HIV: ಕೊಡಗಿನಲ್ಲಿ 13 ವರ್ಷಗಳಲ್ಲಿ 657 ಸಾವು
Team Udayavani, Nov 22, 2023, 11:45 PM IST
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 2009ರಿಂದ ಇಲ್ಲಿಯವರೆಗೆ 2,563 ಎಚ್‌ಐವಿ ಸೋಂಕಿತ ರನ್ನು ಗುರುತಿಸಲಾಗಿದೆ. 13 ವರ್ಷಗಳಲ್ಲಿ 657 ಸಾವು ಸಂಭವಿಸಿದೆ.
ಸೋಂಕನ್ನು 2025ರ ಒಳಗಾಗಿ ಶೂನ್ಯಕ್ಕೆ ಇಳಿಸುವ ನಿಟ್ಟಿನ ಗುರಿ ಸರಕಾರದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಡಿ. 1ರಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಜಾಥಾ ನಡೆಯಲಿದೆ ಎಂದರು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ನಿಯಂ ತ್ರಣಾಧಿಕಾರಿ ಡಾ| ಆನಂದ್ ಮಾತನಾಡಿ, ರಾಜ್ಯದ ಇತರ ಭಾಗಗಳಿಗೆ ಹೋಲಿಸಿದಲ್ಲಿ ಕೊಡಗಿನಲ್ಲಿ ಎಚ್‌ಐವಿ ಸೋಂಕು ಮತ್ತು ಏಡ್ಸ್ ನಿಯಂತ್ರಣದಲ್ಲಿದ್ದು, ಸೋಂಕಿತರಿಗೆ ಅಗತ್ಯ ಚಿಕಿತ್ಸೆಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.