ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ: ಡಾ| ಸುಮನ್‌


Team Udayavani, Jan 14, 2019, 7:40 AM IST

14-january-13.jpg

ಮಡಿಕೇರಿ: ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂ ಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿ ಗಳು ಉತ್ತಮ ಪ್ರಜೆಗಳಾಗಿ ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಜಿಲ್ಲಾ ಪೋಲಿಸ್‌ ವರಿಷ್ಠಧಿಕಾರಿ ಡಾ.ಸುಮನ್‌ ಪೆಣ್ಣೇಕರ್‌ ಹೇಳಿದರು. ಅವರು ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ನ ಆವರಣದಲ್ಲಿ ಯುವ ಸಪ್ತಾಹದ ಅಂಗವಾಗಿ ನಡೆ‌ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿವೇಕಾನಂದರು ಭಾರತ ದೇಶ ಕಂಡ ಅದ್ಭುತ ವ್ಯಕ್ತಿಯಾಗಿದ್ದು, ಅವರು ನೀಡಿರುವ ಸಂದೇಶಗಳು ಇಂದಿಗೂ ಯುವ ಜನರನ್ನು ಪ್ರೇರೆಪಿಸುತ್ತಿದೆ. ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಆದರ್ಶ ವ್ಯಕ್ತಿಗಳಾಗಿ ಅಭ್ಯುದಯವನ್ನು ಸಾಧಿಸಬೇಕೆಂದರು.

ಪ್ರಸ್ತುತ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ವಿಷಾದಿಸಿದ ಎಸ್‌ಪಿ ಸುಮನ್‌, ವಿದ್ಯಾರ್ಥಿಗಳು ಮೊಬೈಲ್‌, ಟಿವಿ, ಗೇಮ್ಸ್‌ಗಳಲ್ಲಿ ಕಾಲಹರಣ ಮಾಡುವುದನ್ನು ಬಿಟ್ಟು ಪೋಷಕರೊಂದಿಗೆ ಬೆರೆತು ಬಂಧುಬಳಗ, ಸ್ನೇಹಿತರು, ಕ್ರೀಡೆ ಹಾಗೂ ಓದಿನ ಕಡೆ ಹೆಚ್ಚು ಗಮನ ಹರಿಸುವ ಮೂಲಕ ಶಿಸ್ತಿನ ಜೀವನ ನಡೆಸಬೇಕೆಂದರು. ಧನಂಜಯ ಅಗೋಳಿಕಜೆ ಅವರು ‘ವಿವೇಕಾನಂದರ ಆದರ್ಶ ತತ್ವಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಸ್ವಾಮೀ ವಿವೇಕಾನಂದರು ತಮ್ಮ ಜ್ಞಾನದಿಂದ ಜಗತ್ತನ್ನು ಗೆದ್ದು ಬಂದವರು. ಒಳ್ಳೆಯ ಉದ್ದೇಶ ಹಾಗೂ ಸತ್ಯತೆಯಿಂದ ಅವರು ದೇಶವನ್ನು ಗೆದ್ದಿದ್ದಾರೆ ಎಂದರು.

ಸ್ಪರ್ಧಾ ವಿಜೇತರು
ಸಮಾರಂಭದ ಪ್ರಯುಕ್ತ ನಡೆದ ಚಿತ್ರಕಲೆ ಸ್ಪರ್ಧೆಯಲ್ಲಿ ಆರ್‌.ವಿ. ಮದನ್‌ ಪ್ರಥಮ (ವಾಣಿಜ್ಯ ವಿಭಾಗ), ದ್ವಿತೀಯ ಪ್ರಿಯಧನ್ಯ, ತೃತೀಯ ಆರ್‌. ಶರತ್‌ ಪಡೆದು ಕೊಂಡರೆ, ಪ್ರಬಂಧ ಸ್ಪರ್ಧೆಯಲ್ಲಿ ಟಿ.ಪಿ. ಜಶ್ಮಿತ ಪ್ರಥಮ (ವಾಣಿಜ್ಯ ವಿಭಾಗ), ದ್ವೀತಿಯ ಜಿ. ಸಂಗೀತ, ತೃತೀಯ ಬಹುಮಾನ ಬಿ.ಎಸ್‌.ಅನುಷಾ ಪಡೆದುಕೊಂಡಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್‌ ಕಾರ್ಯಪ್ಪ, ಮಡಿಕೇರಿ ಸ. ಪ ಪೂ.ಕಾಲೇಜಿನ ಪ್ರಾಚಾರ್ಯ ವಿಜಯ್‌, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕು ಮಾರ್‌, ತಾಲೂಕು ಅಧ್ಯಕ್ಷ ನವೀನ್‌ ದೇರಳ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.