ಕಾರ್ಮಿಕರ ಬೇಡಿಕೆಗಳಿಗೆ ಒತ್ತಾಯ: ಮಾ. 20ರಂದು ಪ್ರತಿಭಟನೆ
Team Udayavani, Mar 19, 2017, 4:37 PM IST
ಮಡಿಕೇರಿ: ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕ ಫಲಾನುಭವಿಗಳಿಗೆ ಎಲ್ಲ ಸೌಲಭ್ಯಗಳನ್ನು ಸಕಾಲದಲ್ಲಿ ನೀಡಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ. 20ರಂದು ಪ್ರತಿಭಟನೆ ನಡೆಸಲು ಸಿಐಟಿಯು ಸಂಯೋಜಿತ ಸಂಘಟನೆ ಕೊಡಗು ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಸಿ. ಸಾಬು, ಕಳೆದ ಅನೇಕ ವರ್ಷ ಗಳಿಂದ ಕಟ್ಟಡ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದರು ಸರಕಾರ ನಿರ್ಲಕ್ಷ್ಯ ಮನೋಭಾವನೆ ತಾಳಿದೆಯೆಂದು ಆರೋಪಿಸಿದರು.
ಸೆಸ್ ರೂಪದಲ್ಲಿ 5 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸುತ್ತಿರುವ ಸರಕಾರ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಕಾರ್ಮಿಕರ ಕಲ್ಯಾಣ ಮಂಡಳಿ ಕೆಲವು ಕೊರತೆಗಳನ್ನು ತುಂಬಲು ಮುಂದಾ ಗಿರುವುದು ಸ್ವಾಗತಾರ್ಹವಾದರು ವಿವಾಹ ಯೋಜನೆ, ಸಲಕರಣೆ, ಪಿಂಚಣಿ, ಮರಣ ನಿಧಿ ಸೇರಿದಂತೆ ಇನ್ನು ಹಲವು ಅನುಕೂಲತೆಗಳನ್ನು ಕಲ್ಪಿಸದೆ ವಿಳಂಬ ಧೋರಣೆ ತೋರುತ್ತಿರುವುದು ಖಂಡನೀಯವೆಂದರು.
ವಿವಾಹ, ಪಿಂಚಣಿ, ವೈದ್ಯಕೀಯ ಸೌಲಭ್ಯಗಳನ್ನು ಯಾವುದೇ ಷರತ್ತುಗಳಿಲ್ಲದೆ ತತ್ಕ್ಷಣ ಬಿಡುಗಡೆ ಮಾಡಬೇಕು, ಕಲ್ಯಾಣ ಮಂಡಳಿಯು ಎಲ್ಲ ಹಂತಗಳಲ್ಲು ಫಲಾನುಭವಿಗಳ ನೋಂದಣಿ, ನವೀಕರಣ, ಸೌಲಭ್ಯಗಳ ವಿತರಣೆಗೆ ವ್ಯವಸ್ಥಿತ ಕಚೆೇರಿಯನ್ನು ತೆರೆಯಬೇಕು, ಕಾರ್ಮಿಕ ಇಲಾಖೆಗಳಲ್ಲಿ ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಅರ್ಹ ಯೋಜನೆಗಳ ಹಣ ಮಂಜೂರಾಗುವಂತೆ ನೋಡಿಕೊಳ್ಳಬೇಕು, ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ ದಿನಾಂಕದಿಂದಲೆ ಹಿಂಬಾಕಿ ಸಹಿತ ಮಾಸಿಕ ಪಿಂಚಣಿ 3 ಸಾವಿರ ರೂ. ಹೆಚ್ಚಿಸಿ ಮಂಜೂರು ಮಾಡಬೇಕು, ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು, ಕಾರ್ಮಿಕರ ಮಕ್ಕಳಿಗಾಗಿ ಜಾರಿಯಲ್ಲಿರುವ ಶೈಕ್ಷಣಿಕ ಸೌಲಭ್ಯಗಳನ್ನು ಅನುಷ್ಠಾನಗೊಳಿಸಬೇಕು, ವಸತಿ ಯೋಜನೆಯನ್ನು ಜಾರಿಗೆ ತರಬೇಕು, ರಾಜ್ಯದಲ್ಲಿ ಶೀಘ್ರ ಮರಳು ನೀತಿಯನ್ನು ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ಮಾ.20 ರಂದು ಜಿಲ್ಲಾಧಿಕಾರಿಗಳ ಕಚೆೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎ.ಸಿ. ಸಾಬು ತಿಳಿಸಿದರು.
ಜಿಲ್ಲೆಯಲ್ಲಿ ಮರಳಿನ ಕೊರತೆಯಿಂದಾಗಿ ಜನಸಾಮಾ ನ್ಯರು ಹಾಗೂ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಅಲ್ಲದೆ, ಎಂ. ಸ್ಯಾಂಡ್ ದುಬಾರಿ ದರಕ್ಕೆ ಮಾರಾಟವಾಗುತ್ತಿದೆ. ಆದ್ದರಿಂದ ಸರ್ಕಾರ ತತ್ಕ್ಷಣ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಮರಳು ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಕೊಡಗು ಜಿಲ್ಲೆಯನ್ನು ಸೂಕ್ಷ್ಮ ಪರಿಸರ ವಲಯ ಪ್ರದೇಶ ವ್ಯಾಪ್ತಿಗೆ ತರುವುದನ್ನು ಸಂಘಟನೆ ವಿರೋಧಿಸಲಿದೆ ಎಂದು ಎ.ಸಿ. ಸಾಬು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಸಿ.ಎ. ಹಮೀದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.