ಕೃಷಿ ಕಾರ್ಯಕ್ಕೆ ಭಾರೀ ಹಿನ್ನಡೆ: ಶೇ. 11ರಷ್ಟು ಮಾತ್ರ ಸಾಧನೆ
ಮುಂಗಾರು ಮಳೆಯಲ್ಲಿ ಶೇ.45.7 ಕೊರತೆ
Team Udayavani, Aug 5, 2019, 5:06 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ಕೃಷಿ ಚಟುವಟಿಕೆಗೂ ಹಿನ್ನಡೆಯಾಗಿದ್ದು, ಜುಲೈ ಅಂತ್ಯದವರೆಗೆ ಕೇವಲ ಶೇ.11ರಷ್ಟು ಮಾತ್ರ ಸಾಧನೆಯಾಗಿದೆ.
ಪ್ರಸಕ್ತ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮುಂಗಾರು ಮಳೆಯಲ್ಲಿ ಕೂಡ ಶೇ.45.7 ರಷ್ಟು ಹಿನ್ನಡೆ ಕಂಡುಬಂದಿದೆ. ಜಿಲ್ಲೆಯಲ್ಲಿ 30500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ 4ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆಯಾದರೂ, ಇದುವರೆಗೆ ಕೇವಲ 822 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಕೃಷಿ ಮುಗಿದಿದ್ದು, 2830 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳವನ್ನು ಬೆಳೆಯಲಾಗಿದೆ. ಈ ಬಾರಿ ಕೇವಲ ಭತ್ತದ ಕೃಷಿಯಲ್ಲಿ ಕೇವಲ ಶೇ.2.70 ಹಾಗೂ ಜೋಳದ ಕೃಷಿಯಲ್ಲಿ ಶೇ.70.75ರಷ್ಟು ಸಾಧನೆ ಮಾಡಿದಂತಾಗಿದ್ದು, ಮಳೆಯ ಕೊರತೆಯಿಂದಾಗಿ ಈ ಬಾರಿ ಕೃಷಿ ಚಟುವಟಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
ಮಡಿಕೇರಿ ತಾಲೂಕು: ಮಡಿಕೇರಿ ತಾಲೂಕಿನಲ್ಲಿ 6500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆಯಾದರೂ, ಈ ಬಾರಿ ಶೇ.20 ಪ್ರದೇಶದಲ್ಲಿ ಸಸಿ ಮಡಿಯೊಂದಿಗೆ 1300ಹೆಕ್ಟೇರ್‌ನಲ್ಲಿ ಮಾತ್ರ ಕೃಷಿ ಮಾಡಲಾಗಿದೆ.
ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 14 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ತಾಲೂಕು ವೀರಾಜಪೇಟೆ. ಒಂದು ರೀತಿಯಲ್ಲಿ ಕೊಡಗಿನ ಭತ್ತದ ಕಣಜ ಎಂದೇ ಕರೆಯಲಾಗುವ ಈ ತಾಲೂಕಿನಲ್ಲಿ ಪ್ರಸಕ್ತ ವರ್ಷ ಕೆಲವೆಡೆ ಆಶಾದಾಯಕ ಮಳೆಯಾದರೂ, ಬಳಿಕ ವ್ಯತ್ಯಾಸ ಉಂಟಾಗಿದೆ.
ಪರಿಣಾಮವಾಗಿ ಇದುವರೆಗೆ ಕೇವಲ 142 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಭತ್ತದ ಕೃಷಿ ನಡೆದಿದ್ದು, 590 ಹೆಕ್ಟೇರ್‌ನಲ್ಲಿ ಸಸಿ ಮಡಿ ಸಿದ್ಧವಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 10 ಸಾವಿರ ಹೆಕ್ಟೇರ್ ಭತ್ತದ ಕೃಷಿಯೊಂದಿಗೆ, 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ. ಆದರೆ ಈ ತಾಲೂಕಿನಲ್ಲಿ 6690 ಹೆಕ್ಟೇರ್‌ಗೆ ಆಗುವಷ್ಟು ಮಾತ್ರ ಸಸಿಮಡಿ ಸಿದ್ಧವಾಗಿದ್ದು ಇದುವರೆಗೆ 480 ಹೆಕ್ಟೇರ್‌ನಲ್ಲಿ ಮಾತ್ರ ನಾಟಿ ಕಾರ್ಯ ಮುಗಿದಿದೆ.
