ಬೆಳೆಹಾನಿ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ : ಜಿಲ್ಲಾಧಿಕಾರಿ
Team Udayavani, Mar 8, 2019, 1:00 AM IST
ಮಡಿಕೇರಿ: ಬೆಳೆಹಾನಿ ಪರಿಹಾರ ಸಂಬಂಧ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ, ಕೂಡಲೇ ಕಚೇರಿಗೆ ಸಲ್ಲಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪದ ಕಾಮಗಾರಿಗಳು ಹಾಗೂ ಪರಿಹಾರ ವಿತರಣೆ ಪ್ರಗತಿ ಕುರಿತು ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳೆಹಾನಿ ಸಂಬಂಧಿಸಿದಂತೆ ಈಗಾಗಲೇ ಬೆಳೆ ಪರಿಹಾರ ತಂತ್ರಾಂಶದಲ್ಲಿ ದಾಖಲಿ ಸಲಾಗುತ್ತಿದೆ. ಬಾಕಿ ಇರುವುದನ್ನು ತಂತ್ರಾಂಶದಲ್ಲಿ ಅಳವಡಿಸಿ ಮಾಹಿತಿ ಒದಗಿಸುವಂತೆ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಹಾಗೆಯೇ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಮನೆ, ತೋಟ ಕಳೆದುಕೊಂಡ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಕುಟುಂಬದವರ ನಿಖರ ಮಾಹಿತಿಯನ್ನು ಶುಕ್ರವಾರದೊಳಗೆ ಒದಗಿಸುವಂತೆ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ ಕುಟುಂಬದವರಲ್ಲಿ ಸುಮಾರು 76 ಕುಟುಂಬಗಳ ದಾಖಲಾತಿ ಇಲ್ಲದಿರುವ ಬಗ್ಗೆ ಮಾಹಿತಿ ಇದ್ದು, ಈ ಸಂಬಂಧ ಪುನರ್ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಬಾಣೆ ಭೂಮಿಗೆ ಸಂಬಂಧಿಸಿದಂತೆ ಬೆಳೆಹಾನಿ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಸಂಬಂಧ ಪರಿಹಾರ ಯಾರಿಗೆ ನೀಡಬಹುದು ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ಕಂದಾಯ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಈಗಾಗಲೇ ಜಂಬೂರು, ಮದೆ, ಕರ್ಣಂಗೇರಿಯಲ್ಲಿ ನಿರ್ಮಾಣವಾಗು ತ್ತಿರುವ ಮನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ಅವರು ಸೂಚಿಸಿದರು.
ಕೆ.ಲಕ್ಷಿ¾ಪ್ರಿಯಾ ಅವರು ಮನೆಗಳನ್ನು ಕೂಡಲೇ ನಿರ್ಮಾಣ ಮಾಡಬೇಕಿದೆ. ಜೊತೆಗೆ ಬೆಳೆಹಾನಿಯ ಪರಿಹಾರವನ್ನು ಅರ್ಹ ಕುಟುಂಬಗಳಿಗೆ ತಲುಪಿಸಬೇಕಿದೆ ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಮಾತನಾಡಿದರು. ತಹಶೀ ಲ್ದಾರರಾದ ಗೋವಿಂದ ರಾಜು, ಕಂದಾ ಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.