ನೀರಿಗಾಗಿ ಒತ್ತಾಯ: ಹಾರಂಗಿಯಲ್ಲಿ ರೈತರಿಂದ ಪ್ರತಿಭಟನೆ


Team Udayavani, Jul 31, 2017, 6:05 AM IST

Z-PROTEST-1.jpg

ಮಡಿಕೇರಿ: ನಾಲೆ ಮೂಲಕ ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯ ಕೃಷಿ ಚಟುವಟಿಕೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ಹಾರಂಗಿ ಜಲಾಶಯದ ಮುಂಭಾಗ ಪ್ರತಿಭಟನೆ ನಡೆಸಿದರು. ಸೋಮವಾರಪೇಟೆ ತಾಲೂಕಿನ ಕೂಡಿಗೆ, ಹೆಬ್ಟಾಲೆ, ಶಿರಂಗಾಲ, ತೊರೆನೂರು, ಕೊಣನೂರು, ಕಡುವಿನ ಹೊಸಳ್ಳಿ, ಪಿರಿಯಾಪಟ್ಟಣ ವ್ಯಾಪ್ತಿಯ ನೂರಾರು ರೈತರು ಹಾರಂಗಿ ಜಲಾಶಯದ ಮುಂಭಾಗ ಸರಕಾರದ ವಿರುದ್ಧ ಘೋಷಣೆ ಕೂಗಿದರು. 

ಹಾರಂಗಿ ಅಣೆಕಟ್ಟೆ ಭರ್ತಿಯಾಗಿದ್ದರೂ ನಾಲೆ ಗಳಿಗೆ ನೀರು ಹರಿಸದೆ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿದ ರೈತರು ತತ್‌ಕ್ಷಣ ನದಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.

ಹಾರಂಗಿ ಜಲಾಶಯದಿಂದ ಎಡದಂಡೆ ಹಾಗೂ ಬಲದಂಡೆ ನಾಲೆಯ ಮೂಲಕ ಎರಡು ಬಾರಿ ರೈತರ ಬೆಳೆಗಳಿಗೆ ನೀರು ಹರಿಸಿ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು. ರೈತರು ಈಗಾಗಲೆ ನಾಟಿ ಮತ್ತಿತರ ಕಾರ್ಯ ಕೈಗೊಂಡಿದ್ದಾರೆ.  ಜಲಾ ಶಯದಿಂದ ರೈತರ ಬೆಳೆಗಳಿಗೆ ಕೇವಲ 250 ಕ್ಯೂಸೆಕ್‌ ಪ್ರಮಾಣದ ನೀರನ್ನು ನಿರಂತರವಾಗಿ ಹರಿಸಬೇಕೆಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಹಾರಂಗಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಅಭಿಯಂತ ರಂಗಸ್ವಾಮಿ ಅವರನ್ನು ಮುತ್ತಿಗೆ ಹಾಕಿದ ರೈತರು ಕೂಡಲೆ ಜಲಾಶಯದಿಂದ ನದಿಗೆ ಹರಿಸುತ್ತಿರುವ ನೀರನ್ನು ಸ್ಥಗಿತಗೊಳಿಸಬೇಕು ಎಂದು ಪಟ್ಟು ಹಿಡಿದರು. ಈ ಸಂಬಂಧ ಮಾಜಿ ಸಚಿವರಾದ ಜೀವಿಜಯ ಅವರ ಸಮ್ಮುಖದಲ್ಲಿ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಹಾರಂಗಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಅಭಿಯಂ ತರ ರಂಗಸ್ವಾಮಿ, ಸರಕಾರದ ಆದೇಶದಂತೆ ನದಿಗೆ ನೀರು ಹರಿಸಲಾಗುತ್ತಿದೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಯುತ್ತಿದ್ದು ರೈತರ ಮನವಿ ಬಗ್ಗೆ ಮಾಹಿತಿ ಒದಗಿಸಲಾಗುವುದು. ಪ್ರಾದೇಶಿಕ ಆಯುಕ್ತರ ಮಟ್ಟದಲ್ಲಿ ಈ ಬಗ್ಗೆ ಸಭೆ ನಡೆಯುತ್ತಿದ್ದು ಸಧ್ಯದಲ್ಲಿಯೇ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಪ್ರಸಕ್ತ ಸರಕಾರದಿಂದ ಕುಡಿಯುವ ನೀರಿಗೆ ಆದ್ಯತೆ ನೀಡಲು ಸೂಚನೆ ಬಂದಿದ್ದು ರೈತರ ಅಹವಾಲುಗಳನ್ನು ಮೇಲಧಿಕಾರಿಗಳ ಗಮನಕ್ಕೆ ರವಾನಿಸಲಾಗುವುದು ಎಂದರು.

ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ.ಎ. ಜೀವಿಜಯ ಅವರು ಮಾತನಾಡಿ, ಸರಕಾರ ರೈತರ ಬಗ್ಗೆ ಕಾಳಜಿ ವಹಿಸಬೇಕು. ತಕ್ಷಣ ಸೋಮವಾರಪೇಟೆ ತಾಲೂಕಿನ ವ್ಯಾಪ್ತಿಯ ಹಾರಂಗಿ ಅಚ್ಚುಕಟ್ಟು ರೈತರ ಜಮೀನಿಗೆ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಣೆಕಟ್ಟೆಯ ನೀರನ್ನು ನಂಬಿ ಕೃಷಿ ಚಟುವಟಿಕೆ ಯಲ್ಲಿ ತೊಡಗಿರುವ ರೈತಾಪಿ ವರ್ಗಕ್ಕೆ ನಿರಂತರ ನೀರು ಹರಿಸುವ ಬದ್ದತೆಯನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದರು. ಈ ಸಂದರ್ಭ ಸಹಾಯಕ ಕಾರ್ಯಪಾಲಕ ಅಭಿಯಂತರ ಧರ್ಮರಾಜು, ಜೆಡಿಎಸ್‌ ಪ್ರಮುಖರಾದ ಭರತ್‌, ಎಂ.ಎಸ್‌.ರಾಜೇಶ್‌, ರೈತ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.