July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
Team Udayavani, Jul 26, 2024, 6:45 PM IST
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ್ದು ಜುಲೈ 27 ರಂದೂ (ಶನಿವಾರ) ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕಿನ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ.
ಕೊಡುಗು ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು , ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯುಸಿವರೆಗೆ ಜುಲೈ 27 ರಂದೂ (ಶನಿವಾರ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.