ಕೊಡಗು: ಮಳೆ ಆರಂಭಕ್ಕೂ ಮುನ್ನ ಮನೆ ಹಸ್ತಾಂತರಕ್ಕೆ ಕ್ರಮ
Team Udayavani, Mar 3, 2019, 12:30 AM IST
ಮಡಿಕೇರಿ: ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮಳೆಗಾಲ ಆರಂಭವಾಗುವುದಕ್ಕೆ ಮೊದಲು ಮನೆಗಳನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮದೆ ಮತ್ತು ಕರ್ಣಂಗೇರಿಯಲ್ಲಿ 55 ಮನೆಗಳ ನಿರ್ಮಾಣ ಕಾಮಗಾರಿ ಮೇಲ್ಛಾವಣಿ ಹಂತ ತಲುಪಿದೆ ಎಂದು ವಿವರಿಸಿದರು. ಪ್ರಥಮ ಹಂತದಲ್ಲಿ ಮನೆ ಕಳೆದುಕೊಂಡ 840 ನಿರಾಶ್ರಿತರನ್ನು ಗುರುತಿಸಲಾಗಿತ್ತು, ಬಳಿಕ ಕೆಲವರ ಹೆಸರು ಕೈಬಿಟ್ಟಿದೆ ಎಂಬ ದೂರುಗಳು ಕೇಳಿಬಂದು, ಕೈಬಿಟ್ಟಿರುವವರನ್ನು ಸೇರ್ಪಡೆ ಮಾಡಲು ಕ್ರಮ ವಹಿಸಲಾಗಿದೆ. ಈಗಾಗಲೇ ಜಂಬೂರು ಮದೆ, ಕರ್ಣಂಗೇರಿ ಮತ್ತಿತರ ಕಡೆಗಳ ಮನೆ ನಿರ್ಮಾಣ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಮೊದಲ ಆದ್ಯತೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂತ್ರಸ್ತರಿಗೆ ಮನೆ ನಿರ್ಮಿಸಲಾಗುವುದು, ಬಳಿಕ ಸಂತ್ರಸ್ತರು ಸ್ವತಃ ಮನೆ ಕಟ್ಟಿಕೊಳ್ಳಲು ಮುಂದೆ ಬಂದವರಿಗೆ ಹಣ ಪಾವತಿಸುವುದು, ಮೂರನೇ ಆದ್ಯತೆ ಸಂತ್ರಸ್ತರ ಜಾಗದಲ್ಲಿ ಏಜನ್ಸಿಗಳ ಮೂಲಕ ಮನೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇವರಲ್ಲಿ ಈಗಾಗಲೇ ಇನ್ಫೋಸಿಸ್ ಸಂಸ್ಥೆಗೆ ಜಂಬೂರಿನಲ್ಲಿ ಜಾಗ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.