Madikeri ಮಾಲ್ದಾರೆಯಲ್ಲಿ ಆತಂಕ ಸೃಷ್ಟಿಸಿರುವ ಗಜ ಪರಿವಾರ
Team Udayavani, Sep 12, 2023, 11:23 PM IST
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಕೈಮೀರುತ್ತಿದೆ. ಸಿದ್ದಾಪುರದ ಮಾಲ್ದಾರೆ- ಹುಂಡಿ ಗ್ರಾಮ ವ್ಯಾಪ್ತಿಯಲ್ಲಿ 20ಕ್ಕೂ ಅಧಿಕ ಸಂಖ್ಯೆಯ ಗಜ ಪರಿವಾರ ಹಾಡಹಗಲೇ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಜೀವಭಯ ಮೂಡಿದೆ.
ಕಳೆದ ಒಂದು ವಾರದಿಂದ ತೋಟದಿಂದ ತೋಟಕ್ಕೆ ಸಂಚರಿಸುತ್ತಿರುವ ಕಾಡಾನೆಗಳ ಹಿಂಡು ಅಪಾರ ನಷ್ಟ ಉಂಟು ಮಾಡಿವೆ. ಮೂರಕ್ಕೂ ಹೆಚ್ಚು ಮರಿಗಳ ಸಹಿತ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿರುವ ಗಜ ಪರಿವಾರದಿಂದ ಕಾರ್ಮಿಕರು ತೋಟಗಳಿಗೆ ಕೆಲಸಕ್ಕೆ ಬರುತ್ತಿಲ್ಲ. ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳಲು ಧೈರ್ಯ ತೋರುತ್ತಿಲ್ಲ. ವಾಹನ ಚಾಲಕರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾಗಿದೆ.
ಮರಿಗಳು ಜತೆಯಲ್ಲೇ ಇರುವುದರಿಂದ ಮನುಷ್ಯರ ಮೇಲೆ ದಿಢೀರ್ ದಾಳಿ ನಡೆಸುವ ಸಾಧ್ಯತೆಗಳೇ ಹೆಚ್ಚಾಗಿದೆ. ಅರಣ್ಯ ಸಿಬಂದಿ ಆನೆಗಳನ್ನು ಕಾಡಿಗಟ್ಟಿದರೂ ಮರಳಿ ಬಂದು ತೋಟಗಳಲ್ಲಿ ನೆಲೆ ನಿಲ್ಲುತ್ತಿವೆ. ಅರಣ್ಯ ಇಲಾಖೆ ಕೂಡ ಅಸಹಾಯಕವಾಗಿದೆ.
ಕಾಡಾನೆಗಳ ದಾಳಿಯನ್ನು ತಡೆಯಲು ಸರಕಾರ ಶಾಶ್ವತ ಪರಿಹಾರ ಸೂಚಿಸಬೇಕೆಂದು ಕಳೆದ ಒಂದು ದಶಕದಿಂದ ಗ್ರಾಮಸ್ಥರು ಆಗ್ರಹಿಸುತ್ತಲೇ ಬಂದಿದ್ದಾರೆ. ಆದರೆ ಕಾಡಾನೆ ದಾಳಿಗೆ ಸಿಲುಕಿ ಅಮಾಯಕ ಜೀವಗಳು ನಿರಂತರವಾಗಿ ಬಲಿಯಾಗುತ್ತಿವೆಯೇ ಹೊರತು ದಾಳಿ ತಡೆಗೆ ಇನ್ನೂ ಕೂಡ ಮಾರ್ಗೋಪಾಯಗಳನ್ನು ಕಂಡುಕೊಂಡಿಲ್ಲ. ಸದ್ಯ ಮಾಲ್ದಾರೆ- ಹುಂಡಿ ಗ್ರಾಮಸ್ಥರಿಗೆ ಗಜ ದಿಗ್ಬಂಧನದಂತಾಗಿದೆ.
ಹುಲಿ ದಾಳಿ: ಹಸು ಬಲಿ
ಮಡಿಕೇರಿ: ಮಾಲ್ದಾರೆ ಭಾಗದಲ್ಲಿ ವನ್ಯಜೀವಿಗಳ ದಾಳಿ ಎಲ್ಲೆ ಮೀರಿದೆ. ಕಾಡಾನೆಗಳ ಹಿಂಡಿನ ಸಂಚಾರದ ನಡುವೆಯೇ ಹುಲಿ ಉಪಟಳವೂ ಹೆಚ್ಚಾಗಿದ್ದು, ಕಾರ್ಮಿಕ ಸ್ವಾಮಿ ಅವರಿಗೆ ಸೇರಿದ ಹಸುವನ್ನು ಮಂಗಳವಾರ ಹಾಡಹಗಲೇ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.