ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ
Team Udayavani, Sep 30, 2019, 1:24 AM IST
ಮಡಿಕೇರಿ: ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ರವಿವಾರ ಆರಂಭಗೊಂಡಿದೆ. ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ.
ಕರಗೋತ್ಸವ ಆರಂಭದ ಸಂದರ್ಭ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾಅಚ್ಚಯ್ಯ, ಜಿಲ್ಲಾ ಧಿ ಕಾ ರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸುಮನ್ ಡಿ. ಪನ್ನೇಕರ್ ಮೊದಲಾ ದ ವ ರು ಹಾಜರಿದ್ದರು.
ಕರಗ ಉತ್ಸವಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತಿದೆ. ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷ.
ಸೆ. 30ರಿಂದ ಅ. 3ರ ವರೆಗೆ ನಗರ ಪ್ರದಕ್ಷಿಣೆ ಮಾಡಲಿರುವ ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ರಾಜಬೀದಿಯಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ. ಅ. 9ರಂದು ಬೆಳಗ್ಗೆ ಜಾವ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ಕರಗಗಳು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.