Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ
ವಿವಾಹ ನಿಶ್ಚಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ...
Team Udayavani, Dec 27, 2024, 7:23 PM IST
ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಡಿ.24ರ ಸಂಜೆ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದ ನಿವಾಸಿ ದಿವಂಗತ ಪ್ರಕಾಶ್ ಮತ್ತು ಜಯ ದಂಪತಿ ಪುತ್ರ ದಿವಿನ್(28) ಗಂಭೀರವಾಗಿ ಗಾಯಗೊಂಡಿರುವ ಯೋಧ.
ದಿವಿನ್ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಭಾರತೀಯ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ದಿವಿನ್ ತಾಯಿ ಜಯ ಅವರು ಗುರುವಾರ ಸಂಜೆ ಶ್ರೀನಗರಕ್ಕೆ ತೆರಳಿದ್ದಾರೆ. ಇನ್ನಷ್ಟೇ ದಿವಿನ್ ಆರೋಗ್ಯದ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ದಿವಿನ್ ತನ್ನ ತಾಯಿಗೆ ಏಕೈಕ ಆಸರೆಯಾಗಿದ್ದು, 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.