ಕೊಡಗಿನ ಮಳೆಹಾನಿ ಸಂತ್ರಸ್ತರಿಗೆ ಮೂಲಸೌಕರ್ಯ

535 ಕೋ.ರೂ. ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

Team Udayavani, Jul 31, 2019, 6:09 AM IST

cm

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2018ರ ಮುಂಗಾರಿನಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಅನಾಹುತದ ಹಿನ್ನೆಲೆಯಲ್ಲಿ ರಸ್ತೆ ಮತ್ತಿತರ ಮೂಲಸೌಕರ್ಯ ಪುನರ್‌ ನಿರ್ಮಾಣಕ್ಕೆ ಸುಮಾರು 535 ಕೋಟಿ ರೂ. ಅಗತ್ಯವಿದ್ದು, ಕೂಡಲೇ ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಜಿಲ್ಲಾ ಮಟ್ಟದ ಅಧಿಕಾರಿಗೆ ಸೂಚಿಸಿದರು.

ಅವರು ಮಂಗಳವಾರ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಕೊಡಗು ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಪುನರ್ವಸತಿ ಮತ್ತು ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಅತಿವೃಷ್ಟಿ, ಭೂ ಕುಸಿತದಿಂದ ರಸ್ತೆ, ಕಟ್ಟಡ ಸೇರಿದಂತೆ ಸುಮಾರು 1,400 ಕೋಟಿ ರೂ. ಮೌಲ್ಯದ ವ್ಯವಸ್ಥೆಗಳು ನಾಶವಾಗಿವೆ. ಈ ವರೆಗೆ ಕೇಂದ್ರ ಸರಕಾರದಿಂದ 58 ಕೋ.ರೂ. ಹಾಗೂ ರಾಜ್ಯ ಸರಕಾರದ ವಿಶೇಷ ಅನುದಾನ 85 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ, ಲೋಕೋಪ
ಯೋಗಿ ರಸ್ತೆಗಳು ಹಾಗೂ ಗ್ರಾಮೀಣ ರಸ್ತೆಗಳು, ನಗರ ಪ್ರದೇಶದಲ್ಲಿ ಚರಂಡಿ
ಮತ್ತಿತರ ವ್ಯವಸ್ಥೆಗಳ ಶಾಶ್ವತ ದುರಸ್ತಿಗೆ ಸುಮಾರು 535 ಕೋಟಿ ರೂ. ಅಗತ್ಯ
ವಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಈ ಸೌಕರ್ಯಗಳ ಪುನರ್‌ ನಿರ್ಮಾಣಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೊಡಗು ಜಿಲ್ಲೆಯ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್‌, ಸುನಿಲ್‌ ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಂತ್ರಸ್ತರಿಗೆ 842 ಮನೆ ನಿರ್ಮಾಣ
ಸಂಪೂರ್ಣವಾಗಿ ಮನೆ ಕಳೆದುಕೊಂಡಿರುವ 842 ಮಂದಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ಮದೆ, ಕರ್ಣಂಗೇರಿ ಹಾಗೂ ಮಾದಾಪುರದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 111 ಕೋಟಿ ರೂ. ಒದಗಿಸಲಾಗಿದೆ. ಮೂಲಸೌಕರ್ಯಕ್ಕಾಗಿ 42.92 ಕೋಟಿ ರೂ. ಒದಗಿಸಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಎಲ್ಲ ಮನೆಗಳೂ ಸಿದ್ಧವಾಗಲಿವೆ. ಇನ್‌ಫೋಸಿಸ್‌ ಪ್ರತಿಷ್ಠಾನದಿಂದ 200 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ರಾಜೀವ್‌ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನುºಕುಮಾರ್‌ ತಿಳಿಸಿದರು. ಸಂಪಾಜೆ ಗ್ರಾಮದಲ್ಲಿ ಸೇವಾಭಾರತಿ ಸಂಸ್ಥೆಯವರು 35 ಮನೆಗಳನ್ನು ನಿರ್ಮಿಸಲು ಮುಂದೆ ಬಂದಿದ್ದು, ಅನುಮೋದನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ತಮ್ಮ ಜಮೀನಿನಲ್ಲಿಯೇ ಮನೆ ಕಟ್ಟಿಕೊಳ್ಳಲು ನೆರವು ನೀಡುವಂತೆ 83 ಮಂದಿ ಮನೆ ಕಳೆದುಕೊಂಡವರು ಅರ್ಜಿ ಸಲ್ಲಿಸಿದ್ದು, 54 ಜನರಿಗೆ ತಲಾ 9 ಲಕ್ಷ ರೂ. ಮಂಜೂರು ಮಾಡಲಾಗಿದೆ. ಉಳಿದ 29 ಜನರಿಗೂ ನೆರವು ನೀಡಲು ಮಂಜೂರಾತಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಟಾಪ್ ನ್ಯೂಸ್

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.