ಮಳೆಯೇ ಇಲ್ಲ :
ಜಿಲ್ಲೆಯಲ್ಲಿ ಈ ವೇಳೆಗೆ ಸರಾಸರಿ 70 ಇಂಚು ಮಳೆಯಾಗಬೇಕಿತ್ತು. ಆದರೆ ಈ ಬಾರಿ ಜುಲೈ ಅಂತ್ಯದವರೆಗೆ ಕೇವಲ 37.48 ಇಂಚು ಸರಾಸರಿ ಮಳೆಯಾಗಿದ್ದುಮ ಶೇ. 45.7 ರಷ್ಟು ಮಳೆ ಕೊರತೆ ಕಂಡು ಬಂದಿದೆ. 2017ರಲ್ಲಿ ಈ ಅವಧಿಗೆ 48.84 ಇಂಚು ಮಳೆಯಾದರೆ ಕಳೆದ ವರ್ಷ 94.18 ಇಂಚು ದಾಖಲಾಗಿತ್ತು.ಮಡಿಕೇರಿ ತಾಲೂಕಿನಲ್ಲಿ ವಾಡಿಕೆಯಂತೆ ಈ ಅವಧಿಗೆ 99.74 ಇಂಚು ಸರಾಸರಿ ಮಳೆಯಾಗಬೇಕಿದ್ದು, ಪ್ರಸಕ್ತ 49.06 ಇಂಚು ಮಾತ್ರ ದಾಖಲಾಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ 49.16 ಇಂಚು ಮಳೆಯಾಗಬೇಕಿದ್ದು, ಪ್ರಸಕ್ತ ಕೇವಲ 23.72 ಇಂಚು ದಾಖಲಾಗಿದೆ.
ವೀರಾಜಪೇಟೆ ತಾಲೂಕಿನಲ್ಲಿ ವಾಡಿಕೆಯಂತೆ 58.68 ಇಂಚು ಮಳೆಯಾಗಬೇಕಿದ್ದು, ಪ್ರಸಕ್ತ ವರ್ಷದಲ್ಲಿ 38.66 ಇಂಚು ದಾಖಲಾಗಿದೆ.
ನಾಟಿ ಸಾಧ್ಯತೆ ಕಡಿಮೆ
ಜಿಲ್ಲೆಯಲ್ಲಿ ಇದುವರೆಗೆ ಶೇ. 10.59 ಮಾತ್ರ ಒಟ್ಟಾರೆ ಕೃಷಿಯಲ್ಲಿ ಸಾಧನೆ ಗೋಚರಿಸಿದೆ. ನದಿಗಳು ಉಕ್ಕಿ ಹರಿಯುವ ಪ್ರದೇಶದ ಗದ್ದೆಗಳಲ್ಲಿ ಮಳೆ ಕಡಿಮೆಯಾಗುವ ಆಗಸ್ಟ್ ತಿಂಗಳಿನಲ್ಲಿ ಭತ್ತದ ನಾಟಿ ಮಾಡುವುದು ವಾಡಿಕೆ. ಈ ಬಾರಿ ಮಳೆಯ ಪ್ರಮಾಣವೇ ಕಡಿಮೆಯಿರುವುದರಿಂದ ಈ ಗದ್ದೆಗಳಲ್ಲಿ ನಾಟಿ ನಡೆಯುವ ಸಾಧ್ಯತೆ ಕಡಿಮೆ. ಹವಾಮಾನ ವೈಪರೀತ್ಯದ ಪರಿಣಾಮ ಹಲವರು ಕೃಷಿ ಮಾಡುವ ಯೋಚನೆಯನ್ನೇ ಬಿಟ್ಟಿದ್ದಾರೆ.
ಭತ್ತದ ಕೃಷಿ ಲಾಭ ದಾಯಕವಲ್ಲ ಎಂಬ ಕಾರಣಕ್ಕೆ ಗದ್ದೆಗಳನ್ನು ಪಾಳು ಬಿಟ್ಟಿದ್ದಾರೆ. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ 8 ಗ್ರಾ.ಪಂ. ವ್ಯಾಪ್ತಿಯ 50ಕ್ಕೂ ಅಧಿಕ ಗ್ರಾಮಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಸಾಕಷ್ಟು ಗದ್ದೆಗಳಲ್ಲಿ ಹೂಳು ತುಂಬಿ ಪಾಳು ಬಿದ್ದಿವೆ.
ಸಕಾಲದಲ್ಲಿ ಮಳೆ ಬಾರದೆ ಇನ್ಯಾವಗಲೋ ಬಂದರೆ ಏನು ಪ್ರಯೋಜನವೆಂದು ಕೃಷಿಕ ವರ್ಗ ಬೇಸರ ವ್ಯಕ್ತಪಡಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.