ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ
Team Udayavani, Mar 3, 2019, 1:00 AM IST
ಮಡಿಕೇರಿ: ಪ್ರತಿಯೊಬ್ಬರೂ ಪರಿಸರದಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳೆಸಿ ಪ್ರಾಕೃತಿಕ ಅಸಮತೋಲನ ತಡೆಯುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್. ಮಂಜುನಾಥ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಇವರ ಸಹಯೋಗದೊಂದಿಗೆ ನಗರದ ಅರಸು ಭವನದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಹಾಗೂ ಹಸಿರು-ನನಸಾದ ಕನಸು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಾಕೃತಿಕ ಸಂಪನ್ಮೂಲವನ್ನು ಉಳಿಸಿ ಮುಂದಿನ ಪೀಳಿಗೆಗೆ ಯತಾವತ್ತಾಗಿ ನೀಡಬೇಕು ಎಂದರು. ಪರಿಸರ ಪ್ರಕೃತಿಯ ಅವಿಭಾಜ್ಯ ಅಂಗ. ಅರಣ್ಯ ಮತ್ತು ವನ್ಯ ಜೀವಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟುಮಾಡಬಾರದು ಎಂದರು.
ಕಾರ್ಯಕ್ರಮದ ಪ್ರಯುಕ್ತ ಹೊರತರಲಾದ ಹಸಿರು ನನಸಾದ ಕಸನು ಎಂಬ ಶಾಲಾ ಪರಿಸರದ ಮಾಹಿತಿಯನ್ನು ಒಳಗೊಂಡ ಪುಸ್ತಕವನ್ನು ಹಿರಿಯ ಪರಿಸರ ಅಧಿಕಾರಿ ಉದಯ ಕುಮಾರ್ ಅವರು ಬಿಡುಗಡೆ ಮಾಡಿ ಪರಿಸರದಲ್ಲಿ ನದಿ, ಕೆರೆ ಸೇರಿದಂತೆ ಜಲಮೂಲಗಳು ಮಲಿನಗೊಳ್ಳುತ್ತಿವೆ. ನೀರನ್ನು ಮಿತವಾಗಿ ಬಳಸುವ ಮೂಲಕ ನೀರಿನ ಸಂರಕ್ಷಣೆ ಮಾಡಬೇಕು. ಕಸವನ್ನು ಮೂಲದಲ್ಲೇ ವಿಂಗಡಿಸಬೇಕು. ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತಾಗಬೇಕು ಎಂದು ಅವರು ತಿಳಿಸಿದರು.
ಜಿ.ಪಂ. ಸಹಾಯಕ ಕಾರ್ಯದರ್ಶಿ ಎಚ್.ಎಸ್. ಬಾಬು, ಮಡಿಕೇರಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕರಾದ ಡಾ| ವಿಜಯ ಅಂಗಡಿ, ಪರಿಸರ ಅಧಿಕಾರಿ ಜಿ.ಆರ್. ಗಣೇಶ್, ಪರಿಸರಮಿತ್ರ ಕಾರ್ಯಕ್ರಮದ ಕುರಿತು ಕಾರ್ಯಕ್ರಮ ಜಿಲ್ಲಾ ಸಂಚಾಲಕರಾದ ಟಿ.ಜಿ.ಪ್ರೇಮ್ ಕುಮಾರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ, ಜಿಲ್ಲಾ ಬಿಸಿಎಮ್ ಅಧಿಕಾರಿ ಆರ್ ಅವಿನ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಉಪ ಪರಿಸರ ಅಧಿಕಾರಿ ಡಾ.ಸುಧಾ ಸೋಮೆಲತಾಉಪಸ್ಥಿತರಿದ್ದರು. ಸುಧಾ ಎಂ.ಕೆ ಅವರು ನಿರೂಪಿಸಿದರು.
ಚೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ: ಉತ್ತಮ ಪರಿಸರ ಹೊಂದಿರುವ ಚೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು 2018-19 ನೇ ಸಾಲಿನ ಜಿಲ್ಲಾ ಮಟ್ಟದ ಪರಿಸರ ಸ್ನೇಹಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪಡೆದುಕೊಂಡಿತು.
ಶಾಲೆಗೆ ಪ್ರಶಸ್ತಿಯೊಂದಿಗೆ 30 ಸಾವಿರ ರೂ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.