Madikeri: ಆನೆಕಾಡು ಬಳಿ ಭೀಕರ ಅಪಘಾತ; ತಂದೆ, ಮಗಳು ಸಾವು

Team Udayavani, Jan 17, 2024, 11:17 PM IST

Madikeri: ಆನೆಕಾಡು ಬಳಿ ಭೀಕರ ಅಪಘಾತ; ತಂದೆ, ಮಗಳು ಸಾವು

ಮಡಿಕೇರಿ: ಮಾರುತಿ ಆಮ್ನಿ ಮತ್ತು ಬೊಲೆರೋ ಜೀಪು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಬುಧವಾರ ಸಂಭವಿಸಿದೆ.

ಆಮ್ನಿ ಚಲಾಯಿಸುತ್ತಿದ್ದ ಮಾಜಿ ಯೋಧ, ಬಸವನಹಳ್ಳಿ ನಿವಾಸಿ ರಾಜೇಶ್‌ ದೇವಯ್ಯ (38) ಹಾಗೂ ಅವರ ಪುತ್ರಿ ನ್ಯಾನ್ಸಿ ಬೊಳ್ಳಮ್ಮ (3) ಮೃತಪಟ್ಟವರು.

ರಾಜೇಶ್‌ ದೇವಯ್ಯ ಮೂಲತಃ ಕಾಲೂರು ಗ್ರಾಮದವರಾಗಿದ್ದು, ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ನೆಲೆಸಿದ್ದರು. ಮಡಿಕೇರಿಯಲ್ಲಿ ತಮ್ಮ ನಾದಿನಿಯ ಪುತ್ರಿಯ ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಸವನಹಳ್ಳಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಆಮ್ನಿ ವಾಹನಕ್ಕೆ ಬೋಯಿಕೇರಿಗೆ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿರಿಯಾಪಟ್ಟಣ ತಾಲೂಕಿನ ಚನಕಲ್‌ ಕಾವಲ್‌ನ ಬೊಲೆರೋ ಜೀಪು ಢಿಕ್ಕಿಯಾಗಿದೆ. ರಾಜೇಶ್‌ ಪತ್ನಿ ಸ್ಮಿತಾ ತಮ್ಮ ದ್ವಿಚಕ್ರ ವಾಹನದಲ್ಲಿ ಆಮ್ನಿಯನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ.

ರಾಜೇಶ್‌ ಸ್ಥಳದಲ್ಲೇ ಮೃತಪಟ್ಟರೆ, ನ್ಯಾನ್ಸಿ ಮಡಿಕೇರಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಆಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೊಲೆರೋ ಚಾಲಕ ಅರುಣ್‌, ಕಾರ್ಮಿಕ ಮಹಿಳೆಯರಾದ ಜಯಲಕ್ಷ್ಮೀ ಹಾಗೂ ನೀಲಮ್ಮ ಅವರಿಗೂ ಗಂಭೀರ ಗಾಯಗಳಾಗಿದ್ದು, ಕುಶಾಲನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.