
ಕೊಡಗು: ಮತ್ತೆ ಅರಳಿತು ಕಮಲ
Team Udayavani, May 16, 2018, 6:00 AM IST

ಮಡಿಕೇರಿ: ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ನಗು ಬೀರುವ ಮೂಲಕ ಬಿಜೆಪಿಯ ಭದ್ರಕೋಟೆ ಕೊಡಗಿನಲ್ಲಿ ಪಕ್ಷ ಸುಭದ್ರವಾಗಿದೆ ಎನ್ನುವುದನ್ನು ಕಾರ್ಯಕರ್ತರು ಮತ್ತೆ ಸಾಬೀತು ಪಡಿಸಿದ್ದಾರೆ. ಮಡಿಕೇರಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಜಿಲ್ಲೆ ಕಮಲದ ಭದ್ರಕೊಟೆ ಎನ್ನುವುದನ್ನು ಮತ್ತೂಮ್ಮೆ ನಿರೂಪಿಸಿದೆ. ಬಿಜೆಪಿ ಭದ್ರಕೋಟೆ ಭೇದಿಸುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಯತ್ನಗಳು ಸಂಪೂರ್ಣವಾಗಿ ವಿಫಲವಾಗಿವೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎಂ.ಪಿ. ಅಪ್ಪಚ್ಚು ರಂಜನ್ ಅವರು ಗೆಲುವು ಸಾಧಿಸುವ ಮೂಲಕ ಸತತ 5ನೇ ಬಾರಿ ಹಾಗೂ ವೀರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು ಗೆಲುವು ಸಾಧಿಸುವ ಮೂಲಕ 4ನೇ ಬಾರಿ ವಿಧಾನಸಭೆಯ ಮೆಟ್ಟಿಲೆೇರಿದ ಸಾಧನೆ ಮಾಡಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆಯ ಬಳಿಕ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿರುವುದು ಗಮನಾರ್ಹ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಂ.ಪಿ. ಅಪ್ಪಚ್ಚು ರಂಜನ್ 70,631 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಎದುರಾಳಿ ಬಿ.ಎ. ಜೀವಿಜಯ 54,616 ಮತಗಳನ್ನಷ್ಟೆ ಪಡೆಯಲು ಶಕ್ತರಾಗುವ ಮೂಲಕ 16,015 ಮತಗಳ ಅಂತರದ ಸೋಲನ್ನು ಕಾಣುವಂತಾಯಿತು. ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ. ಚಂದ್ರಕಲಾ 38,219 ಮತಗಳನ್ನು ಪಡೆಯುವ ಮೂಲಕ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟಕೊಂಡರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.