ಆ.15 ರೊಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಸೂಚನೆ
ವೈಯಕ್ತಿಕ 46 ಅರ್ಜಿಗಳಿಗೆ ಅನುಮೋದನೆ
Team Udayavani, Jul 25, 2019, 5:57 AM IST
ಮಡಿಕೇರಿ :ಅರಣ್ಯ ಹಕ್ಕು ಕಾಯ್ದೆಯಡಿ ಉಪ ವಿಭಾಗ ಮಟ್ಟದಿಂದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗೆ ಸಲ್ಲಿಕೆಯಾಗಿದ್ದ 58 ವೈಯಕ್ತಿಕ ಅರ್ಜಿಗಳಲ್ಲಿ 46 ಅರ್ಜಿಗಳಿಗೆ ಅನುಮೋದನೆ ನೀಡಿದ್ದು, 11 ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಹಾಗೂ ಒಂದು ಅರ್ಜಿಯನ್ನು ತಿರಸ್ಕರಿಸಲು ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿ ಇರುವ ಅರ್ಜಿಗಳನ್ನು ಆಗಸ್ಟ್, 15 ರೊಳಗೆ ಸರ್ವೇ ಕಾರ್ಯ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಉಪ ವಿಭಾಗ ಮಟ್ಟಕ್ಕೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಗ್ರಾಮ ಅರಣ್ಯ ಹಕ್ಕು ಸಮಿತಿ ಸಭೆಗಳನ್ನು ನಿಯಮ ಬದ್ಧವಾಗಿ ನಡೆಸಿ ಅರ್ಹರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ನೀಡಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಗ್ರಾಮ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಅನುಮೋದನೆಗೊಂಡ ಅರ್ಜಿಗಳನ್ನು ಉಪ ವಿಭಾಗ ಮಟ್ಟಕ್ಕೆ ಸಲ್ಲಿಸುವ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ತಾ.ಪಂ. ಇಒ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಅವರ ಸಹಿ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಅರಣ್ಯ ಹಕ್ಕು ಕಾಯ್ದೆ ಸಂಬಂಧಿಸಿದಂತೆ ಇದುವರೆಗೆ ವೈಯಕ್ತಿಕ ಹಕ್ಕು ಪತ್ರ ನೀಡಲಾಗಿರುವ ಬಗ್ಗೆ ಮಾಹಿತಿ ನೀಡಿದರು.
ಹಾಗೆಯೇ ಉಪ ವಿಭಾಗ ಮಟ್ಟದಿಂದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಮಾಹಿತಿ ನೀಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯ ಕ್ರಿಸ್ತರಾಜ ಅವರು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಯಾವುದೇ ಅರಣ್ಯ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸದಸ್ಯರು ಹಾಗೂ ಜಿ.ಪಂ.ಸದಸ್ಯರಾದ ಪಂಕಜ, ಕುಮಾರ, ಮಂಜುಳಾ ಅವರು ಆದಿವಾಸಿ ಜನರು ವಾಸ ಮಾಡಿಕೊಂಡು ಬಂದಿರುವ ಸ್ಥಳಗಳಲ್ಲಿ ಅರಣ್ಯ ಹಕ್ಕು ಪತ್ರ ನಿಡಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಸೌಲಭ್ಯವನ್ನು ಕಲ್ಪಿಸುವಂತಾಗಬೇಕು ಎಂದು ಅವರು ತಿಳಿಸಿದರು.
ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮಶೇಖರ, ತಹಶೀಲ್ದಾರರಾದ ಮಹೇಶ್, ತಾ.ಪಂ.ಇಒಗಳಾದ ಲಕ್ಷ್ಮೀ, ಸುನಿಲ್ ಕುಮಾರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಚಿಕ್ಕಬಸವಯ್ಯ, ಶೇಖರ್, ದೇವರಾಜು ಮೊದಲಾದವರು ಉಪಸ್ಥಿತರಿದ್ದರು
ವಿದ್ಯುತ್ ಸಂಪರ್ಕ
ದುಬಾರೆ ಅರಣ್ಯ ಪ್ರದೇಶದಲ್ಲಿನ ಅವರೆಗುಂದ, ಬಸವನಹಳ್ಳಿ, ಅಂಚೆತಿಟ್ಟು, ಆಸ್ತಾನ ಮತ್ತಿತರ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದಿಂದ ವೈಯಕ್ತಿಕ ಕೊಳವೆ ಬಾವಿಗಳನ್ನು ಕೊರೆಸುವಂತಾಗಬೇಕು ಎಂದು ಸಮಿತಿ ಸದಸ್ಯರು ಹೇಳಿದರು.
ನಾಗರಹೊಳೆಯ ಗಿರಿಜನ ಆಶ್ರಮ ಶಾಲೆಯಲ್ಲಿ 70 ವಿದ್ಯಾರ್ಥಿಗಳಿದ್ದು, 1 ರಿಂದ 7ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದಾರೆಘಿ ಇವರಿಗೆ ಕೊಠಡಿಗಳಿಲ್ಲ. ಕುಡಿಯುವ ನೀರು ದೊರೆಯುತ್ತಿಲ್ಲ. ವಿದ್ಯುತ್ ಸಂಪರ್ಕವಿಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದು, ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಬೇಕು, ಕುಡಿಯುವ ನೀರು ಸಂಪರ್ಕ ಕಲ್ಪಿಸುವಂತೆ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯಬಸವರಾಜು ಅವರು ಮನವಿ ಮಾಡಿದರು. Éಅಂಗನವಾಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ ಮತ್ತಿತರ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.