Madikeri ಭಾಗದ ಅಪರಾಧ ಸುದ್ದಿಗಳು
Team Udayavani, Sep 21, 2024, 12:53 AM IST
ತಡೆದು ನಿಲ್ಲಿಸಿ ವ್ಯಕ್ತಿ ಮೇಲೆ ಹಲ್ಲೆ; ದೂರು
ಮಡಿಕೇರಿ: ಝೊಮೇಟೊ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ನಂದೀಪ್ ಅವರನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಬಗ್ಗೆ ಪ್ರಕರಣ ದಾಖಲಾಗಿದೆ.
ನಗರದ ದೇಚೂರಿಗೆ ಮೋಟಾರು ಬೈಕಿನಲ್ಲಿ ಫುಡ್ ಡೆಲಿವರಿ ಮಾಡಿ ಮಡಿಕೇರಿ ಕಡೆಗೆ ಬರುತ್ತಿದ್ದಾಗ ದೇಚೂರಿನ ನೀರಿನ ಟ್ಯಾಂಕ್ ಬಳಿ ನಿಂತುಕೊಂಡಿದ್ದ ಮಡಿಕೇರಿಯ ನಿವಾಸಿಗಳಾದ ಸಜಿತ್, ಧನುಶ್ ಹಾಗೂ ಇತರರು ಸೇರಿ ತಡೆದು ನಿಲ್ಲಿಸಿ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾಗಿ ನಂದೀಪ್ ನೀಡಿದ ದೂರಿನಂತೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಸ್ಕೂಟಿ ಢಿಕ್ಕಿ: ಗಾಯ
ಮಡಿಕೇರಿ: ಬಿಳಿಗೈರಿ ಗ್ರಾಮದ ಮೊಹಮ್ಮದ್ ಅರ್ಷದ್ ಅವರು ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಕಾಂಡನಕೊಲ್ಲಿ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಸ್ಕೂಟಿ ಢಿಕ್ಕಿಯಾಗಿದೆ. ಪರಿಣಾಮ ಅವರು ಗಾಯಗೊಂಡಿದ್ದಾರೆ.
ಕರಿಮೆಣಸು ಕಳವು
ಮಡಿಕೇರಿ: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದ ಕಳ್ಳಿಚಂಡ ರಾಬಿನ್ ಅವರಿಗೆ ಸೇರಿದ ತೋಟದ ಶೆಡ್ಡಿನಲ್ಲಿ ಶೇಖರಿಸಿಟ್ಟಿದ್ದ ಅಂದಾಜು 30 ಕೆ.ಜಿ.ಯಷ್ಟು 24 ಚೀಲಗಳ ಪೈಕಿ 17 ಚೀಲಗಳನ್ನು ಕಳವುಗೈಯಲಾಗಿದೆ. ಕಳವಾದ ಕರಿಮೆಣಸಿನ ಅಂದಾಜು ಮೌಲ್ಯ 3,17,500 ರೂ. ಕಳ್ಳರು ಶೆಡ್ಡಿನ ಮೇಲ್ಛಾವಣಿಗೆ ಅಳವಡಿಸಿದ್ದ ಶೀಟನ್ನು ಒಡೆದು ಒಳಗೆ ನುಗ್ಗಿ ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕಳ್ಳತನವನ್ನು ಅವರಲ್ಲಿ ಕೆಲಸ ಮಾಡಿಕೊಂಡಿರುವ ಸುರೇಶ ಹಾಗೂ ಇತರರ ಮೇಲೆ ಸಂಶಯವಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.