ಮಡಿಕೇರಿ: ಮಳೆ ಮುನ್ನೆಚ್ಚರಿಕೆ ಕ್ರಮದ ಚರ್ಚೆ
ಜಿಲ್ಲಾ ವಿಪತ್ತು ನಿರ್ವಹಣ ಸಭೆ
Team Udayavani, Jul 12, 2019, 5:09 AM IST
ಮಡಿಕೇರಿ :ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೆ ಕಳೆದೆರಡು ದಿನಗಳಿಂದ ಬಲವಾದ ಗಾಳಿ ಬೀಸುತ್ತಿದ್ದು, ಜೊತೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ನಡುವೆ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ವಿಪತ್ತಿನಿಂದ ಸಂಭವಿಸಬಹುದಾದ ಹಾನಿ ಕಡಿಮೆಗೊಳಿಸುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ತುರ್ತಾಗಿ ಕೊಡಗು ಜಿಲ್ಲೆಗೆ ಸಮಗ್ರ ಪುನರ್ ನಿರ್ಮಾಣ, ಹಾನಿ ತಗ್ಗಿಸುವ ಕ್ರಮಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಲು ಮತ್ತು ರಚನಾತ್ಮಕ ಯೋಜನೆ ರೂಪಿಸಲು ವಿಷಯ ತಜ್ಞರು, ಸ್ಥಳೀಯರ ಹಾಗೂ ಸಂಬಂಧಪಟ್ಟವರ ಜೊತೆಗೂಡಿಸಿ, ಕಾರ್ಯಾಗಾರವನ್ನು ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜೊತೆಗೆ ಶಾಲೆ, ಆಸ್ಪತ್ರೆಗಳಲ್ಲಿ ವಿಪತ್ತು ನಿರ್ವಹಣೆಯ ತರಬೇತಿ ಮತ್ತು ಯೋಜ ನೆಗಳನ್ನು ಜಾರಿಗೊಳಿಸಲು ಚರ್ಚಿ ಸಲಾಯಿತು.
ಗ್ರಾಮೀಣ ಮಟ್ಟದಲ್ಲಿ ರೂಪಿಸುತ್ತಿರುವ ಗ್ರಾಮೀಣ ವಿಪತ್ತು ನಿರ್ವಹಣಾ ಯೋಜನೆಯನ್ನು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಜಿಲ್ಲೆಯ ಸೂಕ್ಷ್ಮ ಗ್ರಾಮ ಪಂಚಾಯತ್‌ಗಳಲ್ಲಿ ಪ್ರಥಮ ಹಂತದಲ್ಲಿ ಇತರ ಗ್ರಾಮ ಪಂಚಾಯತ್‌ಗಳಿಗೆ ವಿಸ್ತರಿಸಿ ಗ್ರಾಮೀಣಾ ಭಿವೃದ್ಧಿಯಲ್ಲಿ ತೊಡಗಿಸಿ ಕೊಳ್ಳುವಂತೆ ಚರ್ಚಿಸಲಾಯಿತು. ಇದರೊಂದಿಗೆ ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ಮಹಿಳಾ, ಮಕ್ಕಳ, ಸಮುದಾಯ ಕೇಂದ್ರಿತ ಮತ್ತು ವಿವಿಧ ತರಬೇತಿಗಳನ್ನು ಆಯೋಜಿಸಲು ಸಭೆ ಯಲ್ಲಿ ತೀರ್ಮಾನಿಸಲಾಯಿತು. ವಿಪತ್ತು ಪರಿಹಾರವನ್ನು ಸುಸೂತ್ರ ವಾಗಿ ಅರ್ಹರಿಗೆ ತಲುಪಿಸಲು ಸಹಕಾರವಾಗುವಂತೆ ತಾಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಯ್ದೆ ಮತ್ತು ಪರಿಹಾರ ಲಭ್ಯತೆಯ ಬಗ್ಗೆ ತರಬೇತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರಾಧಿಕಾರದ ಸದಸ್ಯರಾದ ಜಿ.ಪಂ.ಸಿಇಒ ಕೆ.ಲಕ್ಷ್ಮೀ ಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸ್ನೇಹಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ಆರ್‌ಸಿಎಚ್. ಅಧಿಕಾರಿ ಡಾ| ಆನಂದ್, ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್ ಶ್ರೀಕಂಠಯ್ಯ, ಯುನಿಸೆಫ್ ಸಮಾಲೋಚಕರಾದ ಪ್ರಭಾತ್ ಕಲ್ಕೂರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.