ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಎಸ್‌ಪಿ
Team Udayavani, Jul 31, 2017, 7:50 AM IST
ಮಡಿಕೇರಿ: ಜಿಲ್ಲೆಯಲ್ಲಿ ಅಪರಿಚಿತ ಮಕ್ಕಳನ್ನು ಗುರ್ತಿಸುವುದು, ಮಹಿಳೆಯರು ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ತಡೆಯುವುದು, ಬಾಲ ಕಾರ್ಮಿಕ ಮತ್ತು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಮಾಡುವುದು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಮರಳಿ ಶಾಲೆಗೆ ಸೇರ್ಪಡೆ ಮಾಡುವಂತಾಗಲು ಪೊಲೀಸ್ ಇಲಾಖೆಯೊಂದಿಗೆ ನಾನಾ ಇಲಾಖೆ ಸೇರಿದಂತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಅವರು ಮನವಿ ಮಾಡಿದ್ದಾರೆ.
ನಗರದ ಪೊಲೀಸ್ ಮೈತ್ರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಪೊಲೀಸ್, ಮಕ್ಕಳ ವಿಶೇಷ ಪೊಲೀಸ್ ಘಟಕ ವತಿಯಿಂದ ಕಾಣೆಯಾದ ಮಕ್ಕಳ ಪತ್ತೆ ಬಗ್ಗೆ ಆಪರೇಷನ್ ಮುಸ್ಕಲ್ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸ್ ಹಾಗೂ ರೈಲ್ವೆ ನಿಲ್ದಾಣ ಹಾಗೂ ಬೀದಿಗಳಲ್ಲಿ ಅಪರಿಚಿತ ಮಕ್ಕಳು ಓಡಾಡುತ್ತಿರುತ್ತಾರೆ. ಇಂತಹ ಮಕ್ಕಳನ್ನು ಗಮನಿಸಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತಾಗಬೇಕು. 18 ವರ್ಷದೊಳಗಿನ ಮಕ್ಕಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಎಲ್ಲರೂ ಸಹಕರಿಸಬೇಕಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 32ಕ್ಕೂ ಹೆಚ್ಚು ಮಕ್ಕಳು ಕಾಣೆ ಯಾಗಿದ್ದು, 30 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಅಪರಿಚಿತ ಮಕ್ಕಳ ಚಲನವಲನ, ಅಪರಿಚಿತ ಮಕ್ಕಳನ್ನು ಹೇಗೆ ಪ್ರೀತಿಯಿಂದ ಕಾಣುವುದು. ಮಕ್ಕಳಿಗೆ ರಕ್ಷಣೆಗೆ ನೀಡುವ ನಿಟ್ಟಿನಲ್ಲಿ ಯಾವ ರೀತಿ ಮುಂದಾಗಬೇಕು ಎಂಬ ಬಗ್ಗೆ ಪೊಲೀಸರಿಗೆ ಪೊಲೀಸ್ ಅಕಾಡೆಮಿ ವತಿಯಿಂದ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸರಕಾರೇತರ ಸಂಸ್ಥೆಗಳು ಕೈಜೋಡಿಸಬೇಕಿದೆ. ಕಾಣೆಯಾದ ಅಪರಿಚಿತ ಮಕ್ಕಳಿಗೆ ಪುನರ್ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರ್ಪಡೆ ಮಾಡುವುದು ಮತ್ತಿತರ ಬಗ್ಗೆ ಪ್ರತಿ ಪೊಲೀಸ್ ಠಾಣಾ ಮತ್ತು ಗ್ರಾ.ಪಂ. ಮಟ್ಟದಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಪಿ. ರಾಜೇಂದ್ರ ಪ್ರಸಾದ್ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್ ಅವರು ಮಾತನಾಡಿ ದೌರ್ಜನ್ಯಕ್ಕೆ ತುತ್ತಾದ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಪುನರ್ ವಸತಿ ಕಲ್ಪಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಹಾಯಧನ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಮಕ್ಕಳನ್ನು ದತ್ತು ಪಡೆಯುವಾಗ ನಿಯಮಾ ನುಸಾರ ಕಾನೂನು ಪಾಲಿಸಬೇಕಿದೆ ಅಪರಿಚಿತ ಮಹಿಳೆಯರು ಮತ್ತು ಮಕ್ಕಳು ಕಂಡು ಬಂದಾಗ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಕೋರಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪದ್ಧತಿ ಇದ್ದು, ಸುಮಾರು 36 ಪ್ರಕರಣಗಳು ದಾಖಲಾಗಿವೆ. ಸಾಮೂಹಿಕ ವಿವಾಹ ಸಂದರ್ಭದಲ್ಲಿ ಬಾಲ್ಯ ವಿವಾಹ, ಮಹಿಳೆಯರು ಮತ್ತು ಮಕ್ಕಳ ಸಾಗಾಟ ಮತ್ತಿತರ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾಹಿತಿ ನೀಡುವಂತೆ ಅವರು ಕೋರಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾದ ಭಾಗ್ಯಲಕ್ಷ್ಮೀ ಅವರು ಮಾತನಾಡಿ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತಿ ಯೊಂದು ಮಕ್ಕಳು ಶಿಕ್ಷಣ ಪಡೆಯಬೇಕು ಎಂದು ಎಸ್‌ಪಿ ಹೇಳಿದರು.
ಎಲ್ಲ ಮಕ್ಕಳು ಶಾಲೆಗೆ ಸೇರುವಂತಾಗಲು ವಿಶೇಷ ದಾಖಲಾತಿ ಆಂದೋಲನವನ್ನು ಶಾಲಾ ಆರಂಭಕ್ಕೂ ಮೊದಲು ಆಯೋಜಿಸಲಾಗುತ್ತದೆ. ಜಿಲ್ಲೆಯಲ್ಲಿ ಸುಮಾರು 48 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದರು. ಇವರಲ್ಲಿ 32 ಮಕ್ಕಳನ್ನು ಮತ್ತೆ ಶಾಲೆಗೆ ಸೇರ್ಪಡೆ ಮಾಡಲಾಗಿದೆ. ಮಕ್ಕಳ ವಿಶೇಷ ಪೊಲೀಸ್ ಘಟಕದ ಇನ್ಸ್‌ಪೆಕ್ಟರ್ ಕರೀಂ ರಾವುತರ್ ಅವರು ಮಾತನಾಡಿ ವರ್ಷಕ್ಕೆ ಎರಡು ಬಾರಿ ಆಪರೇಷನ್ ಮುಸ್ಕಲ್ ಕಾರ್ಯಕ್ರಮವನ್ನು ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.