ನಾಪೋಕ್ಲು ಪರಿಸರದಲ್ಲಿ ಭಾರೀ ಮಳೆ, ಹಾನಿ: ವಿವಿಧೆಡೆ ರಸ್ತೆಗೆ ಉರುಳಿದ ಮರಗಳು
Team Udayavani, May 18, 2023, 7:05 AM IST
ಮಡಿಕೇರಿ: ನಾಪೋಕ್ಲುವಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಗಾಳಿಯೊಂದಿಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ಮರಗಳು, ವಿದ್ಯುತ್ ಕಂಬಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.
ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮರವೊಂದು ರಸ್ತೆಗೆ ಅಡ್ಡ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ನಾಪೋಕ್ಲು – ಭಾಗಮಂಡಲ ಮುಖ್ಯರಸ್ತೆಯ ಹಳೇತಾಲೂಕಿನಲ್ಲಿ ತೆಂಗಿನ ಮರವೊಂದು ಅಜ್ಜೆàಟ್ಟಿರ ರಾಜ ಅವರ ಟಯರ್ ಅಂಗಡಿಯ ಮೇಲೆ ಬಿದ್ದು ನಷ್ಟ ಸಂಭವಿಸಿದೆ.
ಅಪಾಯದಿಂದ ಪಾರು
ತೆಂಗಿನ ಮರ ಬೀಳುವ ಸಂದರ್ಭದಲ್ಲಿ ಮಂಗಳೂರಿನಿಂದ ಭಾಗಮಂಡಲಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕುಟುಂಬವೊಂದು ಇದೇ ಮಳಿಗೆಯ ಮುಂಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ನಿಂತಿತ್ತು. ಮರ ಬಿದ್ದರೂ ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ.
ವಿದ್ಯುತ್ ವ್ಯತ್ಯಯ
ಗಾಳಿ ಮಳೆಯಿಂದ ವಿವಿಧೆಡೆ ಅಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ವಾಗಿದೆ. ಎರಡು ಕಡೆಗಳಲ್ಲಿ ಒಂದೇ ಸಮಯಕ್ಕೆ ರಸ್ತೆಗೆ ಮರ ಉರುಳಿದ ಪರಿಣಾಮ ಕೆಲಕಾಲ ನಾಪೋಕ್ಲು ಮುಖ್ಯರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಸ್ಥಳಕ್ಕೆ ನಾಪೋಕ್ಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಸದಸ್ಯ ಅರುಣ್ ಬೇಬ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ನಾಪೋಕ್ಲು ಸೆÓR… ಇಲಾಖೆಯ ಸಿಬಂದಿ ಭೇಟಿ ನೀಡಿ ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆಯಲ್ಲಿದ್ದ ಮರಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.