ಪೊಲೀಸ್‌ ಗಸ್ತು ವ್ಯವಸ್ಥೆ ಸುಧಾರಣೆ: ಸುಬಾಹು ಇ-ಬೀಟ್‌ ಸೇವೆಗೆ ಚಾಲನೆ

Team Udayavani, Mar 3, 2020, 6:50 AM IST

police-gastu

ಮಡಿಕೇರಿ: ಗಸ್ತು ಸಿಬಂದಿ ತಮ್ಮ ಕಾರ್ಯವನ್ನು ಸೂಕ್ತವಾಗಿ ನಿರ್ವಹಿಸುತ್ತಿದ್ದಾರೆಯೇ ಇಲ್ಲವೆ ಎಂಬ ಬಗ್ಗೆ ತಿಳಿಯಲು ಸುಬಾಹು ಇ-ಬೀಟ್‌ ತಂತ್ರಾಂಶ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ. ಪನ್ನೇಕರ್‌ ಅವರು ತಿಳಿಸಿದ್ದಾರೆ.

ಬೆಂಗಳೂರು ಮೂಲದ ಸ್ಮಾರ್ಟ್‌ ಸೆಕ್ಯೂರ್‌ ಎಂಬ ಸಂಸ್ಥೆಯು ರೂಪಿಸಿರುವ ಸುಬಾಹು ಇ-ಬೀಟ್‌ ತಂತ್ರಾಂಶವನ್ನು ಶುಕ್ರವಾರ ನಗರದ ಜಿಲ್ಲಾ ಪೊಲೀಸ್‌ ಕ್ರೀಡಾಂಗಣದಲ್ಲಿರುವ ಕಾನ್ಫರೆನ್ಸ್‌ ಹಾಲ್‌ನಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಜಿಲ್ಲಾ ಪೊಲೀಸ್‌ ವತಿಯಿಂದ ಇ-ಬೀಟ್‌ ಜಾರಿ ಕುರಿತು, ತಂತ್ರಜ್ಞಾನ ಅಳವಡಿಸಿಕೊಂಡು ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಸುಬಾಹು-ಇ ಬೀಟ್‌ ತಂತ್ರಾಂಶ ಕಾರ್ಯಾರಂಭ ಮಾಡಿದೆ. ಈ ಹಿಂದೆ ರಾತ್ರಿ ಗಸ್ತನ್ನು ಕೈಬರಹದ ಮೂಲಕ ದಾಖಲಿಸಲಾಗುತ್ತಿತ್ತು. ಸಿಬ್ಬಂದಿಗಳು ನಿಗದಿತ ಸ್ಥಳಗಳಿಗೆ ತೆರಳಿ ಅಲ್ಲಿ ಸಹಿ ಮಾಡುವ ವ್ಯವಸ್ಥೆ ಇತ್ತು. ಇದೀಗ ಸುಬಾಹು ಇ-ಬೀಟ್‌ ಮುಖಾಂತರ ಸಿಬ್ಬಂದಿಗಳು ತಮ್ಮ ಸ್ಮಾರ್ಟ್‌ ಫೋನ್‌ ಬಳಸಿ ಕ್ಯು ಆರ್‌ ಕೋಡ್‌ ಅನ್ನು ಸ್ಕ್ಯಾನ್‌ ಮಾಡಬಹುದಾಗಿದೆ. ನಿಗದಿತ ಸ್ಥಳಗಳಲ್ಲಿ ಅಂದರೆ ಗಸ್ತು ತೆರಳುವ ಮಾರ್ಗಗಳಲ್ಲಿ ಕ್ಯು ಆರ್‌ ಕೋಡ್‌ ಅನ್ನು ಸಿಬ್ಬಂದಿಗಳು ಸ್ಕ್ಯಾನ್‌ ಮಾಡಬೇಕಿದೆ.

ಇದರಿಂದ ಸಿಬ್ಬಂದಿಗಳೂ ಸಹ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದರು.
ಸಾರ್ವಜನಿಕರು ಸುಬಾಹು ರೆಸಿಡೆಂಟ್‌ ಆಪ್‌ ಅನ್ನು ಉಚಿತವಾಗಿ ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಂಡು ದೂರದ ಊರಿಗೆ ತೆರಳುವ ಮುನ್ನ ಹತ್ತಿರದ ಪೊಲೀಸ್‌ ಠಾಣೆಗೆ ಈ ತಂತ್ರಾಂಶದ ಮೂಲಕ ಮಾಹಿತಿ ನೀಡಬಹುದಾಗಿದೆ. ಇದರಿಂದ ದೂರ ಪ್ರಯಣ ಕೈಗೊಂಡ ಸಂಧರ್ಭದಲ್ಲಿ ಬೀಟ್‌ ಪೊಲೀಸರು ಮನೆಯ ಬಳಿಯೂ ಬಂದು ಗಸ್ತು ತಿರುಗಲಿದ್ದಾರೆ ಎಂದು ತಿಳಿಸಿದರು.

ಸ್ಮಾರ್ಟ್‌ ಸೆಕ್ಯೂರ್‌ ಸಂಸ್ಥೆಯ ಮಹೇಂದ್ರ ಅವರು, ಪೊಲೀಸ್‌ ಇಲಾಖೆಗೆ ಈ ತಂತ್ರಾಂಶದ ಬಳಕೆ ಅತ್ಯಂತ ಅವಶ್ಯಕವಾಗಿದೆ. ಸುಬಾಹು ಅಡ್ಮಿನ್‌ ಅನ್ನು ಹಿರಿಯ ಅಧಿಕಾರಿಗಳಿಗಾಗಿ ಮತ್ತು ಸುಬಾಹು ಬೀಟ್‌ ಅನ್ನು ಬೀಟ್‌ ಅಧಿಕಾರಿಗಳಿಗಾಗಿ ವಿನ್ಯಾಸಗೊಳಿಸಿದ್ದು ಮೊಬೈಲ್‌ ಮುಖಾಂತರವೇ ಅನೇಕ ಮಾಹಿತಿ ಪಡೆಯಲು ಪೂರಕವಾಗಿದೆ ಎಂದರು.

ಇನ್ನು ಸುಬಾಹು ತಂತ್ರಾಂಶ ಹೇಗೆ ಬಳಸಬೇಕು. ಯಾವ ರೀತಿ ಮಾಹಿತಿ ಸಂಗ್ರಹಿಸಬೇಕು ಎಂಬ ಬಗ್ಗೆ ಪೊಲೀಸ್‌ ಅಧಿಕಾರಿಗಳಿಗೆ ಸಂಕ್ಷಿಪ್ತ ತರಬೇತಿ ನೀಡಲಾಯಿತು. ವಿರಾಜಪೇಟೆ ಉಪ ವಿಭಾಗದ ಉಪ ಪೊಲೀಸ್‌ ಅಧೀಕ್ಷಕ ಜಯಕುಮಾರ್‌ ಮತ್ತು ಜಿಲ್ಲೆಯ ವಿವಿಧ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು ದಿನೇಶ್‌ ಕುಮಾರ್‌ ಅವರು ಸ್ವಾಗತಿಸಿದರು. ಸೋಮೇಗೌಡ ಅವರು ವಂದಿಸಿದರು. ಜಯರಾಮ್‌ ಕಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.