Madikeri ಮನೆಯಂಗಳದಲ್ಲೇ ಕಾಡಾನೆಗಳ ಓಡಾಟ
Team Udayavani, Nov 26, 2023, 11:35 PM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮಿತಿ ಮೀರಿದೆ. ಕಾಡಾನೆಗಳ ಹಿಂಡು ಕಾಡಿನಿಂದ ತೋಟ, ಇದೀಗ ತೋಟದಿಂದ ಮನೆಯಂಗಳಕ್ಕೆ ಬಂದು ಉಪಟಳ ನೀಡಲು ಆರಂಭಿಸಿದೆ.
ವಿರಾಜಪೇಟೆ ತಾಲೂಕಿನ ಬೇಟೋಳ್ಳಿ ಗ್ರಾಮದಲ್ಲಿ ಸುಮಾರು ನಾಲ್ಕು ಕಾಡಾನೆಗಳು ಕಾಣಿಸಿಕೊಂಡಿವೆ. ಕಳೆದ ಮೂರು ದಿನಗಳಿಂದ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿರುವ ಕಾಡಾನೆಗಳು ಸ್ಥಳೀಯ ಡಿಎಚ್‌ಎಸ್ ಮಿಲ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ನಿಲ್ಲಿಸಿದ್ದ ಕಾರುಗಳ ಪಕ್ಕದಲ್ಲೇ ಸ್ವಲ್ಪ ಹೊತ್ತು ಅಡ್ಡಾಡಿದ ಎರಡು ಕಾಡಾನೆಗಳು ಯಾವುದೇ ಹಾನಿ ಮಾಡದೆ ಮರಳಿದೆ. ಆನೆಗಳ ಹಿಂಡು ಇಲ್ಲಿನ ಶ್ರೀ ಭದ್ರಕಾಳಿ ದೇವಸ್ಥಾನದ ಸಮೀಪದಲ್ಲೇ ಇದೆ ಎಂದು ಗ್ರಾಮಸ್ಥರು ಭಯ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಸಿಬಂದಿ ಕಾಡಾನೆಗಳನ್ನು ಕಾಡಿಗಟ್ಟುವ ಪ್ರಯತ್ನ ಮಾಡಿದರು. ಸಾರ್ವಜನಿಕರು ಸಂಚರಿಸುವಾಗ ಎಚ್ಚರದಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಾಡಾನೆ ಹಾವಳಿ ತಡೆಗೆ ಸರಕಾರ ಶಾಶ್ವತ ಪರಿಹಾರ ಸೂಚಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.