ಚುನಾವಣಾ ಬಹಿಷ್ಕಾರದ ಬಿಸಿ : ಚೇಲಾವರಕ್ಕೆ ತಹಶೀಲ್ದಾರ್ ಭೇಟಿ
Team Udayavani, Mar 26, 2019, 6:30 AM IST
ಮಡಿಕೇರಿ :ಚುನಾವಣೆ ಸಮೀಪಿಸುತ್ತಿರುವಂತೆಯೇ ಮೂಲ ಸಮಸ್ಯೆಗಳನ್ನು ಎದುರಿಸುತ್ತಿರುವ ಗ್ರಾಮಗಳ ಮತದಾರರು ಚುನಾವಣೆ ಬಹಿಷ್ಕರಿಸುವ ಬೆದರಿಕೆವೊಡ್ಡುವ ಮೂಲಕ ಅಭಿವೃದ್ಧಿ ಕಾರ್ಯಗಳು ಈ ನೆಪದಲ್ಲಾದರು ನಡೆಯಲಿ ಎನ್ನುವ ನಿರೀಕ್ಷೆಯಲ್ಲಿದ್ದಾರೆ.
ಮೂಲ ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದ ಚೇಲಾವರ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನು ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಮಡಿಕೇರಿ ತಹಶೀಲ್ದಾರ್ ನಟೇಶ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಸ್ಯೆಗಳ ಬಗ್ಗೆ ಸಮಾಲೋಚಿಸಿ ಪರಿಹಾರದ ಭರವಸೆ ನೀಡಿದರು. ಗ್ರಾಮಸ್ಥ ಪಟ್ಟೇಚರುವಂಡ ಸುಬ್ಬಯ್ಯ ಮಾತನಾಡಿ ಚೇಲವಾರ-ಪತ್ತೇಟಿ ರಸ್ತೆ ದುರಸ್ತಿ ಕಾಣದೆ 20 ವರ್ಷಗಳೇ ಕಳೆದಿದೆ. ರಸ್ತೆ ಅಭಿವೃದ್ಧಿಮಾಡುತ್ತಿಲ್ಲ. ವಿದ್ಯುತ್ ಪೂರೈಕೆಯೂ ಸಮರ್ಪಕವಾಗಿಲ್ಲ, ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದೆ ಎಂದು ಆರೋಪಿಸಿದರು.
ಮತ್ತೂಬ್ಬ ಗ್ರಾಮಸ್ಥ ತಿಲಕ್ ಮಾತನಾಡಿ ಗ್ರಾಮದಲ್ಲಿ ಸಮಾರು 800 ಮತದಾರರಿದ್ದು, 400 ಕ್ಕಿಂತ ಅಧಿಕ ಕುಟುಂಬಗಳಿವೆ. ಗ್ರಾ.ಪಂ, ತಾ.ಪಂ, ಜಿ.ಪಂ ಪ್ರತ್ರಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮದ ಸಮಸ್ಯೆಗಳಿಗೆ ಇಲ್ಲಿಯವರೆಗೆ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ಆರೋಪಿಸಿದರು.
ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಇದನ್ನು ಚಲಾಯಿಸುವಂತೆ ಮನವೊಲಿಸಿದರು. ಸಮಸ್ಯೆಗಳ ಪರಿಹಾರಕ್ಕೆ ಇದು ಸೂಕ್ತ ಸಮಯವಲ್ಲ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಲಾಖೆಯ ಮಟ್ಟದಲ್ಲಿ ಸಭೆ ಕರೆಯುವುದು ಅಸಾಧ್ಯವಾಗಿದೆ. ಚುನಾವಣೆ ಮುಗಿದ ನಂತರ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಗಳ ಸಮಗ್ರ ವರದಿಯನ್ನು ಸಿದ್ಧಪಡಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಹಶೀಲ್ದಾರರುಭರವಸೆ ನೀಡಿದರು. ಚೇಲಾವರ ಯುವಕ ಸಂಘದ ಅಧ್ಯಕ್ಷ ಜೈನೀರ ತನು, ನಾಪೋಕ್ಲು ಹೋಬಳಿಯ ಕಂದಾಯ ಪರಿವೀಕ್ಷಕ ಡಿ.ರಾಮಯ್ಯ, ಗ್ರಾಮ ಲೆಕ್ಕಾಧಿಕಾರಿ ಸ್ವಾತಿ, ಗ್ರಾಮ ಸಹಾಯಕ ಕೆ.ಎಂ.ರಾಜ, ನರಿಯಂದಡ ಗ್ರಾ.ಪಂ ಉಪಾಧ್ಯಕ್ಷ ರತೀಶ್ ಕುಮಾರ್‌ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.