ಅರಣ್ಯ ರಕ್ಷಣೆಗೆ ಅಧಿಕಾರಿಗಳೊಂದಿಗೆ ಕೈಜೋಡಿಸಿ: ಮಲ್ಲಾಪುರ
Team Udayavani, Sep 13, 2019, 5:02 AM IST
ಮಡಿಕೇರಿ: ರಾಷ್ಟ್ರದಲ್ಲಿರುವ ಅರಣ್ಯ ಸಂಪತ್ತನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಪ್ರದೇಶ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ವಿ.ವಿ.ಮಲ್ಲಾಪುರ ಅವರು ಕರೆ ನೀಡಿದ್ದಾರೆ.
ನಾಡಿನ ಅರಣ್ಯ ಮತ್ತು ವನ್ಯ ಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು.
ನಗರದ ಅರಣ್ಯ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ನ್ಯಾಯಾಧೀಶರು ರಾಷ್ಟ್ರದ ಗಡಿಯನ್ನು ಸೈನಿಕರು ಕಾಯುತ್ತಾರೆ. ಹಾಗೆಯೇ ರಾಷ್ಟ್ರದ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಕಾರ್ಯವನ್ನು ಅರಣ್ಯ ಅಧಿಕಾರಿಗಳು ಮಾಡುತ್ತಾರೆ. ಯೋಧರು ಹಾಗೂ ಅರಣ್ಯ ಅಧಿಕಾರಿಗಳ ಸೇವೆ ಮಹತ್ವವನ್ನು ಪಡೆದುಕೊಂಡಿದೆ ಎಂದರು. ದೇಶಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವುದು ಅತ್ಯಗತ್ಯವಾಗಿದೆ. ಅರಣ್ಯ ಮತ್ತು ಅರಣ್ಯ ಜೀವಿಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಎಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕಿದೆ ಎಂದು ಸೆಷನ್ ನ್ಯಾಯಾಧೀಶರು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯ ಕ್ರಿಸ್ತುರಾಜ ಅವರು ಮಾತನಾಡಿ ರಾಷ್ಟ್ರೀಯ ಸಂಪತ್ತಾದ ಅರಣ್ಯವನ್ನು ಅಧಿಕಾರಿಗಳು ಸಂರಕ್ಷಿಸುತ್ತಾ ಬರುತ್ತಿರುವುದರಿಂದ ಪರಿಸರದ ಸಮಾತೋಲನ ಕಾಯ್ದುಕೊಳ್ಳಲು ಸಾಧ್ಯವಾಗಿದೆ ಎಂದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿಂಧೆ ನೀಲೇಶ್ ಡಿಯೋಬ, ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಿ.ಕಾರ್ಯಪ್ಪ, ಸಾಮಾಜಿಕ ಅರಣ್ಯ ವಿಭಾಗದ ಎಂ.ಜೆ.ಗೋವರ್ಧನ್ ಸಿಂಗ್, ವಲಯ ಅರಣ್ಯಾಧಿಕಾರಿ ಸೀಮಾ, ಸÃ ೋಜ, ಕೆ.ಪಿ.ಗೋಪಾಲ, ದೇವಯ್ಯ, ಗಣೇಶ್ ಕುಮಾರ್, ತಳವಾರ ಚಂದ್ರಯ್ಯ, ಬಸವರಾಜು ಮತ್ತಿತರರು ಹುತಾತ್ಮರಿಗೆ ಹೂ ಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಕಳೆದ 53 ವರ್ಷಗಳಲ್ಲಿ ಅರಣ್ಯ ಸಂರಕ್ಷಣಾ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಹುತಾತ್ಮರಾದವರ ಹೆಸರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಅವರು ಓದಿದರು.
ವಲಯ ಅರಣ್ಯಾಧಿಕಾರಿ ಶ್ರಮಾ ಅವರು ನಿರೂಪಿಸಿದರು, ಡಿಆರ್‌ಎಫ್ಒ ಮನು ಅವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಸಿಕೊಟ್ಟರು.
ಪೊಲೀಸ್ ವಾದ್ಯ ವೃಂದದವರಿಂದ ಗೌರವ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.