ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ : ಪವನೇಶ್
Team Udayavani, Jul 4, 2017, 3:45 AM IST
ಮಡಿಕೇರಿ: ದೇಶದ ಸಂವಿಧಾನದ 51 (ಎ) ಅಡಿಯಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯಗಳಲ್ಲಿ ಒಂದಾಗಿದೆ. ಈ ಬಗ್ಗೆ ನಾವು ಕಾಳಜಿ ತೋರಬೇಕಾಗುತ್ತದೆ. ಕಾನೂನಿಂದಲೇ ಇದೆಲ್ಲವನ್ನೂ ರಕ್ಷಿಸಲು ಸಾಧ್ಯವಿಲ್ಲ, ಬದಲಿಗೆ ಸಾರ್ವಜನಿಕರ ಸಹಕಾರದಿಂದ ಮಾತ್ರ ಪರಿಸರ ರಕ್ಷಣೆ ಸಾಧ್ಯ ಎಂದು ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪವನೇಶ್ ಡಿ. ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನೆಹರು ಯುವಕೇಂದ್ರ, ಗ್ರೀನ್ ಸಿಟಿ ಫೋರಂ, ರೋಟರಿ ಕ್ಲಬ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಒಡಿಪಿ ಸಂಸ್ಥೆ, ತಾಲೂಕು ಯುವ ಒಕ್ಕೂಟ, ಅರಣ್ಯ ಇಲಾಖೆ, ಮಡಿಕೇರಿ, ಗ್ರಾಮ ಪಂಚಾಯತ್, ಸರಕಾರಿ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಕಾರ್ನರ್ ಫ್ರೆಂಡ್ಸ್, ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಕಡಗದಾಳು ಗ್ರಾಮ ಇವರ ಸಂಯುಕ್ತಾಶ್ರಯದಲ್ಲಿ ಬೊಟ್ಟಪ್ಪ ಯುವ ಸಂಘದ ಬೆಳ್ಳಿ ಮಹೋತ್ಸವದ ಅಂಗವಾಗಿ ಕಡಗದಾಳು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ನಡೆಯಿತು.
ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನ್ಯಾಯಾಧೀಶರು ಗಿಡ ನೆಡುವುದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನವೂ ಪರಿಸರ ಕಾಳಜಿ ಪಾಲಿಸುವಂತಾಗಬೇಕು. ಪರಿಸರದ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಎಂದರು.
ವಕೀಲರ ಸಂಘದ ಕಾರ್ಯದರ್ಶಿ ಪಿ.ಯು. ಪ್ರೀತಂ ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ. ಪ್ರವಾಸಿಗರಿಗೆ, ಮಕ್ಕಳಿಗೆ ವಿವಿಧ ಸಸಿಗಳ ಬೀಜಗಳನ್ನೊಳಗೊಂಡ ಮಣ್ಣಿನಿಂದ ಮಾಡಿದ ಚೆಂಡುಗಳನ್ನು ನೀಡಿ ಅವರು ಅದನ್ನು ಎಲ್ಲೆಂದರಲ್ಲಿ ಬಿಸಾಡಿದಾಗ ಅಲ್ಲಿ ಪ್ರಾಕೃತಿಕವಾಗಿ ಸಸಿ ಹುಟ್ಟುವಂತಹ ವ್ಯವಸ್ಥೆಯ ಬಗ್ಗೆ ತಿಳಿಸಿದರು.
ಗ್ರಾ.ಪಂ. ಉಪಾಧ್ಯಕ್ಷರಾದ ಎಂ.ಪಿ. ತಿಮ್ಮಯ್ಯ ಅವರು ಮಾತನಾಡಿ ನಾವು ಇಂದು ಆಧುನಿಕತೆಯ ನೆಪ ಹೇಳಿ ವಿಷಯುಕ್ತ ಗಾಳಿ, ಪರಿಸರದಲ್ಲಿ ಜೀವಿಸುವಂತಾಗಿದೆ. ಇದು ಕೇವಲ ಸಂಬಂಧಿಸಿದ ಇಲಾಖೆಗಳಿಗೆ ಮಾತ್ರ ಸಂಬಂಧಿಸಿದಲ್ಲ. ಪ್ರತಿಯೊಬ್ಬರೂ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.
ಸಹಾಯಕ ಪರಿಸರಧಿಕಾರಿ ಅವರು ಮಾತನಾಡಿ ಗಿಡ ನೆಡುವುದಕ್ಕೂ ಕುಡಿಯುವ ನೀರಿಗೂ ಸಂಬಂಧವಿದೆ. ಉತ್ತಮ ಪರಿಸರವಿದ್ದಾಗ ನೀರು ಮಾಲಿನ್ಯವಾಗದೆ ಶುದ್ಧವಾಗಿರುತ್ತದೆ. ಕೊಡಗನ್ನು ಪರಿಸರ ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಇಲಾಖೆಯ ಗುರಿಯಾಗಿದೆ ಎಂದರು.
ಕಡಗದಾಳು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಂಗಮ್ಮ ಅವರು ಮನುಷ್ಯ ಸ್ವಾರ್ಥಕ್ಕಾಗಿ ಇಂದು ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ನಾವೀಗ ಹವಾಮಾನ ವೈಪರೀತ್ಯ ಕಾಣುವಂತಾಗಿದೆ ಎಂದರು.
ವೇದಿಕೆಯಲ್ಲಿ ಗ್ರೀನ್ ಸಿ.ಟಿ. ಪೋರಂನ ರತನ್ ತಮ್ಮಯ್ಯ, ಅರಣ್ಯ ಅಧಿಕಾರಿ ವಿನುತಾ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನೀಲಮ್ಮ, ಯುವ ಸಂಘದ ಅಧ್ಯಕ್ಷರಾದ ಕೆ.ಬಾಲನ್, ಒಡಿಪಿ ಸಂಸ್ಥೆಯ ಜಾಯ್ಸ ಮೆನೇಜಸ್, ಟಿ.ಆರ್.ವಾಸು, ಬಿ.ಡಿ.ನಾರಾಯಣ ರೈ, ಎಂ.ಎಸ್. ಯೂಸಫ್, ಜಲೀಲ್, ರಮೇಶ ರೈ, ಗೀತಾ ರಮೇಶ, ರಮೇಶ ಆಚಾರಿ, ಕೆ.ಅಯ್ಯಪ್ಪ ಕೊರವಂಡ ಮಾಚಯ್ಯ ಹಾಜರಿದ್ದರು.
ಜಯಪ್ಪ ಸ್ವಾಗತಿಸಿ, ನಿರೂಪಿಸಿದರು. ಜಾಯ್ಸ ಮಿನೇಜಸ್ ವಂದಿಸಿದರು. ಇದಾದ ಅನಂತರ ಶಾಲೆ ದೇವಸ್ಥಾನ, ಮಸೀದಿ ಮತ್ತು ರಸ್ತೆಯ ಬದಿಗಳಲ್ಲಿ ಗಿಡ ನೆಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.