ಕಸ್ತೂರಿರಂಗನ್ ವರದಿ ವಿರೋಧಿ ನಿರ್ಣಯ
Team Udayavani, Apr 14, 2017, 2:07 PM IST
ಸೋಮವಾರಪೇಟೆ: ಬೇಳೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷೆ ಭಾಗ್ಯ ಮಂಜುನಾಥ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಯಿತು.
ಶಾಸಕ ರಂಜನ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ ವರದಿಯನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಲಾಯಿತು.
ಬೇಳೂರಿನ ಬಜೆಗುಂಡಿ ಗ್ರಾಮದಲ್ಲಿ ಸಾವಿರಕ್ಕೂ ಅಧಿಕ ಕುಟುಂಬಗಳು ನೆಲೆಸಿದ್ದು ಅಗತ್ಯ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ಸಾರ್ವಜನಿಕರು ಸಭೆಯಲ್ಲಿ ಅಳಲು ತೋಡಿಕೊಂಡರು.
ವಿಕಾಸ ಗ್ರಾಮ ಯೋಜನೆಯಡಿ ಬಜೆಗುಂಡಿ ಗ್ರಾಮಕ್ಕೆ 1 ಕೋಟಿ ಅನುದಾನ ಒದಗಿಸಲಾಗುವದು. ಈ ಅನುದಾನದಲ್ಲಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸ ಲಾಗುವುದು ಎಂದರು.
ಸಾರ್ವಜನಿಕರಿಗೆ ಸಕಾಲದಲ್ಲಿ ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ವಿತರಿಸಬೇಕು. ಕೆಲ ಅಂಗನವಾಡಿ ಕಾರ್ಯಕರ್ತರು ಚುನಾವಣೆ ಸಂದರ್ಭ ಒಂದು ರಾಜಕೀಯ ಪಕ್ಷದ ಪರ ಪ್ರಚಾರ ನಡೆಸಿ ಮತದಾರರ ಗುರುತಿನ ಚೀಟಿ ವಿತರಿಸುವ ಬಗ್ಗೆ ದೂರುಗಳು ಬರುತ್ತಿದ್ದು, ಇದು ಮುಂದುವರಿದರೆ ಕ್ರಮ ಜರುಗಿಸಲಾಗುವದು ಎಂದು ಸಭೆಯಲ್ಲಿ ಶಾಸಕರು ಎಚ್ಚರಿಕೆ ನೀಡಿದರು.
ಬೇಳೂರಿನಲ್ಲಿ ಕಂಪೆನಿಗಳು ಒತ್ತುವರಿ ಮಾಡಿಕೊಂಡಿರುವ ಪೈಸಾರಿ ಜಾಗ ತೆರವುಗೊಳಿಸಿ, ನಿರ್ವಸತಿಗರಿಗೆ ವಸತಿ ನೀಡಲು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.ಇದಕ್ಕೂ ಮುನ್ನ ಶಾಸಕರು ರೂ. 10 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 12.50 ಲಕ್ಷ ವೆಚ್ಚದ ನೂತನ ಕಾಂಕ್ರೀಟ್ ರಸ್ತೆಗಳನ್ನು ಉದ್ಘಾಟಿಸಿದರು.
ಸಭೆಯಲ್ಲಿ ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯ ಬಿ.ಬಿ. ಸತೀಶ್, ಜಿ.ಪಂ. ಮಾಜೀ ಅಧ್ಯಕ್ಷ ಬಿ. ಶಿವಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ ಚನ್ನಕೇಶವ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು
Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ: 14 ಮಂದಿ ತಪ್ಪಿತಸ್ಥರು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.