ಅರಣ್ಯ ಹಕ್ಕು ಕಾಯ್ದೆ : ಎಸಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸೂಚನೆ
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
Team Udayavani, Jun 28, 2019, 5:05 AM IST
ಮಡಿಕೇರಿ: ಅರಣ್ಯ ಹಕ್ಕು ಕಾಯ್ದೆಯಡಿ ಜಿಲ್ಲೆಯ ಅರಣ್ಯ ವಾಸಿಗಳಿಗೆ ಸಮರ್ಪಕ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಇಲಾಖಾ ಅಧಿಕಾರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮ ರೀತ್ಯಾ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಶ¾ಶಾನಕ್ಕೆ ಬದಲಿ ಪರ್ಯಾಯ ಜಾಗ ಗುರುತಿಸುವಂತೆ ವಿರಾಜಪೇಟೆ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಸೋಮವಾರಪೇಟೆ ತಾಲೂಕಿನ ನಿಡ್ತ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ¾ಶಾನದ ಸಮಸ್ಯೆಗೆ ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಸೋಮವಾರಪೇಟೆ ತಾ.ಪಂ.ಇಒಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕಳೆದ ಬಾರಿ ನಡೆದ ಸಭೆಯ ಅನುಪಾಲನಾ ವರದಿ ಪ್ರಗತಿ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ಪಡೆದರು.
ಜೇನು ಕುರುಬರಿಗೆ ಅವಶ್ಯವಿರುವ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ದಿಸೆಯಲ್ಲಿ ಅಗತ್ಯ ಕ್ರಮಕೈಗೊಂಡು ಕೃಷಿ ಚಟುವಟಿಕೆಗಳಿಗೆ ನೆರವು ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಅರಣ್ಯ ಹಕ್ಕು ಕಾಯ್ದೆಯಡಿ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಿ ಅರ್ಹ ಅರಣ್ಯ ವಾಸಿಗಳಿಗೆ ಅನು ಕೂಲವಾಗಬೇಕು.
ಹಲವು ದಶಕಗಳಿಂದ ಅರಣ್ಯದಲ್ಲಿಯೇ ವಾಸ ವಿರುವ ಮೂಲ ನಿವಾಸಿಗಳ ಹಕ್ಕುಗಳ ರಕ್ಷಣೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಐಟಿಡಿಪಿ ಅಧಿಕಾರಿ ಶಿವಕುಮಾರ್‌ಗೆ ತಿಳಿಸಿದರು.
ಸಮಿತಿಯ ಸದಸ್ಯರಾದ ಮುತ್ತಪ್ಪ ಅವರು ಮಾತನಾಡಿ ನಾಪೋಕ್ಲು ಪಂಚಾ ಯತ್ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಹಾಡಿಗಳಲ್ಲಿ ವಿದ್ಯುತ್ ಸಮಸ್ಯೆಯನ್ನು ನಿವಾರಿಸಬೇಕು.
ಹಾಡಿಯ ಪ್ರದೇಶಕ್ಕೆ ಸಂಚಾರಿ ನ್ಯಾಯಬೆಲೆ ಅಂಗಡಿ, ರಸ್ತೆ ವ್ಯವಸ್ಥೆ, ಅಂಬೇಡ್ಕರ್ ಭವನ ಹಾಗೂ 94 ಸಿಸಿ ರಡಿಯಲ್ಲಿ ಹಕ್ಕು ಪತ್ರ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ವ್ಯಾಪ್ತಿಯಲ್ಲಿ ಇರುವ ಹಾಡಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ತುರ್ತಾಗಿ ಅವಶ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಮಿತಿಯ ಸದಸ್ಯರಾದ ಸುಕುಮಾರ್, ಜೇನುಕುರುಬರ ಕೆಂಪ ಅವರು ಪರಿಶಿಷ್ಟರ ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ತಹಶೀಲ್ದಾರರಾದ ಗೋವಿಂದ ರಾಜು, ಕುಸುಮ, ತಾಲೂಕು ಪಂಚಾಯತ್ ಇಒಗಳಾದ ಲಕ್ಷ್ಮೀ ಸುನಿಲ್ ಕುಮಾರ್ ಜಯಣ್ಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿ ಪರಿಶೀಲನಾ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗಾಗಿ ವಿವಿಧ ಇಲಾಖೆಯಲ್ಲಿ ಮೀಸಲಿರುವ ಅನುದಾನವನ್ನು ಕಾಲ ಮಿತಿಯೊಳಗೆ ವಿನಿಯೋಗಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ಅಭಿವೃದ್ಧಿ ನಿಗಮ ವ್ಯವಸ್ಥಾಪಕರಾದ ಕುಮಾರ, ಯು. ಸೇ.ಮತ್ತು ಕ್ರೀ. ಇ.ಸ. ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ, ಕೈಮಗ್ಗ ಮತ್ತು ಜವುಳಿ ಇಲಾಖೆಯ ಗುರುಸ್ವಾಮಿ, ಸಹಕಾರ ಇಲಾಖೆಯ ಸ.ನಿ. ರವಿಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.