ಮಡಿಕೇರಿಯಲ್ಲಿ ದನಗಳ ಅಕ್ರಮ ಸಾಗಾಟ: ಇಬ್ಬರ ಸೆರೆ, 7 ದನ ರಕ್ಷಣೆ
Team Udayavani, Jan 15, 2023, 12:56 AM IST
ಮಡಿಕೇರಿ: ಗೋವುಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಇಬ್ಬರನ್ನು ಪೆರುಂಬಾಡಿ ಗ್ರಾಮದಲ್ಲಿ ಬಂಧಿಸಿರುವ ಪೊಲೀಸರು ಒಂದು ಕರು ಸೇರಿದಂತೆ ಒಟ್ಟು ಏಳು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಕೈಯರಾಳಂ ಗ್ರಾಮದ ಎನ್.ಪಿ. ಸೈನುದ್ದೀನ್ (38) ಮತ್ತು ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದ ಪರ್ವಿಜ್ ಬಾಷ (35) ಬಂಧಿತರು.
ಪಿರಿಯಾಪಟ್ಟಣದಿಂದ ಲಾರಿಯಲ್ಲಿ ಗೋವುಗಳನ್ನು ತುಂಬಿ ಕೊಂಡು ಗೋಣಿಕೊಪ್ಪಲು, ಪೆರುಂಬಾಡಿ ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದರು. ಪೆರುಂಬಾಡಿ ತಪಾಸಣೆ ಕೇಂದ್ರದಲ್ಲಿ ಪರಿಶೀಲನೆ ಮಾಡಿದಾಗ ಅಕ್ರಮ ಸಾಗಾಟ ಪತ್ತೆಯಾಯಿತು. ಬಂಧಿತರ ವಿರುದ್ಧ ವೀರಾಜಪೇಟೆ ನಗರ ಪೊಲೀಸರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೀರಾಜಪೇಟೆ ನಗರ ಠಾಣಾಧಿಕಾರಿ ಶ್ರೀàಧರ್ ಮತ್ತು ಎಎಸ್‌ಐ ನಾಣಿಯಪ್ಪ ಹಾಗೂ ಸಿಬಂದಿ ಸತೀಶ್, ಸುಬ್ರಮಣಿ, ಮಲ್ಲಿಕಾರ್ಜುನ ಮತ್ತು ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.