ಜಿಲ್ಲಾಡಳಿತ ಭವನದ ಮುಂಭಾಗ ಸಿಎನ್‌ಸಿ ಸಂಘಟನೆ ಪ್ರತಿಭಟನೆ
Team Udayavani, Feb 23, 2019, 12:30 AM IST
ಮಡಿಕೇರಿ: ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ನೂಲ್‌ಗೆ ಸೇರಿಸಬೇಕು ಮತ್ತು ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕು ಎನ್ನುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು, ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಇಂದು ಸಿಎನ್‌ಸಿ ಸಂಘಟನೆಯಿಂದ ಜಿಲ್ಲಾಡಳಿತ ಭವನದ ಮುಂಭಾಗ ಸತ್ಯಾಗ್ರಹ ನಡೆಯಿತು.
ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿ ಸಂಘಟನೆಯ ಕಾರ್ಯಕರ್ತರು ಸತ್ಯಾಗ್ರಹ ನಡೆಸಿ, 18 ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಮನವಿಯಲ್ಲಿ ಪ್ರಮುಖವಾಗಿ, ಆಕ್ಸ್‌ಫರ್ಡ್ ಶಬ್ದಕೋಶದಲ್ಲಿ ಜಗತ್ತಿನ ವಿವಿಧ ಭಾಷೆಗಳ 15 ಸಾವಿರ ಪದಗಳನ್ನು ಆಯ್ಕೆ ಮಾಡಿ ಅಳವಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು ಈ ಆಕ್ಸ್‌ಫರ್ಡ್ ಶಬ್ದಕೋಶದಲ್ಲಿ ಕೊಡವ ಭಾಷೆಯ ಪದಗಳನ್ನು ಸೇರಿಸುವಂತಾಗಬೇಕು, ಜಾಗತಿಕ ನಳಂದ ವಿಶ್ವವಿದ್ಯಾನಿಲಯ, ಇಂದಿರಾಗಾಂಧಿ ಬುಡಕಟ್ಟು ವಿಶ್ವಿವಿದ್ಯಾನಿಲಯ ಮತ್ತು ಆಂಧ್ರದ ದ್ರಾವಿಡ ವಿಶ್ವವಿದ್ಯಾನಿಲಯದಲ್ಲಿ ಕೊಡವ ಶಾಸ್ತ್ರ ಮತ್ತು ಕೊಡವ ತಕ್Rನ ಅಧ್ಯಯನ ಪೀಠಗಳನ್ನು ಸ್ಥಾಪಿಸುವಂತೆಯೂ ಒತ್ತಾಯಿಸಲಾಗಿದೆ.
ಜ್ಞಾಪನಾ ಪತ್ರವನ್ನ ರಾಷ್ಟ್ರಪತಿ ರಾಮನಾಥ್ ಖೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಸೇರಿದಂತೆ ಹಲ ಗಣ್ಯರಿಗೆ ಕಳುಹಿಸಿಕೊಡಲಾಗಿದೆ.ಸತ್ಯಾಗ್ರಹದಲ್ಲಿ ಕಲಿಯಂಡ ಪ್ರಕಾಶ್, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಬೊಟ್ಟಂಗಡ ಸವಿತಾ, ಕಲಿಯಂಡ ಮೀನ, ಅಜ್ಜೆಟ್ಟಿರ ರಾಣಿ, ಪುಲ್ಲೆರ ಸ್ವಾತಿ, ಚಂಬಂಡ ಜನತ್, ಬೊಟ್ಟಂಗಡ ಗಿರೀಶ್, ಆರೆಯಡ ಗಿರೀಶ್, ಮೊಣ್ಣಂಡ ಕರಿಯಪ್ಪ, ಬೇಪಡಿಯಂಡ ಬಿದ್ದಪ್ಪ, ನಂದಿನೆರವಂಡ ವಿಜು, ಅಪ್ಪಾರಂಡ ಪ್ರಕಾಶ್, ಆಜ್ಜಿಕುಟ್ಟಿರ ಲೋಕೇಶ್, ಕಿರಿಯಮಾಡ ಶೆರಿನ್, ಕೂಪದಿರ ಸಾಬು, ಪುಲ್ಲೆರ ಕಾಳಪ್ಪ, ಜಮ್ಮಡ ಮೋಹನ್, ಮಾಚಿಮಾಡ ಲವ ಗಣಪತಿ, ಕಾಟುಮಣಿಯಂಡ ಉಮೇಶ್ ಮೊದಲಾದವರು ಸತ್ಯಾಗ್ರಹ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು
Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ: 14 ಮಂದಿ ತಪ್ಪಿತಸ್ಥರು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.