ಯಕ್ಷಧರ್ಮ ಬೋಧಿನಿ ಟ್ರಸ್ಟ್ ಅಧ್ಯಕ್ಷ ಸಹಿತ 9 ಮಂದಿ ಮೇಲೆ ಪ್ರಕರಣ
Team Udayavani, Sep 25, 2018, 9:33 AM IST
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಕ್ಕೆ ಸಂಬಂಧಿಸಿದ ಯಕ್ಷ ಧರ್ಮ ಬೋಧಿನಿ ಚಾರಿಟೆಬಲ್ ಟ್ರಸ್ಟ್‌ನ ವ್ಯವಹಾರಗಳು ಸಮರ್ಪಕವಾಗಿಲ್ಲ ಎಂಬುದಾಗಿ ಜಿಲ್ಲಾಧಿಕಾರಿಗಳು ಎರಡು ತಿಂಗಳ ಹಿಂದೆ ಸರಕಾರಕ್ಕೆ ಸಲ್ಲಿಸಿದ್ದ ವರದಿ ಆಧರಿಸಿ ಈಗ ಟ್ರಸ್ಟ್ ವಿರುದ್ಧ ಪೊಲೀಸ್ ತನಿಖೆಗೆ ಮಂಗಳೂರಿನ 3ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಸೂಚಿಸಿದೆ.
ಬಜಪೆ ಠಾಣೆ ಪೊಲೀಸರು ಕಟೀಲಿನ ಟ್ರಸ್ಟ್ ಅಧ್ಯಕ್ಷರ ಸಹಿತ ಆಡಳಿತ ಮಂಡಳಿ ವಿರುದ್ಧ ಶನಿವಾರ ಕೇಸು ದಾಖಲಿಸಿಕೊಂಡಿದ್ದಾರೆ. 10 ಜನರನ್ನು ಆರೋಪಿಗಳನ್ನಾಗಿ ಹೆಸರಿಸ ಲಾಗಿದೆ. ಟ್ರಸ್ಟ್ ಮೊದಲ ಆರೋಪಿ, ಅಧ್ಯಕ್ಷ ರಾಘವೇಂದ್ರ ಆಚಾರ್ಯ ದ್ವಿತೀಯ ಆರೋಪಿ. ಕಾರ್ಯದರ್ಶಿ ಶಿವಾಜಿ ಶೆಟ್ಟಿ, ಟ್ರಸ್ಟಿಗಳಾದ ಶ್ರೀನಿವಾಸ ಭಟ್, ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ರವಿರಾಜ್ ಆಚಾರ್ಯ, ಭುಜಂಗ ಶೆಟ್ಟಿ, ಸುಣ್ಣಂಬಳ ವಿಶ್ವೇಶ್ವರ ಭಟ್, ಉದಯಾನಂದ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಇತರ ಎಂಟು ಮಂದಿ.
ನ್ಯಾಯಾಲಯದ ಸೂಚನೆಯಂತೆ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಕಾಯ್ದೆ 406, 417, 418, 420, 109 ಮತ್ತು 120ಬಿ ಸೆಕ್ಷನ್‌ಗಳಡಿ ಕೇಸು ದಾಖಲಿಸಿಕೊಳ್ಳಲಾಗಿದೆ. ಬಜಪೆ ಪೊಲೀಸರು ಎಫ್‌ಐಆರ್ ಪ್ರತಿಯನ್ನು ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪೊಲೀಸರು ತನಿಖೆ ನಡೆಸಿ ಡಿ.27ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿದೆ.
