ದೇಶಕ್ಕಾಗಿ ಪಕ್ಷ ಎಂಬುದನ್ನು ನೆನಪಿನಲ್ಲಿಡಿ: ಶಾಸಕ ಬೋಪಯ್ಯ


Team Udayavani, Sep 20, 2019, 5:16 AM IST

17-GKL-01

ಗೋಣಿಕೊಪ್ಪಲು: ದೇಶಕ್ಕಾಗಿ ಪಕ್ಷ ಎಂಬುದನ್ನು ನೆನಪಿನಲ್ಲಿಟ್ಟು ಪಕ್ಷದ ಬಲವರ್ಧನೆಗೆ ಕಾರ್ಯಕರ್ತರು ಸಂಘಟಿತರಾಗಬೇಕು. ಬೂತ್‌ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ನೋದಾಯಿಸಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯಅವರು ಬಿಜೆ ಪಿ ಕಾರ್ಯಕರ್ತರಿಗೆ ಕರೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಕುಂಞಂಗಡ ಅರುಣ್‌ ಭೀಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೌಲ್ಯಗಳ ಮತ್ತು ಸಿದ್ಧಾಂತಗಳಿಂದ ಚುನಾವಣೆ ಗೆಲ್ಲುವು ಸಾಧಿಸಬಹುದು. ದೇಶದಲ್ಲಿ ಬದಲಾವಣೆ ತರಲು ಪಕ್ಷದ ಅಗತ್ಯ ಇದೆ. ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷವನ್ನು ಕೌಟುಂಬಿಕ ವಾತಾವರಣವಾಗಿ ನಿರ್ಮಿಸಿದರೆ ಪಕ್ಷ ಸದೃಢವಾಗುತ್ತದೆ. ಈ ಮೂಲಕ ದೇಶಕ್ಕೆ ಉತ್ತಮ ನಾಯಕನನ್ನು ನೀಡಿ ದೇಶದಲ್ಲಿ ಶಾಂತಿ ನೆಲೆಸುವ ವಾತವರಣ ನಿರ್ಮಿಸಬಹುದು. ಇದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿ ಎಂದು ಶಿಕ್ಷಕರ ಕ್ಷೇತ್ರದ ಮಾಜಿ ವಿಧಾನ ಪರಿಷತ್‌ ಸದಸ್ಯ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ತಿಳಿಸಿದರು.

ಸದಸ್ಯತ್ವ ಅಭಿಯಾನದ ಜಿಲ್ಲಾ ಉಸ್ತುವಾರಿ ಶಾಂತೆಯಂದ ರವಿಕುಶಾಲಪ್ಪ ಮಾತನಾಡಿ ರಾಜ್ಯದಲ್ಲಿ ನೂತನವಾಗಿ ಸುಮಾರು 53 ಲಕ್ಷಕ್ಕೂ ಹೆಚ್ಚು ಸದಸ್ಯರು ಭಾರತೀಯ ಜನತಾ ಪಕ್ಷಕ್ಕೆ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಭಿಯಾನದ ಮೂಲಕ 43 ಸಾವಿರ ಸದಸ್ಯರು ಸೇರ್ಪಡೆಗೊಂಡಿದ್ದು, ಅಭಿಯಾನ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ ಕುಶಾಲಪ್ಪನವರು ಪ್ರತಿಯೊಬ್ಬ ಮತದಾರರನ್ನು ಸದಸ್ಯರಾಗಿ ಪರಿವರ್ತಿಸಲು ಕಾರ್ಯಕರ್ತರು ಮುಂದಾಗಬೇಕು. ನಿರ್ಲಕ್ಷ್ಯ, ವೈಯಕ್ತಿಕ ರಾಜಕೀಯ ವೈಮಸ್ಯಗಳನ್ನು ಬಿಟ್ಟು ದೇಶಕ್ಕಾಗಿ ಎಂಬ ಮನೋಭಾವನೆಯನ್ನು ಹೊಂದಿ ಪಕ್ಷವನ್ನು ಸಂಘಟನೆ ಮಾಡುವ ಕಾರ್ಯದಲ್ಲಿ ಪ್ರತಿಯೊಬ್ಬ ಕಾರ್ಯಕರ್ತನ ಮನದಲ್ಲಿ ದೃಢ ಹೊಂದಬೇಕು ಎಂದು ಸಲಹೆ ನೀಡಿದರು.

ಸದಸ್ಯತ್ವ ಅಭಿಯಾನ ಜಿಲ್ಲಾ ಸಂಚಾಲಕ ನಾಪಂಡ ರವಿಕಾಳಪ್ಪ ಮಾತನಾಡಿ ಮುಂದಿನ ಚುನಾವಣೆಗೆ ಸದಸ್ಯತ್ವ ಅಭಿಯಾನದಿಂದ ಪರಿಣಾಮ ಬೀರಲಿದೆ. ಹೆಚ್ಚಿನ ಸದಸ್ಯರು ಹೊಂದಿದಂತೆ ಪಕ್ಷ ಬಲ ಹೊಂದುತ್ತದೆ ಎಂದು ತಿಳಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಕುಂಞಂಗಡ ಅರುಣ್‌ ಭೀಮಯ್ಯ ಮಾತನಾಡಿ ಸದಸ್ಯತ್ವ ಅಭಿಯಾನವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಪ್ರತಿಯೊಬ್ಬ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ತಮಗೆ ನೀಡಿರುವ ಪುಸ್ತಕದಲ್ಲಿ ಯಾವುದೇ ಲೋಪವಿಲ್ಲದಂತೆ ಸದಸ್ಯರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ನಮೂದಿಸಿ ಪುಸ್ತಕಗಳನ್ನು ಶೀಘ್ರವೇ ಹಿಂದಿರುಗಿಸಿ ಎಂದು ಸೂಚಿಸಿದರು.

ರಾಜ್ಯ ಬಿಜೆಪಿ ಸದಸ್ಯೆ ರೀನಾ ಪ್ರಕಾಶ್‌, ತಾಲ್ಲೂಕು ಸದಸ್ಯತ್ವ ಅಭಿಯಾನದ ಸಂಚಾಲಕರಾದ ನೆಲ್ಲೀರ ಚಲನ್‌, ಗುಮ್ಮಟ್ಟಿàರ ಕಿಲನ್‌, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಂಡೇಪಂಡ ಸುಜಾ ಕುಶಾಲಪ್ಪ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನಾ ಚಂಗಪ್ಪ, ತಾಲೂಕು ಕಾರ್ಯದರ್ಶಿ ಲಾಲಾ ಭೀಮಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.