Madikeri: ಪತಿ, ಪತ್ನಿ ಕಲಹ ಕೊಲೆಯಲ್ಲಿ ಅಂತ್ಯ
Team Udayavani, Sep 12, 2023, 12:19 AM IST
ಮಡಿಕೇರಿ: ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಲದ ರಾಧಿಕಾ (40) ಮೃತ ಮಹಿಳೆ.
ಅದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿ ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ಪತಿ ರೋಷನ್ ರಾಧಿಕಾಳ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತಾದರು ಚಿಕಿತ್ಸೆ ಫಲಿಸದೆ ಮೃತಪಟ್ಟರು.
ಆರೋಪಿ ರೋಷನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.