ಕುಷ್ಠ ರೋಗ: ಜನರಲ್ಲಿ ಜಾಗೃತಿ ಮೂಡಿಸಲು ಲಕ್ಷ್ಮೀಪ್ರಿಯ ಕರೆ
Team Udayavani, Jan 23, 2020, 11:57 PM IST
ಮಡಿಕೇರಿ: ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ ಅವರು ತಿಳಿಸಿದರು.
ಜಿ.ಪಂ.ಕಚೇರಿ ಸಭಾಂಗಣದಲ್ಲಿ ನಡೆದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಅನುಷ್ಠಾನದ ಬಗ್ಗೆ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ, ಮಾಧ್ಯಮ ಗಳಲ್ಲಿ, ಕುಷ್ಠ ರೋಗದ ಕುರಿತು ಹೆಚ್ಚಿನ ಪ್ರಚಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಆನಂದ್ ಅವರು ಜನವರಿ, 30ರಿಂದ ಫೆಬ್ರವರಿ, 13 ರ ತನಕ 15 ದಿನಗಳ ಕಾಲ ಜಿಲ್ಲೆಯಾದ್ಯಂತ ಸ್ಪರ್ಶ್ ಕುಷ್ಠ ರೋಗ ಅರಿವು ಆಂದೋಲನ ನಡೆಯಲಿದ್ದು, ಗ್ರಾ.ಪಂ. ಗ್ರಾಮ ಸಭೆಗಳಲ್ಲಿ, ಪ್ರತಿ ಗ್ರಾಮದಲ್ಲಿ, ನಗರ ಪ್ರದೇಶಗಳಲ್ಲಿ ಕುಷ್ಠ ರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ವಿರಾಜಪೇಟೆ ತಾಲೂಕಿನಲ್ಲಿ 2, ಸೋಮವಾರಪೇಟೆ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದ್ದು, ಇವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿ.ಪಂ. ಉಪಕಾರ್ಯದರ್ಶಿ ಗುಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಕೆ. ಮೋಹನ್, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.