ಕೊಡಗು ಅಭಿವೃದ್ಧಿಗೆ ಗಮನ ಹರಿಸಿ: ಅನ್ಬುಬ್ ಕುಮಾರ್
Team Udayavani, Nov 12, 2020, 8:21 PM IST
ಮಡಿಕೇರಿ: ಮಳೆಗಾಲ ಮುಗಿದಿದ್ದು, ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳತ್ತ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಬ್ ಕುಮಾರ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಕಾಮಗಾರಿಗಳ ಪ್ರಗತಿ, ಕೋವಿಡ್-19 ನಿರ್ವಹಣೆ, ಮತ್ತಿತರದ ಮಾಹಿತಿ ಪಡೆದು ಅವರು ಮಾತನಾಡಿದರು.
ಎಪ್ರಿಲ್, ಮೇ ವರೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದ್ದು, ಈಗಿನಿಂದಲೇ ಅಭಿವೃದ್ಧಿ ಕಾರ್ಯದತ್ತ ವಿಶೇಷ ಆದ್ಯತೆ ನೀಡಬೇಕು. ಹಾಗೆಯೇ ಸರಕಾರದ ಹಲವು ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
2019ರಲ್ಲಿ ಸಂಭವಿಸಿದ ಮಳೆಹಾನಿ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿ ನಿರ್ವಹಣೆ ಸಂಬಂಧ ಬಿಲ್ಲನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಅವರು ಸೂಚಿಸಿದರು.
2019ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅಂಗನವಾಡಿ, ಶಾಲಾ ಕಟ್ಟಡಗಳು, ಆಸ್ಪತ್ರೆ, ರಸ್ತೆ, ವಿದ್ಯುತ್ ಕಂಬ ಹೀಗೆ ಹಲವು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇವುಗಳು ಮೂಲ ಸೌಲಭ್ಯಗಳಲ್ಲಿ ಅತೀ ಮುಖ್ಯವಾಗಿವೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು 2019ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸ್ವಂತ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳುವವರಿಗೆ ಈಗಾಗಲೇ ಪ್ರಥಮ ಹಂತದಲ್ಲಿ ಒಂದು ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ. ಹಣ ಪಡೆದ ಶೇ.50ರಷ್ಟು ಮಂದಿ ಮನೆ ಕಾಮಗಾರಿ ಆರಂಭಿಸಿಲ್ಲ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಹೋಬಳಿವಾರು ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಈಗಾಗಲೇ 97 ಶೇ. ದಷ್ಟು ಬೆಳೆ ಸಮೀಕ್ಷೆಯಾಗಿದೆ ಎಂದರು.
ಮಳೆಹಾನಿ ಕಾಮಗಾರಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ಶ್ರೀ ಕಂಠಯ್ಯ ಅವರು ಮಾಹಿತಿ ನೀಡಿದರು.
ಕೋವಿಡ್-19 ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಕೆ.ಮೋಹನ್ ಅವರು ಜಿಲ್ಲೆಯಲ್ಲಿ ಪ್ರತೀ ದಿನ ಕೋವಿಡ್ ಪರೀಕ್ಷೆ ಗುರಿ ಹೆಚ್ಚಿಸಲಾಗಿದೆ ಎಂದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಸ್ವತ್ಛ ಭಾರತ್ ಅಭಿಯಾನ ಯೋಜನೆಯಡಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲಾಗುತ್ತಿದೆ. ಪ್ರತೀ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಂಬಂಧಿಸಿದಂತೆ ಹೆಚ್ಚಿನ ಗಮನಹರಿಸಲಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್, ತಹಶೀಲ್ದಾರರಾದ ಗೋವಿಂದರಾಜು (ಸೋಮವಾರಪೇಟೆ), ಮಹೇಶ್ (ಮಡಿಕೇರಿ), ನಂದೀಶ್ (ವಿರಾಜಪೇಟೆ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ, ವಿರಾಜಪೇಟೆ ಪಟ್ಟಣ ಪಂಚಾಯತ್‌ಮುಖ್ಯಾಧಿಕಾರಿ ಶ್ರೀಧರ್ ನಾನಾ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.