“ಅಹಿಂಸಾವಾದಿ ಮಹಾತ್ಮ ವಿಶ್ವಕ್ಕೇ ಪಿತಾಮಹ’
ಮಡಿಕೇರಿಯಲ್ಲಿ ಗಾಂಧಿ ಜಯಂತಿ ಆಚರಣೆ
Team Udayavani, Oct 5, 2019, 5:23 AM IST
ಮಡಿಕೇರಿ:ಶಾಂತಿ, ಸತ್ಯ, ಅಹಿಂಸಾ ಮಾರ್ಗದ ಮೂಲಕ ಜಗತ್ತನ್ನು ಗೆಲ್ಲಬಹುದು ಎಂಬ ಸಂದೇಶ ಸಾರಿದ ಮಹಾತ್ಮ ಗಾಂಧೀಜಿ ಅವರು ಇಡೀ ವಿಶ್ವಕ್ಕೆ ಪಿತಾಮಹ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಬಣ್ಣಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮ ವರ್ಷಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸಿŒ ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರು ಮಹಾನ್ ಮಾನವತಾವಾದಿ, ಸಮಾಜವಾದಿಯಾಗಿ ಶಾಂತಿ, ಅಹಿಂಸೆ ಮೂಲಕ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಲಾಲ್ ಬಹುದ್ದೂರ್ ಶಾಸಿŒ ಅವರು ಅಪ್ಪಟ್ಟ ಗಾಂಧಿವಾದಿಯಾಗಿ ಗಾಂಧಿ ತತ್ವದಂತೆ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದರು ಎಂದು ಅವರು ಸ್ಮರಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಗಾಂಧೀಜಿಯವರ ತತ್ವಗಳು, ಸಿದ್ಧಾಂತಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ಮಾತನಾಡಿ ಗಾಂಧೀಜಿಯವರ ಸರಳತೆ, ಅಹಿಂಸೆ, ಸತ್ಯ, ಶಾಂತಿ, ಪ್ರೀತಿ ಸಮತೆಗಳ ಸಕಾರ ಮಾದರಿ ಎಂದು ನುಡಿದರು.
ಪಾಪು-ಬಾಪು ಪುಸ್ತಕ ಬಿಡುಗಡೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರ ತರಲಾಗಿದ್ದ ಪಾಪು-ಬಾಪು ಕಿರು ಪುಸ್ತಕವನ್ನು ಇದೇ ಸಂದರ್ಭ ಅನಾವರಣಗೊಳಿಸಲಾಯಿತು. ಮಹಾತ್ಮ ಗಾಂಧೀಜಿ 150 ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು. ಗಾಂಧೀಜಿ ಕುರಿತ ಅಪರೂಪದ ಛಾಯಾಚಿತ್ರ ಪ್ರದರ್ಶನ ಜರುಗಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಸಿ ವಿತರಣೆ :
ಆಯುಷ್ಮಾನ್ ಆರೋಗ್ಯ ಕಾರ್ಡ್ ಮತ್ತು ಸಸಿ ವಿತರಣೆ ಮಾಡಲಾಯಿತು. ಮಹಾತ್ಮ ಗಾಂಧೀಜಿ ಕುರಿತು ಗೀತಾಗಾಯನ ನಡೆಯಿತು. ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಪೌರಾಯುಕ್ತ ಎಂ.ಎಲ್.ರಮೇಶ್, ತಹಶೀಲ್ದಾರ್ ಮಹೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಉಪಸ್ಥಿತರಿದ್ದರು. ಚಿನ್ನಸ್ವಾಮಿ ಸ್ವಾಗತಿಸಿದರು, ಲಿಯಾಕತ್ ಅಲಿ ವೈಷ್ಣವ ಗೀತೆ ಹಾಡಿದರು.
ಮುನೀರ್ ಅಹ್ಮದ್ ನಿರೂಪಿಸಿದರು, ಲಹರಿ ಶಿಕ್ಷಕರ ತಂಡದವರು ನಾಡಗೀತೆ ಹಾಡಿದರು. ಮಂಜುನಾಥ್ ಅವರುವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.