ಕೀರ್ತನೆಗಳು ಸಂದೇಶಗಳು ಸಾರ್ವಕಾಲಿಕ: ಜಿಲ್ಲಾಧಿಕಾರಿ

Team Udayavani, Nov 17, 2019, 5:50 AM IST

Z-KANAKADASA-JAYANTHI-1

ಮಡಿಕೇರಿ: ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಕನಕದಾಸರ ಸಂದೇಶಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸಲಹೆ ಮಾಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಿ.ದೇವರಾಜು ಅರಸು ಭವನದಲ್ಲಿ ಶುಕ್ರವಾರ ನಡೆದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕನಕದಾಸರು ನಾನು ಹೋದರೆ, ಹೋದೇನೂ ಎಂಬ ಸಂದೇಶ ಸಾರಿದ್ದಾರೆ. ನಾನು ಎಂಬುದನ್ನು ಬಿಡಬೇಕು, ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತವೆಯೇ ಹೊರತು, ಪರಿಹಾರವಾಗುವುದಿಲ್ಲ, ಆದ್ದರಿಂದ ಸೌಜನ್ಯ, ಭಾÅತೃತ್ವ, ಸಹೋದರತೆ ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ನಾನು ಎಂಬುದನ್ನು ಬಿಟ್ಟರೆ, ಉತ್ತಮ ಜೀವನ ನಡೆಸಬಹುದು ಎಂಬುದನ್ನು ಕನಕದಾಸರು ಸಾರಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಭಕ್ತ ಕನಕದಾಸ ವಿಚಾರಧಾರೆ ಹಾಗೂ ಜೀವನ ಚರಿತ್ರೆ ತಿಳಿದುಕೊಳ್ಳಬೇಕು. ಇದರಿಂದ ಹೆಚ್ಚಿನ ಜ್ಞಾನಾರ್ಜನೆ ದೊರೆಯುತ್ತದೆ ಎಂದು ಉಪನ್ಯಾಸಕರಾದ ಕುಮಾರ್‌ ಅವರು ಹೇಳಿದರು.

ಕನಕದಾಸರು ರಾಮಧಾನ್ಯ ಚರಿತ್ರೆ, ಮೋಹನ ತರಂಗಿಣಿ, ನಳ ಚರಿತ್ರೆ ಹಾಗೂ ಹರಿ ಭಕ್ತಸಾರ ಕಾವ್ಯ ಮತ್ತು ಕೀರ್ತನೆಗಳನ್ನು ರಚಿಸಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ್ದಾರೆ ಎಂದು ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ‌ ಲೋಕೇಶ್‌ ಸಾಗರ್‌ ಅವರು ಮಾತನಾಡಿದರು.

ಕನಕದಾಸರ ಕೀರ್ತನೆಗಳು ಪ್ರತಿಯೊಬ್ಬರೂ ಓದಬೇಕು. ಇದರಿಂದ ಸಮಾಜದಲ್ಲಿ ಬದಲಾವಣೆ ಕಾಣಬಹುದು ಎಂದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಕರಾದ ಮಚ್ಚಾಡೊ, ನಗರಸಭೆ ಪೌರಾಯುಕ್ತರಾದ ರಮೇಶ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪುಟ್ಟರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಇಬ್ರಾಹಿಂ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಗೀತಾ, ಬಿಸಿಎಂ ಇಲಾಲೆಯ ತಾಲ್ಲೂಕು ಅಧಿಕಾರಿ ಕವಿತಾ, ಐಟಿಡಿಪಿ ಇಲಾಖೆಯ ವ್ಯವಸ್ಥಾಪಕರಾದ ದೇವರಾಜು ಇತರರು ಇದ್ದರು.

ಶಂಕರಯ್ಯ ನಾಡಗೀತೆ ಹಾಡಿದರು, ಮಂಜುನಾಥ್‌ ನಿರೂಪಿಸಿದರು, ಕೆ.ಟಿ.ದರ್ಶನ್‌ ಸ್ವಾಗತಿಸಿ, ವಂದಿಸಿದರು.

ಹಮ್ಮು, ಬಿಮ್ಮು ಬಿಡಬೇಕು
ಮುಖ್ಯ ಭಾಷಣ ಮಾಡಿದ ಸರಸ್ವತಿ ಡಿಇಡಿ ಕಾಲೇಜಿನ ಪ್ರಾಂಶುಪಾಲ‌ ಕುಮಾರ್‌ ಅವರು ದಾಸ ಸಾಹಿತ್ಯವು ಒಂದು ಸಾಲು, ನಾಲ್ಕು ಪದ ಹೊಂದಿದೆ ಎಂದು ಅವರು ತಿಳಿಸಿದರು.

ಭಕ್ತ ಕನಕದಾಸರು ಅಂಬಲಿ, ಕಂಬಳಿ, ಹಮ್ಮು ಮತ್ತು ಬಿಮ್ಮು ಈ ನಾಲ್ಕು ಪದಗಳಲ್ಲಿ ಸಾಕಷ್ಟು ಅರ್ಥಗಳನ್ನು ತಿಳಿಸಿದ್ದಾರೆ. ಪ್ರತಿಯೊಬ್ಬರಿಗೂ ಊಟ, ಬಟ್ಟೆ ಅತಿ ಅವಶ್ಯಕ, ಇವುಗಳನ್ನು ಗಳಿಸಲು ಹಮ್ಮು, ಬಿಮ್ಮು ಬಿಡಬೇಕು ಎಂದು ಭಕ್ತ ಕನಕದಾಸರು ಹೇಳಿದ್ದಾರೆ ಎಂದರು.

ಜನರ ನಾಯಕನಾಗಿ ಬೆಳೆದ ಕನಕದಾಸರು, ಇವರ ಕೀರ್ತನೆ ಮತ್ತು ಸಂದೇಶಗಳು 21 ನೇ ಶತಮಾನದಲ್ಲಿ ದಾಸ ಸಾಹಿತ್ಯ ಪ್ರಾಯೋಗಾಲಯವಿದ್ದಂತೆ. ಕನಕದಾಸ ಚಿಂತನೆಗಳನ್ನು ಅಧ್ಯಯನ ಮಾಡಬೇಕು. ಕುಲ ಕುಲವೆಂದು ಹೊಡೆದಾಡದಿರಿ, ಕುಲ ಯಾವುದೆಂದು ಬಲ್ಲಿರ ಎಂಬ ಸಂದೇಶ ಸಾರುವ ಮೂಲಕ ಕನಕದಾಸರು ಎಲ್ಲರೂ ಸರಿ ಸಮಾನವಾಗಿ ಬದುಕಬೇಕು ಎಂಬುದನ್ನು ತಿಳಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.