ಬೆಂಬಲ ಬೆಲೆಯಡಿ ಭತ್ತ ಖರೀದಿ: ಜಿ.ಪಂ. ಅಧ್ಯಕ್ಷರ ಸೂಚನೆ
Team Udayavani, Dec 13, 2018, 12:37 PM IST
ಮಡಿಕೇರಿ: ರೈತರು ಮುಂಗಾರುನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಕೋಟೆ ಹಳೇ ಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿ.ಪಂ.ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಭತ್ತ ಬೆಳೆಯುವುದು ಕಷ್ಟಸಾಧ್ಯವಾಗಿದೆ. ಅಂತದರಲ್ಲಿ ಬೆಳೆದಿರುವ ಭತ್ತವನ್ನು ಬೆಂಬಲ ಬೆಲೆಯಡಿ ಖರೀದಿ ಮಾಡದಿದ್ದರೆ ಹೇಗೆ ಎಂದು ಅವರು ಪ್ರಶ್ನಿಸಿದರು.
ಆಹಾರ ಇಲಾಖೆಯಲ್ಲಿ ಕೆಂಪು ಭತ್ತ ಖರೀದಿ ಬಗ್ಗೆ ಪ್ರಸ್ತಾವಲ್ಲ ಎಂದು ಆಹಾರ ಇಲಾಖೆ ಉಪ ನಿರ್ದೇಶಕರು ತಿಳಿಸಿದರು. ಹಾಗಾದರೆ ಕೆಂಪು ಅಕ್ಕಿ ಬೆಳೆದವರ ಗತಿಯೇನು ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕಾರ್ಯಪ್ಪ ಅವರು ಪ್ರಶ್ನಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲೂ ವೈದ್ಯರು ಮತ್ತು ಶ್ರುಶ್ರೂಷಕರು ಕಾರ್ಯ ನಿರ್ವಸಬೇಕು. ಗೋಣಿಕೊಪ್ಪ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು ಇರುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಿ.ಕೆ.ಬೋಪಣ್ಣ ಅವರು ಗಮನ ಸೆಳೆದರು. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಕಾರ್ಯಪ್ಪ ಅವರು ಸೂರ್ಲಬ್ಬಿ ಆಸ್ಪತ್ರೆಯ ಸಮಸ್ಯೆಯನ್ನು ಸರಿಪಡಿಸಬೇಕು. ಹಾಗೆಯೇ ಜಿಲ್ಲೆಯ ನಾನಾ ಕಡೆಗಳಲ್ಲಿ ಖಾಲಿ ಇರುವ ವೈದ್ಯರನ್ನು ನಿಯೋಜಿಸುವಂತೆ ಅವರು ತಿಳಿಸಿದರು. ಕೃ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರೋಜಮ್ಮ ಅವರು ಶನಿವಾರಸಂತೆ ಆಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನಿಯೋಜಿಸುವಂತೆ ಅವರು ಸಲಹೆ ಮಾಡಿದರು.
ನೋಂದಣಿ ಅವಕಾಶ
ಸರಕಾರ ಈಗಾಗಲೇ ಭತ್ತ ಖರೀದಿಸುವ ಸಂಬಂಧ ನೋಂದಣಿಗೆ ಅವಕಾಶ ಮಾಡಿದೆ. ಆದ್ದರಿಂದ ಕೂಡಲೇ ಭತ್ತ ಖರೀದಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿ.ಪಂ.ಅಧ್ಯಕ್ಷರು ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಆಹಾರ ಇಲಾಖೆ ಉಪ ನಿರ್ದೇಶಕರಾದ ಸದಾಶಿವಯ್ಯ ಭತ್ತ ಖರೀದಿ ಸಂಬಂಧಿಸಿದಂತೆ ಈಗಾಗಲೇ ನಗರದ ಎಪಿಎಂಸಿ ಮತ್ತು ಕೆಎಫ್ಸಿಎಸ್‌ಸಿ, ಕುಶಾಲನಗರದ ಎಪಿಸಿಎಂಎಸ್ ಮತ್ತು ಗೋಣಿಕೊಪ್ಪದ ಆರ್‌ಎಂಸಿ. ಯಾರ್ಡ್ ಬಳಿಯ ಎ.ಪಿ.ಸಿ.ಎಂ. ಎಸ್‌ಗಳಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ಮೊಬೈಲ್ ಫೋನ್ ಕಳವು: ಆರೋಪಿ ಸೆರೆ
Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ
Kodagu: ಬ್ಯಾಂಕ್ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ
Madikeri: ಸೋಲಾರ್ ಅಂಗಡಿಯಿಂದ 2.16 ಲಕ್ಷ ರೂ. ಕಳವು: ಆರೋಪಿ ಬಂಧನ
Madikeri: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು