‘ಮಕ್ಕಳಿಗೆ ಶಿಕ್ಷಣ ನೀಡಿ ಉತ್ತಮ ಪ್ರಜೆಯಾಗಿ ರೂಪಿಸಿ’
Team Udayavani, Jun 19, 2019, 5:49 AM IST
ಮಡಿಕೇರಿ: ಹದಿನಾಲ್ಕು ವರ್ಷ ದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವಂತಾಗಬೇಕು. ಇದರಿಂದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬಹುದು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪೋಲಿಸ್, ನಗರಸಭೆ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ವಕೀಲರ ಸಂಘ, ಕೊಡಗು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸರಕಾರೇತರ ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ಎನ್ನುವುದು ಒಂದು ಪ್ರಮುಖ ಅಸ್ತ್ರವಾಗಿದೆ.
ಎಲ್ಲ ಮಕ್ಕಳು ಶಿಕ್ಷಣವಂತರಾದರೆ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ. ಈ ದಿಕ್ಕಿನಲ್ಲಿ ಸರಕಾರರ ಮಕ್ಕಳ ಶಿಕ್ಷಣಕ್ಕೆ ಹಲವು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಸಹ ಶ್ರಮಿಸುತ್ತಿದ್ದು, ಅದರಂತೆ 2019ರ ಘೋಷ ವಾಕ್ಯ, ಮಕ್ಕಳು ದುಡಿಯಬೇಕಾದದ್ದು ಅವರ ಕನಸುಗಳ ಮೇಲೆ ಹೊರತು ಕ್ಷೇತ್ರದಲ್ಲಿ ಅಲ್ಲ ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸುತ್ತಿದ್ದೇವೆ ಎಂದರು.
ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಅವರು ಮಾತನಾಡಿದರು. ಒಡಿಪಿ ಸಂಸ್ಥೆಯ ಜಾಯ್ಸ ಮೆನೇಜಸ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ವಕೀಲರಾದ ಎಂ.ಎ. ನಿರಂಜನ ಅವರು ಉಪಸ್ಥಿತರಿದ್ದರು.
ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಸ್ವಾಗತಿಸಿದರು, ಜಯಪ್ಪ ನಿರೂಪಿಸಿದರು, ಸಂತ ಮೈಕಲರ ಶಾಲೆಯ ವಿದ್ಯಾರ್ಥಿ ನಿಯರು ನಾಡಗೀತೆ ಹಾಡಿದರು, ಮಹಮ್ಮದ್ ಶಿರಾಜ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.