Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ
ಎಂಆರ್‌ಐ ಸ್ಕ್ಯಾನಿಂಗ್ ಉಪಕರಣ ಉದ್ಘಾಟಿಸಿದ ಸಚಿವ ಡಾ| ಶರಣ ಪ್ರಕಾಶ ಪಾಟೀಲ್
Team Udayavani, Sep 30, 2024, 12:16 AM IST
ಮಡಿಕೇರಿ: ಬಡವರ ಮಕ್ಕಳು ವೈದ್ಯರಾಗಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರಕಾರ ಪ್ರಯತ್ನಿಸುತ್ತಿದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ತಿಳಿಸಿದರು.
ವೈದ್ಯಕೀಯ ಶಿಕ್ಷಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿನ ಎಂಆರ್‌ಐ ಸ್ಕ್ಯಾನಿಂಗ್ ಉಪಕರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಎಂಆರ್ ಐ ಸ್ಕ್ಯಾನಿಂಗ್ ಯಂತ್ರವನ್ನು ಅಳವಡಿಸಲಾಗಿದೆ. ಆ ನಿಟ್ಟಿನಲ್ಲಿ ಇಬ್ಬರು ವೈದ್ಯಕೀಯ ತಾಂತ್ರಿಕರನ್ನು ನೇಮಿಸಲು ತುರ್ತು ಕ್ರಮ ವಹಿಸಲಾಗುವುದು ಎಂದರು.
ಸರಕಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿ ನಿಲಯ, ವಸತಿ ಗೃಹ ಸೇರಿದಂತೆ ಹಲವು ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದವರು ವಿವರಿಸಿದರು.
ರಾಜ್ಯದಲ್ಲಿ 22 ಸರಕಾರಿ ವೈದ್ಯಕೀಯ ಕಾಲೇಜುಗಳು, 2 ಇಎಸ್ ಐ ಆಸ್ಪತ್ರೆಗಳು ಸೇರಿ ಒಟ್ಟು 24 ವೈದ್ಯಕೀಯ ಆಸ್ಪತ್ರೆಗಳು ಹಾಗೂ 71 ವೈದ್ಯಕೀಯ ಕಾಲೇಜುಗಳು ಇದ್ದು, ರಾಜ್ಯದ ಪ್ರತಿಭಾವಂತ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ವೈದ್ಯರಾಗುವಲ್ಲಿ ವೈದ್ಯಕೀಯ ಕಾಲೇಜುಗಳು ಸಹಕಾರಿಯಾಗಿವೆ ಎಂದು ಸಚಿವರು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜಿನ ಜತೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಕ್ರಿಟಿಕಲ್ ಕೇರ್ ಸೆಂಟರ್ ಆರಂಭಕ್ಕೆ ಪ್ರಯತ್ನಿಸಲಾಗಿದೆ ಎಂದು ಶರಣ ಪ್ರಕಾಶ ಪಾಟೀಲ್ ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಂದುವರಿದ ಕಾಮಗಾರಿಗೆ ಇನ್ನೂ 50ರಿಂದ 60 ಕೋಟಿ ರೂ. ಬಿಡುಗಡೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆ ದಿಸೆಯಲ್ಲಿ ಶೀಘ್ರ ಹಣ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದವರು ಹೇಳಿದರು.
ಶಾಸಕ ಡಾ| ಮಂತರ್ ಗೌಡ ಅವರು ಮಾತನಾಡಿ ಹಲವು ವರ್ಷಗಳ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗಿದೆ. ಇದರಿಂದ ಮೈಸೂರು, ಮಂಗಳೂರು ಹಾಗೂ ಸುಳ್ಯಕ್ಕೆ ಹೋಗುವುದು ತಪ್ಪಲಿದೆ ಎಂದರು. ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ ಸರಕಾರ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.