ಗರ್ಭಿಣಿ ಸಹಿತ ಎರಡು ಹೆಣ್ಣಾನೆ ಸಾವು
Team Udayavani, Nov 27, 2018, 9:53 AM IST
ತರೀಕೆರೆ/ಮಡಿಕೇರಿ: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಮತ್ತು ತರೀಕೆರೆ ತಾಲೂಕಿನ ಲಕ್ಕವಳ್ಳಿ
ಸಮೀಪ ಎರಡು ಕಾಡಾನೆಗಳು ಮೃತಪಟ್ಟಿವೆ.
ಮಾವಿನಹಳ್ಳದ ಭದ್ರಾ ಹಿನ್ನೀರಿನಲ್ಲಿ ಗರ್ಭ ಧರಿಸಿದ್ದ ಆನೆಯೊಂದರ ಮೃತದೇಹ ರವಿವಾರ ಪತ್ತೆಯಾಗಿದೆ. ಸೋಮವಾರ ಆನೆಯ ಶವ ಪರೀಕ್ಷೆ ನಡೆಸಿ ಅನಂತರ ಹೂಳಲಾಗಿದೆ. ರವಿವಾರ ಅರಣ್ಯ ಇಲಾಖೆ ಸಿಬಂದಿ ಗಸ್ತು ತಿರುಗುತ್ತಿದ್ದಾಗ ಭದ್ರಾ ಹಿನ್ನೀರಿನಲ್ಲಿ ಆನೆಯ ಶವ ತೇಲುತ್ತಿರುವುದು ಗೋಚರಿಸಿತ್ತು. ತತ್‌ಕ್ಷಣ ಮೇಲಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಸಿಬಂದಿ ಸ್ಥಳಕ್ಕೆ ತೆರಳಿ ಆನೆಯ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಅನಂತರ ಶವ ಪರೀಕ್ಷೆ ನಡೆಸಿದರು. ಈ ವೇಳೆ ಮೃತ ಆನೆ ಗರ್ಭಿಣಿಯಾಗಿದ್ದು, ಹೊಟ್ಟೆಯೊಳಗೆ 16ರಿಂದ 18 ತಿಂಗಳಿನ ಮರಿ ಇರುವುದು ಕಂಡುಬಂದಿದೆ. ಆನೆ ಸೋಂಕಿಗೆ ಒಳಗಾಗಿ ಮೃತಪಟ್ಟಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ.
ವೀರಾಜಪೇಟೆ: ಕಾಡಾನೆ ಸಾವು
ಮಡಿಕೇರಿ: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾ. ಪಂ. ವ್ಯಾಪ್ತಿಯ ಬಾರಿಕಾಡಿನ ತೋಟದ ಬಳಿ ಹೆಣ್ಣಾನೆ ಸಾವನ್ನಪ್ಪಿದೆ. ಸೋಮವಾರ ಬೆಳಗ್ಗೆ 8.30ರ ಸಮಯದಲ್ಲಿ ಗ್ರಾಮಸ್ಥರು ಕೆಲಸಕ್ಕೆ ತೆರಳುವ ಸಂದರ್ಭ ಅದೇ ಗ್ರಾಮದ ತಾ.ಪಂ. ಸದಸ್ಯ ಮಾಳೇಟಿರ ಪ್ರಶಾಂತ್ ಉತ್ತಪ್ಪ ಅವರ ತೋಟದ ಬದಿಯಲ್ಲಿ ಆನೆಯೊಂದು ನರಳುತ್ತಿರುವುದನ್ನು ಕಂಡು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಮೃತ ಕಾಡಾನೆಗೆ ಸುಮಾರು 60 ವರ್ಷವಾಗಿರಬಹುದೆಂದು ಅಂದಾಜಿಸಲಾಗಿದೆ. ಆಹಾರ ಜೀರ್ಣವಾಗದೆ ಹೊಟ್ಟೆ ಊದಿಕೊಂಡಿದ್ದು, ಅಪರಾಹ್ನ ಒಂದುಗಂಟೆ ಸುಮಾರಿಗೆ ಆನೆ ಮೃತಪಟ್ಟಿದೆ. ವಲಯ ಅರಣ್ಯಧಿಕಾರಿ ಕೆ.ಪಿ. ಗೋಪಾಲ್, ವೃತ್ತ ನಿರೀಕ್ಷಕ ಎನ್. ಕುಮಾರ್ ಆರಾಧ್ಯ, ಠಾಣಾಧಿಕಾರಿ ಸುರೇಶ್ ಬೋಪಣ್ಣ ಹಾಗೂ ಇತರರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.