Madikeri: ಕೋಟ್ಯಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣ ಭೇದಿಸಿದ ಕೊಡಗು ಪೊಲೀಸರು

Team Udayavani, Oct 2, 2024, 8:09 PM IST

madikeri

ಮಡಿಕೇರಿ: ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣವನ್ನು ಭೇದಿಸಿರುವ ಕೊಡಗು ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿ, ಕೋಟ್ಯಂತರ ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು ಗ್ರಾಮದ ರಿಯಾಜ್(44), ಕಾಸರಗೋಡಿನ ಮೆಹರೂಫ್(37) ಹಾಗೂ ರವೂಫ್(28) ಬಂಧಿತ ಆರೋಪಿಗಳು.

ಇವರ ಬಳಿಯಿಂದ ಸುಮಾರು 3 ಕೋ.ರೂ.ಬೆಲೆ ಬಾಳುವ 3.31 ಕೆ.ಜಿ ಹೈಡ್ರೋ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಹೈಡ್ರೋ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಅಂತಾರಾಷ್ಟ್ರೀಯ ವ್ಯವಸ್ಥಿತ ಜಾಲವೊಂದನ್ನು ಕೊಡಗು ಪೊಲೀಸ್ ಅಧಿಕಾರಿಗಳು ಪತ್ತೆ ಹಚ್ಚಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸುದ್ದಿಗೋಷ್ಠಿಯಲ್ಲಿ ಹೆಮ್ಮೆ ವ್ಯಕ್ತಪಡಿಸಿದರು.

ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿರುವ ಕೇರಳ ಮೂಲದ ಮಹಮ್ಮದ್ ಅನೂಫ್ ಎಂಬಾತ ಕೇರಳದ ಕಾಸರಗೋಡಿನ ಮೆಹರೂಫ್, ರವೂಫ್ ಹಾಗೂ ಕೊಡಗಿನ ಬಂಧಿತ ಯುವಕರ ಮೂಲಕ ಭಾರತ ಮತ್ತು ದುಬೈಗೆ ಹೈಡ್ರೋ ಗಾಂಜಾವನ್ನು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂದು ಎಸ್‌ಪಿ ತಿಳಿಸಿದರು.

ಆರೋಪಿ ಯಾಹ್ಯಾ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೈಡ್ರೋ ಗಾಂಜಾವನ್ನು ತಂದು ನಂತರ ಅಲ್ಲಿಂದ ನಾಸೀರುದ್ದೀನ್, ಆಕನಾಸ್, ಅಜ್ಜಲ್, ರಿಯಾಜ್ ಹಾಗೂ ವಾಜೀದ್ ಅವರೊಂದಿಗೆ ಕಾರಿನಲ್ಲಿ ಗೋಣಿಕೊಪ್ಪದ ಬೆಳ್ಳಿಯಪ್ಪ ರೆಸಿಡೆನ್ಸಿಯೊಂದಕ್ಕೆ ಬಂದು ತಂಗುತ್ತಾರೆ. ಕೇರಳದ ಮೆಹರೂಫ್ ನ ಮುಂದಿನ ನಿರ್ದೇಶನಕ್ಕಾಗಿ ಕಾಯುತ್ತಿದ್ದ ತಂಡ ಒಂದೇ ಸ್ಥಳದಲ್ಲಿ ಇದ್ದರೆ ಯಾರಿಗಾದರೂ ಅನುಮಾನ ಬರುತ್ತದೆ ಎನ್ನುವ ಕಾರಣಕ್ಕೆ ಸ್ಥಳ ಬದಲಾವಣೆಗೆ ಮುಂದಾಗುತ್ತಾರೆ.

ವಿರಾಜಪೇಟೆಯಿಂದ ಮಡಿಕೇರಿಗೆ ಬರುವಾಗ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸ್ ಅಧಿಕಾರಿಗಳು ವಿರಾಜಪೇಟೆ ರಸ್ತೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.

ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಆರೋಪಿ ಆರ್ಜಿ ಗ್ರಾಮದ ರವೂಫ್ ನನ್ನು ಬೆಂಗಳೂರಿನ ಸಂಜಯನಗರ ಲೇಔಟ್ ನಿವಾಸದಲ್ಲಿ ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಯಾದ ಕಾಸರಗೋಡಿನ ಮೆಹರೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ಗೆ ಪರಾರಿಯಾಗಲು ಯತ್ನಿಸಿದಾಗ ಕೇರಳದ ಎರ್ನಾಕುಲಂ ಜಿಲ್ಲೆಯ ಎಸ್.ಪಿ. ವೈಭವ್ ಸಕ್ಸೇನಾ ಹಾಗೂ ಕೊಚ್ಚಿನ್ ಏರ್ ಪೋರ್ಟ್ ಇಮಿಗ್ರೇಶನ್ ಅಧಿಕಾರಿಯಾದ ಕೃಷ್ಣರಾಜ್ ಅವರ ಸಹಕಾರದಿಂದ ಬಂಧಿಸಲಾಯಿತು ಎಂದು ಎಸ್‌ಪಿ ವಿವರಿಸಿದರು.

ಅಧಿಕ ನಶೆ
ಇದೊಂದು ಅಪರೂಪದ ಪ್ರಕರಣವಾಗಿದ್ದು, ಹೈಡ್ರೋ ಗಾಂಜಾ ಸಾಮಾನ್ಯ ಗಾಂಜಾಕ್ಕಿಂತ ಹೆಚ್ಚು ನಶೆಯನ್ನು ಕೊಡುವ ಮಾದಕ ದ್ರವ್ಯವಾಗಿದೆ ಮತ್ತು ದುಬಾರಿ ಬೆಲೆಯದ್ದಾಗಿದೆ. ಇದನ್ನು ವಿಭಿನ್ನ ರೀತಿಯ ಕೃತಕ ಬೆಳಕನ್ನು ಉಪಯೋಗಿಸಿ ಹವಾ ನಿಯಂತ್ರಿತ ಕೊಠಡಿಯಲ್ಲಿ ಬೆಳೆಸಲಾಗುತ್ತದೆ ಎಂದು ಎಸ್‌ಪಿ ಕೆ.ರಾಮರಾಜನ್ ಮಾಹಿತಿ ನೀಡಿದರು.

ಈ ಪ್ರಕರಣವನ್ನು ಕೊಡಗು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ಕೆ.ಎಸ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ರವಿಕುಮಾರ್ ಎಸ್. ಹಾಗೂ ಮಡಿಕೇರಿ ನಗರ ವೃತ್ತ ನಿರೀಕ್ಷಕ ರಾಜು ಪಿ.ಕೆ. ಅವರ ನೇತೃತ್ವದ ತಂಡ ಸತತ 72 ಗಂಟೆಗಳ ಕಾಲ ತನಿಖೆಯಲ್ಲಿ ತೊಡಗಿಸಿಕೊಂಡು ಯಶಸ್ವಿಯಾಗಿ ಬೇಧಿಸಿದೆ.

ಡಿ.ಸಿ.ಆರ್.ಬಿ ಘಟಕದ ಪೊಲೀಸ್ ನಿರೀಕ್ಷಕ ಮೇದಪ್ಪ ಐ.ಪಿ, ಡಿವೈಎಸ್‌ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಯೋಗೇಶ್, ನಿರಂಜನ್, ಶರತ್ ರೈ, ರವಿಕುಮಾರ್, ನಾಪೋಕ್ಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ್, ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಮುರುಳಿ, ನವೀನ್ ಜಿಲ್ಲಾ ಪೊಲೀಸ್ ಘಟಕದ ತಾಂತ್ರಿಕ ಸಿಬ್ಬಂದಿಗಳಾದ ರಾಜೇಶ್ ಸಿ.ಕೆ ಹಾಗೂ ಪ್ರವೀಣ್ ಕುಮಾರ್ ಕಾರ್ಯಾಚರಣೆ ನಡೆಸಿದರು.

ಟಾಪ್ ನ್ಯೂಸ್

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದಿಗೆ ತಡೆಯಾಜ್ಞೆ

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.