ಕಟೀಲು ಕ್ಷೇತ್ರದ ಆರು ಯಕ್ಷಗಾನ ಮೇಳಗಳನ್ನು ನಡೆಸುವ ಜವಾಬ್ದಾರಿಯನ್ನು ಧಾರ್ಮಿಕ ದತ್ತಿ ಇಲಾಖೆ ನಿಯಮಾನುಸಾರ ಟೆಂಡರ್ ಕರೆದು ಏಲಂ ಮಾಡುವ ಮೂಲಕ ಸೂಕ್ತ ವ್ಯಕ್ತಿಗಳಿಗೆ ವಹಿಸುವುದು ಸೂಕ್ತ. ಜತೆಗೆ ಟ್ರಸ್ಟ್‌ನ ಎಲ್ಲ ವ್ಯವಹಾರಗಳನ್ನು ಮುಟ್ಟುಗೋಲು ಹಾಕಿ ಅದನ್ನು ದೇವಸ್ಥಾನದ ಸುಪರ್ದಿಗೆ ಪಡೆದು ದೇವಸ್ಥಾನ ದಿಂದಲೇ ಮುಂದುವರಿಸಲು ಸೂಕ್ತ ಆದೇಶ ಹೊರಡಿಸಬೇಕು ಎಂದು ಕೋರಿ ಡಿಸಿ ಜುಲೈಯಲ್ಲಿ ವರದಿ ಸಲ್ಲಿಸಿ ದ್ದರು. ಸರಕಾರದಿಂದ ಅಂತಿಮ ತೀರ್ಮಾನ ಬಂದಿಲ್ಲ. ಶ್ರೀ ಕಟೀಲು ಯಕ್ಷಗಾನ ಮೇಳದಿಂದ ನೊಂದ ಕೆಲವು ಕಲಾವಿದರು ಹಾಗೂ ಸಂಘಟನೆಯವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಡಿಸಿ ಸಲ್ಲಿಸಿರುವ ವರದಿ ಆಧರಿಸಿ ಸೆ. 20ರಂದು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಪರಿಶೀಲನೆ ನಡೆಸಿದ ನ್ಯಾಯಾಲಯ ಸಿಆರ್‌ಪಿಸಿ ಸೆಕ್ಷನ್ 156 (3)ರಡಿ ದೂರನ್ನು ವಿಚಾರಣೆಗೆ ಸ್ವೀಕರಿಸಿದ್ದು, ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದೆ. ಟ್ರಸ್ಟ್‌ಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಿಂದ ನಮ್ಮ ಠಾಣೆಗೆ ರೆಫರ್ ಆಗಿದೆ. ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ತನಿಖೆ ನಡೆಸುವುದಾಗಿ ಬಜಪೆ ಠಾಣೆ ಪಿಐ ಪರಶಿವಮೂರ್ತಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ವರದಿ ಆಧರಿಸಿ ಖಾಸಗಿ ದೂರು
ದೂರುದಾರರ ಪರ ವಕೀಲ ರಾಜೇಶ್ ಕುಮಾರ್ ಅಮಾrಡಿ ಪ್ರತಿಕ್ರಿಯಿಸಿ, ಶ್ರೀ ಕಟೀಲು ದೇವಸ್ಥಾನದ ಯಕ್ಷಧರ್ಮ ಬೋಧಿನಿ ಟ್ರಸ್ಟ್ ವ್ಯವಹಾರಗಳು ಅಸಮರ್ಪಕವಾಗಿದ್ದು, ಸರಕಾರಿ ಹಣ ದುರ್ಬಳಕೆಯಾಗುತ್ತಿದೆ. ಪ್ರಕರಣದಲ್ಲಿ ಟ್ರಸ್ಟ್ ಅನ್ನು ಸರಕಾರ ಮುಟ್ಟುಗೋಲು ಹಾಕುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ವರದಿ ನೀಡಿದ್ದು, ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ಟ್ರಸ್ಟ್ ಮೇಲಿನ ಆರೋಪದ ಬಗ್ಗೆ ಈಗ ನ್ಯಾಯಾಲಯದ ಪರಿಧಿಯಲ್ಲಿ ಪೊಲೀಸರಿಂದ ತನಿಖೆ ನಡೆಯಲಿದೆ. ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಬೇಕಾಗುತ್ತದೆ. ಸರಕಾರದವರೇ ನೀಡಿರುವ ವರದಿ ಆಧರಿಸಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿರುವ ಕಾರಣ ಇದೊಂದು ಅಪರೂಪದ ಮತ್ತು ಗಂಭೀರ ಪ್ರಕರಣವಾಗಲಿದೆ. ಈ ದೂರಿನಲ್ಲಿ ಜಿಲ್ಲಾಧಿಕಾರಿಯನ್ನೂ ಸಾಕ್ಷಿದಾರರನ್ನಾಗಿ ಮಾಡಲಾಗಿದೆ ಎಂದಿದ್ದಾರೆ.
ನಮಗೆ ಮಾಹಿತಿ ಬಂದಿಲ್ಲ
ನಮ್ಮ ಅಥವಾ ಟ್ರಸ್ಟ್ ವಿರುದ್ಧ ಕೇಸ್ ದಾಖಲು ಮಾಡಿರುವ ಬಗ್ಗೆ ನಮಗೆ ಇಲ್ಲಿಯ ವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಈ ಹಿಂದೆ ದೇವಸ್ಥಾನದ ಕಡೆಯಿಂದ ಒಂದು ನೋಟಿಸ್ ಬಂದಿದ್ದು, ಅದಕ್ಕೆ ಸೂಕ್ತ ಉತ್ತರ ನೀಡಲಾಗಿದೆ. ಈಗ ಕೋರ್ಟ್‌ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಥವಾ ನಮ್ಮ ವಿರುದ್ಧ ತನಿಖೆಗೆ ಸೂಚಿಸಿರುವ ಬಗ್ಗೆ ಗೊತ್ತಿಲ್ಲ.
– ರಾಘವೇಂದ್ರ ಆಚಾರ್ಯ, ಯಕ್ಷಧರ್ಮ ಬೋಧಿನಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.