂರ್ನಾಡುವಿನ ಎಂ. ಬಾಡಗ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಮೂರ್ನಾಡು ಎಂ.ಬಾಡಗ ನಿವಾಸಿ, ಪ್ರಸ್ತುತ  ಮೈಸೂರಿನಲ್ಲಿ ವಾಸವಿದ್ದ ಮಾಜಿ ಸೈನಿಕ ಪಳಂಗಿಯಂಡ ಉತ್ತಪ್ಪ (62)ನೇ ಹಂತಕನಾಗಿದ್ದು,  ಪಳಂಗಿಯಂಡ ದೇವಯ್ಯ (66) ಹಾಗೂ ಅವರ ಪತ್ನಿ ಪ್ರೇಮಾ ದೇಚಮ್ಮ (53) ಗುಂಡೇಟಿಗೆ ಬಲಿಯಾದವರು.

ವಿವರ
ಸಹೋದರರಾಗಿದ್ದ ಪಳಂಗಿಯಂಡ ದೇವಯ್ಯ ಮತ್ತು ಉತ್ತಪ್ಪ ನಡುವೆ ಕುಟುಂಬದ ಆಸ್ತಿ ವಿಚಾರಕ್ಕೆ ಸಂಬಂಧಿಸಿ  ಎಂಟು ವರ್ಷಗಳಿಂದ  ವಿವಾದವಿತ್ತು. ಈ  ಕುರಿತು ಸಹೋದರರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿಂದೆಯೂ  ಹಲವು ಬಾರಿ ಇವರ ನಡುವೆ ಜಗಳ ನಡೆದಿತ್ತು. ಆಗ  ಕುಟುಂಬಸ್ಥರೇ  ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿದ್ದರು.

ಮೈಸೂರಿನಲ್ಲಿ ನೆಲೆಸಿದ್ದ ಉತ್ತಪ್ಪ ಕಾಫಿ, ಕರಿಮೆಣಸು ಕೊಯ್ಲು ಸಂದರ್ಭ ಮೂರ್ನಾಡಿಗೆ ಆಗಮಿಸಿ ಕೊಯ್ಲು  ಮುಗಿದ ಬಳಿಕ ಮೈಸೂರಿಗೆ ತೆರಳುತ್ತಿದ್ದರು.  

ಕೆಲವು ದಿನಗಳ ಹಿಂದೆ ಉತ್ತಪ್ಪ ಪತ್ನಿಯೊಂದಿಗೆ  ಮೂರ್ನಾಡಿಗೆ ಬಂದು ಕರಿಮೆಣಸು ಕೊಯ್ಲು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ದೇವಯ್ಯ ಅವರ ಕಾಫಿ ತೋಟದ ಪಕ್ಕದಲ್ಲೇ ಸಹೋದರ ಉತ್ತಪ್ಪ ಅವರ ಕಾಫಿ ತೋಟವಿದ್ದು, ತೋಟಕ್ಕೆ  ಹೋಗುವ  ದಾರಿ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪವಿತ್ತು.  ಈ  ವಿವಾದದ ಕುರಿತು ದೇವಯ್ಯ ಅವರು ಜನವರಿ ಕೊನೆಯ ವಾರದಲ್ಲಿ  ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. 

ಶನಿವಾರ ಬೆಳಗ್ಗೆ ದೇವಯ್ಯ ಮತ್ತು ಅವರ ಪತ್ನಿ ಪ್ರೇಮಾ ದೇಚಮ್ಮ  ಕಾರ್ಮಿಕರೊಂದಿಗೆ  ಕಾಫಿ ಮತ್ತು ಕರಿಮೆಣಸು ಕೊಯ್ಲು ಮಾಡುತ್ತಿದ್ದುದ್ದನ್ನು ಗಮನಿಸಿದ ಉತ್ತಪ್ಪ  ಸುಮಾರು 9.15 ಗಂಟೆಗೆ ಏಕಾಏಕಿ  ಅವರ ಮೇಲೆ ಡಬ್ಬಲ್‌ ಬ್ಯಾರಲ್‌ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ದೇವಯ್ಯ ಅವರ ಹೊಟ್ಟೆಭಾಗಕ್ಕೆ ಮತ್ತು ಪ್ರೇಮಾ  ಅವರ ಬೆನ್ನಿಗೆ ಗುಂಡು ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಅಲ್ಲಿಂದ  ಬಂದೂಕಿನೊಂದಿಗೆ ತೆರಳಿದ ಉತ್ತಪ್ಪ ತನ್ನ ಮನೆಯ ಮುಂದಿನ ಕಾಫಿ ತೋಟದಲ್ಲಿ ಸ್ವಯಂ  ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡರು.  ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ  ಬಿದ್ದಿದ್ದ ಆತನನ್ನು  ತತ್‌ಕ್ಷಣವೇ  ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತಾದರೂ   ಜೀವ ಉಳಿಸಲಾಗಲಿಲ್ಲ.

ಮಡಿಕೇರಿ ಗ್ರಾಮಾಂತರ ಪೊಲೀಸ್‌ ವೃತ್ತ ನಿರೀಕ್ಷಕ ಪ್ರದೀಪ್‌, ಉಪನಿರೀಕ್ಷಕ ಭೋಜಪ್ಪ, ಎಎಸ್‌ಐ ಅಲೆಕ್ಸ್‌ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಮಹಜರು ನಡೆಸಿದರು. ಕೃತ್ಯಕ್ಕೆ ಬಳಸಿದ ಡಬ್ಬಲ್‌ ಬ್ಯಾರಲ್‌ ಬಂದೂಕು, 3 ಸಿಡಿದ ಕಾಡತೂಸು ಮತ್ತು ಒಂದು ಜೀವಂತ ಕಾಡತೂಸನ್ನು  ವಶಕ್ಕೆ ಪಡೆದಿದ್ದಾರೆ. 

ಮೃತ ದೇವಯ್ಯ -ಪ್ರೇಮಾ ದಂಪತಿ ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.  ಉತ್ತಪ್ಪ ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ  ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.  

ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.